ನ.19ರಿಂದ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ
Tuesday, November 15th, 2022
ಬೆಳ್ತಂಗಡಿ: ಕರ್ನಾಟಕದ ಪುಣ್ಯ ಕ್ಷೇತ್ರಗಳಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನ.19ರಿಂದ ನ.23ರ ವರೆಗೆ ನೆರವೇರಲಿದೆ. ಕಾರ್ಯಕ್ರಮಗಳು ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯಲಿದ್ದು ನ.19ರಂದು ಹೊಸ ಕಟ್ಟೆ ಉತ್ಸವ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆಗೊಳ್ಳಲಿದೆ. ನ. 20ರಂದು ಕರೆ ಕಟ್ಟೆ ಉತ್ಸವ, ನ. 21ರಂದು ಲಲಿತೋದ್ಯಾನ ಉತ್ಸವ ಹಾಗೂ ಲಲಿತಕಲಾ ಗೋಷ್ಠಿ, ನ.22ರಂದು […]