ಗ್ಯಾರೇಜ್ ನಲ್ಲಿ ನಿಂತಿದ್ದ ಮಾಲಕ ಮೇಲೆ ಬಸ್ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಸಾವು

Thursday, March 14th, 2024
dayananda-shetty

ಉಡುಪಿ : ಬಸ್ ಮಾಲಕನೋರ್ವ ತನ್ನ ಸ್ವಂತ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಯಾನಂದ ಶೆಟ್ಟಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ದಯಾನಂದ ಶೆಟ್ಟಿ ಅವರ ಬಸ್ ಅನ್ನು ರಿಪೇರಿಗಾಗಿ ಅತ್ರಾಡಿಯ ಗ್ಯಾರೇಜ್​ಗೆ ಕೊಂಡೊಯ್ಯಲಾಗಿತ್ತು. ಹೀಗಾಗಿ ತಮ್ಮ ಬಸ್​ನ ದುರಸ್ತಿ ಕಾರ್ಯ ನೋಡಿಕೊಳ್ಳಲು ಸ್ವತಃ ದಯಾನಂದ ಅವರೇ ಗ್ಯಾರೇಜ್​ಗೆ ಹೋಗಿದ್ದರು. ಅದರಂತೆ ಬಸ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದ […]

ಹೊಟೇಲೊಂದರ ಉದ್ಯೋಗಿ ಲಿಫ್ಟ್‌ನಲ್ಲಿಯೇ ಕುಸಿದು ಬಿದ್ದು ಸಾವು

Tuesday, September 26th, 2023
lIFT

ಉಡುಪಿ : ಹೊಟೇಲೊಂದರ ಉದ್ಯೋಗಿ ಲಿಫ್ಟ್‌ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಹೋಟೆಲಿನ ಬಾರ್ ಕ್ಯಾಪ್ಟನ್ ರಾಜ್(51) ಎಂದು ಗುರುತಿಸಲಾಗಿದೆ. ಇವರು ಲೆಡ್ಜರ್ ಬುಕ್ ತರಲು 8ನೇ ಮಹಡಿಗೆ ಲಿಫ್ಟ್‌ನಲ್ಲಿ ಹೋಗುತ್ತಿದ್ದ ವೇಳೆ ಲಿಫ್ಟ್ ಒಳಗಯೇ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಆದರೆ ಪರೀಕ್ಷಿಸಿದ ವೈದ್ಯರು ರಾಜ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಭೀರ ಗಾಯಗೊಂಡಿದ್ದ ಛಾಯಾಗ್ರಾಹಕ ಆಸ್ಪತ್ರೆಯಲ್ಲಿ ಸಾವು

Tuesday, July 6th, 2021
Ashok Shetty

ಕುಂದಾಪುರ : ದಾವಣಗೆರೆಯಲ್ಲಿ ಕಂಟೈನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕುಂದಾಪುರದ ಛಾಯಾಗ್ರಾಹಕ ಗಂಭೀರ ಗಾಯಗೊಂಡಿದ್ದು, ಇಂದು ಬೆಳ್ಳಗ್ಗೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರಗೊಂಡು ಮೃತಪಟ್ಟವರನ್ನು ಕುಂದಾಪುರದ ಹಿರಿಯ ಛಾಯಾಚಿತ್ರಗಾರ, ಕುಂದಾಪುರ ತಾಲೂಕು ಛಾಯಾಗ್ರಾಹಕರ ಸಂಘ ಹಾಗೂ ರಾಜ್ಯ ಛಾಯಾಗ್ರಾಹಕರ ಸಂಘಟನೆಯ ಮಾಜೀ ಅಧ್ಯಕ್ಷ, ಹಾಲೀ ಸಂಚಾಲಕ ಹೇರೂರು ಅಶೋಕ ಕುಮಾರ್ ಶೆಟ್ಟಿ(58) ಎಂದು ಗುರುತಿಸಲಾಗಿದೆ. ನಾವುಂದದಲ್ಲಿ ಮಾನಸ ಸ್ಟುಡಿಯೋ ಮಾಲಕರಾಗಿರುವ ಅಶೋಕ್ ಕುಮಾರ್ ಶೆಟ್ಟಿ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಮಗ ಪನ್ನಗ ಹಾಗೂ ಕುಮಾರ್ ಎಂಬುವರ […]

