ಸೈಟ್ ವಾಪಸ್ ಮಾಡುವ ಮೂಲಕ ಸಿಎಂ ಮತ್ತಷ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

Tuesday, October 1st, 2024
Basavaraja-Bommai

ಹುಬ್ಬಳ್ಳಿ : ಮುಡಾ ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಆಗಲೇ ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದು ಹೋಗುತ್ತಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. […]

ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ, ನೂತನ ಎಸ್‌ಪಿ ಯಾಗಿ ಯತೀಶ್ ಎನ್.

Wednesday, July 3rd, 2024
DK-Sp

ಮಂಗಳೂರು : ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು ಈ ವರ್ಗಾವಣೆಗಳ ಪೈಕಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಮೇ 2023 ರಲ್ಲಿ ರಿಷ್ಯಂತ್ ಅವರು […]

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

Thursday, June 27th, 2024
Kempegowda-jayanti

ಬೆಂಗಳೂರು : ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. […]

ಮಂಜೇಶ್ವರದಲ್ಲಿಯೂ ಸಿಎಂ ಸಿದ್ದರಾಮಯ್ಯನನ್ನು ಕಾಡಿದ ಕಾಗೆ

Thursday, January 19th, 2017
cm crow

ಮಂಜೇಶ್ವರ : ಮಂಜೇಶ್ವರದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಗೌರವಾರ್ಥ ಅವರ ಹುಟ್ಟೂರು ಮಂಜೇಶ್ವರದಲ್ಲಿ ಕೇರಳ ಸರಕಾರದ ಸಹಾಯದೊಂದಿಗೆ ನಿರ್ಮಿಸಲಾಗಿರುವ ಗಿಳಿವಿಂಡು ಸಾಂಸ್ಕೃತಿಕ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಭಾಗವಹಿದ್ದ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರಿಗೆ ಕಾಗೆಯೊಂದು ಅಡ್ಡಿಪಡಿಸಿತು. ವೇದಿಕೆಯ ಮೇಲೆ ಕುಳಿತಿದ್ದ ಸಿಎಂ ಮೇಲೆ ಪಕ್ಕದ ಮರದಲ್ಲಿ ಕುಳಿತಿದ್ದ ಕಾಗೆಯೊಂದು ಹಿಕ್ಕೆ ಹಾಕಿತು. ಇದರಿಂದ ಸಿಎಂ ಮುಜುಗರಕ್ಕೊಳಗಾದರು. ತಕ್ಷಣ ಶಾಸಕ ಮೊಯ್ದೀನ್ ಬಾವಾ ಸ್ವಚ್ಛಗೊಳಿಸಲು ಟಿಶ್ಯೂ ಪೇಪರ್ ಕೊಟ್ಟರು.ಮೂಡಾದ ಮಾಜಿ ಅಧ್ಯಕ್ಷ ತೇಜೋಮಯ ಅವರು ಸಿಎಂ ಪಂಚೆ […]

ಪೊಲೀಸರ ಬಹುದಿನಗಳ ಬೇಡಿಕೆ, ಪೊಲೀಸರ ವೇತನ ಹೆಚ್ಚಳ ಸಂಬಂಧ ಕರಡು ಸಿದ್ಧ

Thursday, September 1st, 2016
Dr-G-Parameshwar

ಬೆಂಗಳೂರು: ವೇತನ ಹೆಚ್ಚಳ ಮಾಡಬೇಕು ಎಂಬ ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆ ಶೀಘ್ರವೇ ಈಡೇರುವ ಸಾಧ್ಯತೆ ಕಂಡು ಬಂದಿದೆ. ಪೊಲೀಸರ ವೇತನ ಹೆಚ್ಚಳ ಸಂಬಂಧ ದೇಶದ ಎಲ್ಲ ರಾಜ್ಯಗಳ ಪೊಲೀಸ್‌ ಇಲಾಖೆಗಳ ವೇತನದ ಮಾಹಿತಿ ಪಡೆದು ಅದರ ಆಧಾರದಲ್ಲಿ ಡಿಜಿಪಿ ಓಂ ಪ್ರಕಾಶ್‌ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ವೇತನ ಪರಿಷ್ಕರಣೆ ಕರಡು ಸಿದ್ಧಗೊಂಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆಯ ನಂತರ ಸರ್ಕಾರ ನಿರ್ಧಾರ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ. […]

ಸೋನಿಯಾಗೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ರವಾನೆ: ಸಿಎಂ

Wednesday, February 5th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋನಿಯಾಗಾಂಧಿಗೆ ಅಭ್ಯರ್ಥಿಗಳ ಪಟ್ಟಿ ರವಾನೆಯಾಗಿದೆ ಎಂದು ಹೇಳಿದ್ದಾರೆ. ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಭಾಗಿಯಾಗುವೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಭಾಗವಹಿಸಲಿದ್ದು, ಕೇಂದ್ರ ಸಚಿವ ವಯಲಾರ್ ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ರಾಜ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಬಿಜೆಪಿ ಹಿರಿಯ ಮುಖಂಡ […]