ಪ್ರತಿದಿನವೂ ವಿನೂತನ ಅನುಭವ : ಜಿಲ್ಲಾಧಿಕಾರಿ ಸಿಂಧೂ ರೂಪೇಶ್

Thursday, July 30th, 2020
Sindhu B

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಪ್ರತೀದಿನವೂ ವಿನೂತನ ವಾಗಿದ್ದು, ಒಂದಲ್ಲೊಂದು ಸಮಸ್ಯೆ, ಸವಾಲು, ಘಟನೆಗಳು ಬರುತ್ತಿದ್ದವು. ಎಲ್ಲರ ಸಹಕಾರದಿಂದ ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದೇನೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮಗೆ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಅಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕರ್ತವ್ಯವು ವೃತ್ತಿ ಜೀವನದಲ್ಲಿ ಉತ್ತಮ ಅನುಭವ ಹಾಗೂ ಪ್ರಾವೀಣ್ಯತೆ ನೀಡುತ್ತದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದರೆ, ಅವರಲ್ಲಿ ಉಂಟಾಗುವ ನೆಮ್ಮದಿಯು […]

ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ : ಜಿಲ್ಲಾಧಿಕಾರಿ

Saturday, July 18th, 2020
Sindu B Roopesh

ಮಂಗಳೂರು : ಜುಲೈ 15ರ ರಾತ್ರಿಯಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ 11 ಗಂಟೆಯ ತನಕ ಇರುವ ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ರವಿವಾರ (ಜು.19) ಲಾಕ್‌ಡೌನ್ ನಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಮಂಗಳೂರು – ಕಾಸರಗೋಡಿನ ಮಧ್ಯೆ ಪಾಸ್ ಬಳಸಿ ಸಂಚರಿಸಲು ಅನುಮತಿ

Wednesday, June 3rd, 2020
sidhu-roopesh

ಮಂಗಳೂರು:   ಮಂಗಳೂರು – ಕಾಸರಗೋಡಿನ ಮಧ್ಯೆಯ ನಿತ್ಯ ಸಂಚಾರಕ್ಕೆ ಈಗ ಗ್ರೀನ್ ಸಿಗ್ನಲ್ ಸಿಕ್ಕಿದೆ. ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ನೀಡಿದ್ದಾರೆ. ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಸಂಚರಿಸುತ್ತಾರೆ. ಇಂತವರಿಗೆ ಪಾಸ್ ಬಳಸಿ ನಿತ್ಯ ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದರು. ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು […]

ಚಾರ್ಮಾಡಿ ಮತ್ತು ದಿಡುಪೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್

Saturday, October 5th, 2019
sindhu

ಬೆಳ್ತಂಗಡಿ : ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ವರದಿ ಸಲ್ಲಿಸಿ, ಮೊದಲ ಹಂತದ ಪರಿಹಾರ ಬಿಡುಗಡೆಯಾಗಿದೆ. ಬರುವ ಅನುದಾನಗಳಿಗೆ ಅನುಸಾರವಾಗಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹದಿಂದಾಗಿ ಹಾನಿಗೀಡಾದ ಚಾರ್ಮಾಡಿ ಹಾಗೂ ದಿಡುಪೆ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಧ್ಯಮದವರೊಂದಿಗೆ ಮಾತನಾಡಿದರು. ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಮೊದಲ ಹಂತದ ಅನುದಾನ ಬಿಡುಗಡೆ ಮಾಡಲಾಗಿದೆ. ಕೃಷಿ ನಾಶದ ಬಗೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. […]