ದನ ಕಟ್ಟುವ ವಿಷಯದಲ್ಲಿ ತಂದೆಯಿಂದ ಪೆಟ್ರೋಲ್ ದಾಳಿಗೊಳಗಾಗಿದ್ದ ಮಗ ಸಾವು

Thursday, July 1st, 2021
Vishwanath-Shetty

ಮಂಗಳೂರು : ದನ ಕಟ್ಟುವ ವಿಷಯದಲ್ಲಿ ಉಂಟಾದ ಜಗಳದಲ್ಲಿ ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸ್ವಾಮಿತ್ ಶೆಟ್ಟಿ (25) ಜು.01 ರ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೆಪ್ಪಿನಮೊಗರು ತಾರ್ದೊಲ್ಯದ ದನ ಕಟ್ಟುವ ವಿಷಯದಲ್ಲಿ ತಂದೆಯೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಆರೋಪಿ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಘಟನೆ ನಡೆದಂದೇ ಮಂಗಳೂರು ಗ್ರಾಮಾಂತರ ಪೊಲೀಸರು […]

ಕೊರೋನ ಸೋಂಕು ಜೂನ್ 5 : ದಕ್ಷಿಣ ಕನ್ನಡ 609 – 5 ಸಾವು, ಉಡುಪಿ 494 – 2 ಸಾವು

Sunday, June 6th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 609 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 80,080ಕ್ಕೇರಿದೆ. 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 950ಕ್ಕೇರಿದೆ. ಭಾನುವಾರ 862 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 71,580ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,550 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,71,018 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ […]

ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಮಗ ಸಾವು

Wednesday, June 2nd, 2021
Shailesh

ಪುತ್ತೂರು : ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಆಸ್ಟ್ರೇಲಿಯಾ ಉದ್ಯೋಗಿ, ಕೊರೋನದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ  ಘಟನೆ ಬುಧವಾರ ನಡೆದಿದೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ಎಂಬಲ್ಲಿ ಈ ಘಟನೆ ನಡೆದಿದೆ. ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ ಕೆಪಿಟಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿ(85) ಅವರು ಕೋವಿಡ್‌ನಿಂದ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಅವರ ಅಂತಿಮ ಸಂಸ್ಕಾರವು ಬುಧವಾರ ಬೈಲುಗುತ್ತು ಕೊಪ್ಪಳ ನಿವಾಸದಲ್ಲಿ ಕೋವಿಡ್ ನಿಯಮಾವಳಿ ಯೊಂದಿಗೆ ನಡೆಸಲಾಯಿತು. […]

ಕೊರೋನ ಸೋಂಕು ಮೇ 29 : ದ.ಕ. ಜಿಲ್ಲೆ 923 – 7 ಸಾವು, ಉಡುಪಿ ಜಿಲ್ಲೆ- 684 – 3 ಸಾವು, ಕಾಸರಗೋಡು – 506

Saturday, May 29th, 2021
corona Case

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 923 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ ಮತ್ತು  7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಮರಣ ಹೊಂದಿದವರಲ್ಲಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳದಲ್ಲಿ ತಲಾ ಎರಡು ಮತ್ತು ಪುತ್ತೂರಿನಲ್ಲಿ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 901ಕ್ಕೇರಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ 9,345 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರಗೆ 8,44,997 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,70,176 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು […]

ಕೊರೋನ ಸೋಂಕು ಪ್ರಕರಣಗಳು ಶನಿವಾರ : ದಕ್ಷಿಣ ಕನ್ನಡ ಜಿಲ್ಲೆ 1787- ಮೂರು ಸಾವು, ಉಡುಪಿ 1146 – ಏಳು ಸಾವು

Sunday, May 16th, 2021
corona

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಶನಿವಾರ  1787 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,490 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಶನಿವಾರ 3 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 808ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,01,768 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,38,411 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 63,357 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 49,355 ಮಂದಿ ಗುಣಮುಖರಾಗಿದ್ದಾರೆ. […]

