ಆತ್ಮಹತ್ಯೆ ಮಾಡಿಕೊಂಡ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮೊಮ್ಮಗಳು

Friday, January 28th, 2022
Soundarya

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡಿದ್ದಾರೆ. ಸೌಂದರ್ಯರನ್ನು ಉಳಿಸಿಕೊಳ್ಳಲು ಕೊನೇ ಕ್ಷಣದಲ್ಲಿ ಕುಟುಂಬಸ್ಥರು ಮತ್ತು ವೈದ್ಯರು ಯತ್ನಿಸಿದ್ದರಾದರೂ ಫಲಿಸಲಿಲ್ಲ ಎಂಬ ವಿಚಾರ ತಿಳಿದುಬಂದಿದೆ. ಬಿಎಸ್ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ವೈದ್ಯೆಯಾಗಿದ್ದರು. 3 ವರ್ಷದ ಹಿಂದಷ್ಟೇ ಅಂದ್ರೆ 2018ರಲ್ಲಿ ಅಬ್ಬಿಗೆರೆಯ ಪದ್ಮ ಮತ್ತು ಶಿವಕುಮಾರ್ ದಂಪತಿ ಪುತ್ರ ಡಾ.ನೀರಜ್ ಎಂಬುವರ ಜತೆ ಸೌಂದರ್ಯ ಮದ್ವೆ ಅದ್ದೂರಿಯಾಗಿ ನೆರವೇರಿತ್ತು. ಡಾ.ನೀರಜ್ 7 ವರ್ಷದಿಂದ ರೇಡಿಯಾಲಜಿಸ್ಟ್ ಆಗಿ ಕೆಲಸ […]

ಅವಿಶ್ರಮಿತವಾಗಿ ದಣಿವರಿಯದೇ ಕೆಲಸ ಮಾಡುವ ಶಕ್ತಿ ನನ್ನಲಿದೆ: ಸಿಎಂ ಬಸವರಾಜ ಬೊಮ್ಮಾಯಿ

Tuesday, December 28th, 2021
Hubballi

ಹುಬ್ಬಳ್ಳಿ : ವರ್ಷದ 365 ದಿನಗಳು ಅವಿಶ್ರಮಿತವಾಗಿ ದಣಿವರಿಯದೇ ಕೆಲಸ ಮಾಡುವ ಶಕ್ತಿ, ಸ್ಪೂರ್ತಿ ನನ್ನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಕೆಲಸಮಯ ವಿಶ್ರಮಿಸಬೇಕೆನ್ನುವ ಎಂ.ಪಿ.ಕುಮಾರಸ್ವಾಮಿಯವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿ, ನಾನು ದಣಿವರಿಯದೇ ಕೆಲಸ ಮಾಡುವ ಶಕ್ತಿ ಹೊಂದಿದ್ದೇನೆ. ದಿನದಲ್ಲಿ ಕನಿಷ್ಟ 15 ತಾಸು ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ […]

ಜನರಿಗೆ ‘ಕೈ’ ಕೊಡುವುದರಲ್ಲಿ ಕಾಂಗ್ರೆಸ್ ಸಿದ್ಧಹಸ್ತ : ಸಿಎಂ

Tuesday, December 7th, 2021
cm Bommai

ಗದಗ : ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ವಾಗಿದ್ದು, ಜನರಿಗೆ ಕೈಕೊಡುವ ಕೆಲಸದಲ್ಲಿ ಅವರು ಸಿದ್ಧಹಸ್ತರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಗದಗ ಜಿಲ್ಲೆಯಲ್ಲಿ ಭಾಜಪದ ವತಿಯಿಂದ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. 7 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿ ಕೆಲವೇ ದಿನಗಳ ನಂತರ ಅದನ್ನು 4 ಕೆಜಿಗೆ ಇಳಿಸಿದರು. 5 ವರ್ಷದ ಅವಧಿಯಲ್ಲಿ 3 ವರ್ಷ 4ಕೆಜಿ ಅಕ್ಕಿ ಮಾತ್ರ ನೀಡಿದ್ದಾರೆ. ಚುನಾವಣೆಗೆ ಒಂದು ವರ್ಷವಿದ್ದಾಗ ಪುನ: 7 ಕೆಜಿಗೆ ಏರಿಸಿದರು. ಕಾಂಗ್ರೆಸ್ ಸರ್ಕಾರ […]

ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬಸವರಾಜ ಬೊಮ್ಮಾಯಿ

Friday, November 26th, 2021
Constitution Day

ದಾವಣಗೆರೆ : ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, […]

ಚುನಾವಣೆಗಳು ಯುವ ಮುಖಂಡರಿಗೆ ಪರೀಕ್ಷೆಗಳಿದ್ದಂತೆ: ಆರ್ ಅಶೋಕ್

Sunday, July 18th, 2021
R Ashoka

ಬೆಂಗಳೂರು :  ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಶ್ರೀ ಆರ್ ಅಶೋಕ, ಸಿಎಂ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. “ಆಮ್ಲಜನಕಯುಕ್ತ ಹಾಸಿಗೆಗಳನ್ನು ಹೆಚ್ಚಿಸುವುದು, ವೈದ್ಯರಿಗೆ ತರಬೇತಿ ನೀಡುವುದು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ವೈದ್ಯರನ್ನು ಗುರುತಿಸುವುದು ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮಳೆಗಾಲದಲ್ಲಿ ನೀರು ತುಂಬುವ ತಗ್ಗು ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಕ್ರಿಯಾ ಯೋಜನೆ […]

ಕಾಂಗ್ರೆಸ್ ನಲ್ಲಿ ಸಿಎಂ ಆಗಲು ಮೂವರು ಸ್ಪರ್ಧಿಗಳಿದ್ದಾರೆ : ಸಚಿವ ಬಿ.ಸಿ ಪಾಟೀಲ್

Saturday, June 26th, 2021
bc Pateel

ಉಡುಪಿ: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಗಾದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಇದ್ದಾರೆ ಎಂದು ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕಾಂಗ್ರೆಸ್ಸಿನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಮಾತ್ರ ಸಿಎಂ ಸ್ಪರ್ಧಿಗಳಲ್ಲ. ಜಿ. ಪರಮೇಶ್ವರ್ ಕೂಡ ಸಿಎಂ ಕ್ಯಾಂಡಿಡೇಟ್. ದಲಿತ ಸಿಎಂ ಆಗಬೇಕು ಎಂದು ಪರಮೇಶ್ವರ್ ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದಾರೆ ಎಲ್ಲರೂ ಸಿಎಂ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ತಪ್ಪಲ್ಲ, ಕೂಸು […]

ನಾನು ಸಿಎಂ ರೇಸಲ್ಲಿಲ್ಲ, ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ : ಶಾಸಕ ಅರವಿಂದ ಬೆಲ್ಲದ

Saturday, June 12th, 2021
Aravinda Bellada

ಧಾರವಾಡ : ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ ಸಂಗ್ರಹ ಆಗಿಯೇ ಇಲ್ಲ, ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿ ಒಂದೇ ಸಹಿ ಸಂಗ್ರಹ ನಡೆದಿತ್ತು. ಸದನ ಸದನ ನಡೆದಾಗ ಸಹಿ ಮಾಡಿದ್ದೇವೆ. ಅದೊಂದೆ ಸಹಿ ಸಂಗ್ರಹ ನಡೆದಿದೆ ರೇಣುಕಾಚಾರ್ಯ ತಪ್ಪಾಗಿ ತಿಳಿದುಕೊಂಡಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಸಿಎಂ ರೇಸ್‍ನಲ್ಲಿ ಅರವಿಂದ್ ಬೆಲ್ಲದ ಸಹಿ ಸಂಗ್ರಹ ಮಾಡಿದ್ದಾರೆ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯಾವುದೇ ಸಹಿ ಸಂಗ್ರಹವನ್ನು ಹೈಕಮಾಂಡ್ ಸಹಿಸುವುದಿಲ್ಲ. ನಾಯಕತ್ವ ಬದಲಾವಣೆ ಸಂಬಂಧಿಸಿದಂತೆ ಯಾವುದೇ ಸಹಿ […]

ಅವಧಿ ಮುಗಿಯುವವರೆಗೂ ನಾನೇ ಸಿಎಂ : ಬಿ.ಎಸ್. ಯಡಿಯೂರಪ್ಪ

Friday, June 11th, 2021
BS Yedyurappa

ಹಾಸನ: ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಯ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ನೇರ ಸಂದೇಶ ನೀಡಿದ್ದು ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಇರಿಸಿದ್ದಾರೆ ಎಂದರು. ನನ್ನ ಅವಧಿಯ  ಎರಡು ವರ್ಷ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ಸಿಎಂ ಬದಲಾವಣೆಗೆ […]

ಸಿಎಂ ಗೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಪತ್ರ

Sunday, June 6th, 2021
Horatti

ಬೆಂಗಳೂರು: ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ಕುರಿತು ಪತ್ರ ಬರೆದಿದ್ದಾರೆ. ಅವರ ಪತ್ರದ ವಿವರ ಈ ಕೆಳಗಿನಂತಿದೆ. ರಾಜ್ಯದಲ್ಲಿ ಮಾಹಾಮಾರಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದ ಸರಕಾರ ಕೈಗೊಂಡ ಲಾಕ್‌ಡೌನ್ ಸಮಯೋಚಿತ ಹಾಗೂ ಅವಶ್ಯಕ ನಿರ್ಧಾರದ ಆರಂಭದ ದಿನಗಳಿಂದ ನನ್ನ ಗಮನಕ್ಕೆ ಬಂದಿರುವ ಹಲವು ವಿಷಯಗಳ ಕುರಿತು ಸಲಹೆಗಳ ರೂಪದಲ್ಲಿ ತಮಗೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ಅವುಗಳಲ್ಲಿ ನಾನು ನೀಡಿರುವ ಬಹುತೇಕ ಸಲಹೆಗಳನ್ನು ತಾವು ಮಾನ್ಯ ಮಾಡಿ […]

ಕರ್ನಾಟಕದಲ್ಲಿ ಜೂನ್ 14 ರ ವರೆಗೆ ಲಾಕ್ ಡೌನ್ ಮುಂದುವರಿಕೆ

Thursday, June 3rd, 2021
bs Yedyurappa

ಬೆಂಗಳೂರು:  ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದೂಡಲ್ಪಟ್ಟಿದ್ದು ಜೂನ್ 14 ರ ಬೆಳಿಗ್ಗೆ 6 ವರೆಗೆ ಈಗ ಇರುವ ನಿಯಮಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 03 ರಂದು ಸಂಜೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕಾಗಿ ವಿಧಿಸಲಾಗಿಸಲಾಗಿರುವ ನಿಯಮಗಳಲ್ಲಿ ಸದ್ಯಕ್ಕೆ ಯಾವುದೇ ಸಡಿಲಿಕೆ, ಬದಲಾವಣೆಗಳೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೋಟೆಲ್  ಗಳಿಂದ ಪಾರ್ಸಲ್ ಪಡೆಯುವುದಕ್ಕೆ, ರಫ್ತು ಮಾಡುವುದಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ನಿರ್ಬಂಧವನ್ನು […]