ವಿದ್ಯುತ್ ಕಂಬದಲ್ಲಿ ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶ, ಸಾವು

Sunday, December 27th, 2020
Padmanabha

ಮಂಗಳೂರು: ಖಾಸಗಿ ಸಂಸ್ಥೆಯೊಂದರ  ಉದ್ಯೋಗಿ  ವಿದ್ಯುತ್ ಕಂಬದಲ್ಲಿ ಬಿಎಸ್ಎನ್ಎಲ್ ಇಂಟರ್ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ  ಓರ್ವ ವ್ಯಕ್ತಿ  ಮೃತಪಟ್ಟಿರುವ ದುರ್ಘಟನೆ ಪುತ್ತೂರು ಕೋರ್ಟ್ ರೋಡಿನ ಮಾರ್ಕೆಟ್ ಬಳಿ ನಡೆದಿದೆ. ಅರ್ಲಪದವಿನ ಬೆಟ್ಟಂಪಾಡಿ ನಿವಾಸಿ ಪದ್ಮನಾಭ ಮೃತಪಟ್ಟ ದುರ್ದೈವಿ. ಪುತ್ತೂರು ಮೀನು‌ ಮಾರುಕಟ್ಟೆಯ ಬಳಿ ಇಂಟರ್ನೆಟ್ ಕೇಬಲ್ ಅಳವಡಿಸುವ ಕಾರ್ಯ‌ ನಡೆಸಲಾಗುತ್ತಿತ್ತು. ಈ ವೇಳೆ ವಿದ್ಯುತ್ ಪ್ರವಹಿಸಿ ಬೆಟ್ಟಂಪಾಡಿ ನಿವಾಸಿ  ಪದ್ಮನಾಭ ಮೃತಪಟ್ಟಿದ್ದಾರೆ. ಅವರು  ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸಕ್ರಿಯ ಕಾರ್ಯಕರ್ತರಾಗಿದ್ದರು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ […]

ಗೋಲಿಬಜೆ ಗಂಟಲಿನಲ್ಲಿ ಸಿಲುಕಿ 55 ವರ್ಷದ ವ್ಯಕ್ತಿ ಸಾವು, ಮರಣೋತ್ತರ ವರದಿ

Wednesday, October 28th, 2020
golibaje

ಮಂಗಳೂರು : ಮುಲ್ಕಿಯ 55 ವರ್ಷದ ವ್ಯಕ್ತಿಯೊಬ್ಬ ತಾನು ಮನೆಗೆ ತಂದು ತಿನ್ನುತ್ತಿದ್ದ ಗೋಲಿಬಜೆ ಗಂಟಲಿನಲ್ಲಿ ಸಿಲುಕಿಕೊಂಡಿದ್ದ ರ ಪರಿಣಾಮ ಪ್ರಾಣ ಕಳೆದುಕೊಂಡಿರುವ ಬಗ್ಗೆ ಮರಣೋತ್ತರ ವರದಿ ಲಭ್ಯವಾಗಿದೆ. ಮೃತ ವ್ಯಕ್ತಿಯನ್ನು ಹರೀಶ್ ರಾಮಪ್ಪ ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ರಾಮಪ್ಪ ಮುಲ್ಕಿಯಲ್ಲಿ ತನ್ನ ಅಕ್ಕನೊಂದಿಗೆ ಉಳಿದುಕೊಂಡಿದ್ದ. ಕೆಲಸದಿಂದ ಮನೆಗೆ ಹಿಂದಿರುಗುವಾಗ ಗೋಲಿಬಜೆಯನ್ನು ರೆಸ್ಟೋರೆಂಟ್‌ನಿಂದ ಖರೀದಿಸಿ ತಂದಿದ್ದ. ಮನೆಯಲ್ಲಿ ಅವನು ಅದನ್ನು ತಿನ್ನುತ್ತಿದ್ದಾಗ ಒಂದು ಅವನ ಗಂಟಲಿನಲ್ಲಿ ಸಿಲುಕಿಕೊಂಡಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ […]