ಚೆನ್ನೈನಲ್ಲಿ ಕೊರೊನಾ ಭೀತಿ ನಡುವೆಯೂ ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ

Wednesday, March 18th, 2020
chennai

ಚೆನ್ನೈ : ಕೊರೊನಾ ಭೀತಿಗೆ ಈಡಿ ಜಗತ್ತೆ ಬೆಚ್ಚಿಬಿದ್ದಿದೆ. ಹೀಗಾಗಿ ಒಂದು ಜಾಗದಲ್ಲಿ ನೂರಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿನ ಚೆನ್ನೈನಲ್ಲಿ ಸಾವಿರಾರು ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ. ಮದ್ರಾಸ್ ಹೈಕೋರ್ಟ್ ಬಳಿ ತಮಿಳುನಾಡು ಥೌಹೀದ್ ಜಮಾತ್ ಸದಸ್ಯರು ಸೇರಿದಂತೆ ಅನೇಕ ಜನರು ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರುದ್ಧ ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ […]

ಕೊರೊನಾ ವೈರಸ್ ಭೀತಿಯ ನಡುವೆಯೂ ಮುಂದುವರಿದ ಶಹೀನ್ ಭಾಗ್ ಸಿಎಎ ವಿರೋಧಿ ಪ್ರತಿಭಟನೆ

Saturday, March 14th, 2020
shahi-bhagh

ಹೊಸದಿಲ್ಲಿ : ದೇಶದಲ್ಲಿ ಕೊರೊನಾ ವೈರಸ್ ತೀವ್ರವಾಗಿ ಕಾಡುತ್ತಿದ್ದು, ಜನಜೀವನ ಬಹುತೇಕ ಸಂಕಷ್ಟಕ್ಕೆ ಒಳಗಾಗಿದೆ. ಕೇರಳ, ಕೇರಳ, ದಿಲ್ಲಿ ಸೇರಿದಂತೆ ಬಹುತೇಕ ರಾಜ್ಯಗಳು ಲಾಕ್ ಡೌನ್ ಪರಿಸ್ಥಿತಿಗೆ ತಲುಪಿದೆ. ಇಷ್ಟೆಲ್ಲದರ ನಡುವೆಯೂ ಶಹೀನ್ ಭಾಗ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಕಳೆದ ಮೂರು ತಿಂಗಳಿಂದ ಶಹೀನ್ ಭಾಗ್ ನಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಯುತ್ತಿದೆ. ಕೊರೊನಾ ವೈರಸ್ ಭೀತಿಯ ನಡುವೆಯೂ ಇದು ಮುಂದುವರಿದಿದೆ. ದಿಲ್ಲಿಯಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲು ರಾಜ್ಯ ಸರಕಾರ ಆದೇಶಿಸಿದೆ. 200 […]

ಸಿಎಎ, ಎನ್‌ಆರ್‌ಸಿ ವಿರುದ್ಧ “ಕುದ್ರೋಳಿ ಚಲೋ” ಬೃಹತ್‌ ಪ್ರತಿಭಟನಾ ಸಮಾವೇಶ

Wednesday, February 26th, 2020
kudroli-chalo

ಮಂಗಳೂರು : ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರುದ್ಧದ ಹೋರಾಟದಲ್ಲಿ ಪೊಲೀಸರ ಗುಂಡಿಗೆ ಬಲಿಯಾದ ನೌಶೀನ್‌ ಹಾಗೂ ಅಬ್ದುಲ್‌ ಜಲೀಲ್‌ ಅವರ ಹುಟ್ಟೂರಿನಲ್ಲಿ ಕುದ್ರೋಳಿಯ ಮುಸ್ಲಿಂ ಐಕ್ಯತಾ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ “ಕುದ್ರೋಳಿ ಚಲೋ’ ಮಂಗಳವಾರ ಕುದ್ರೋಳಿಯ ಟಿಪ್ಪು ಸುಲ್ತಾನ್‌ ಗಾರ್ಡನ್‌ ಮೈದಾನದಲ್ಲಿ ನಡೆಯಿತು. ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿ ಸಂವಿಧಾನ ಉಳಿಸಿ ದೇಶ ರಕ್ಷಿಸಿ ಎಂದು ಘೋಷಣೆ ಕೂಗಿದರು. ಪ್ರಗತಿಪರ ಚಿಂತಕ ಬಿ.ಆರ್‌. ಭಾಸ್ಕರ್‌ ಪ್ರಸಾದ್‌ ಮಾತನಾಡಿ, ಸಿಎಎ, […]

ಇಂದು ಕಲಬುರ್ಗಿಯಲ್ಲಿ ಸಿಎಎ ವಿರುದ್ಧ ಬೃಹತ್​​ ಸಮಾವೇಶ : ಒಂದು ಲಕ್ಷ ಜನ ಸೇರುವ ಸಾಧ್ಯತೆ

Tuesday, January 21st, 2020
kalburgi

ಕಲಬುರ್ಗಿ : ಇಂದು ಕಲಬುರ್ಗಿ ಪೀಪಲ್ಸ್ ಫೋರಂ ನೇತೃತ್ವದಲ್ಲಿ ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ(ಎನ್ಆರ್ಸಿ) ವಿರೋಧಿಸಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ನಗರದ ಪೀರ್ ಬಂಗಾಲಿ ಮೈದಾನದಲ್ಲಿ ಮದ್ಯಾಹ್ನ 3 ಗಂಟೆಗೆ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶಕ್ಕೆ ಕಾಂಗ್ರೆಸ್, ಸಿಪಿಐ, ಸಿಪಿಐಎಂ, ಎಸ್.ಯು.ಸಿ.ಐ. ಮತ್ತಿತರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಸಮಾವೇಶದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ. ಅದಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಸಿಪಿಐಎಂ ರಾಷ್ಟ್ರೀಯ ಪ್ರಧಾನ […]

ಮಂಗಳೂರು : ಅಡ್ಯಾರ್ ನಲ್ಲಿ ಎನ್‌ಆರ್‌ಸಿ, ಸಿಎಎ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ

Thursday, January 16th, 2020
adyar

ಮಂಗಳೂರು : ಎನ್‌ಆರ್‌ಸಿ, ಸಿಎಎ ವಿರುದ್ಧ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಬುಧವಾರದಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಮಂಗಳೂರು ಗೋಲಿಬಾರ್ ಪ್ರಕರಣದ ಬಳಿಕ ಮೊದಲ ಬಾರಿಗೆ ನಡೆದ ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ಕಣ್ಣನ್ ಗೋಪಿನಾಥನ್ ಅವರು ಎನ್‌ಆರ್‌ಸಿ, ಸಿಎಎಗೆ ತಮ್ಮ ವಿರೋಧ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ […]

ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ : ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಲು ಕೇರಳ ಸಿಎಂ ಒತ್ತಾಯ

Tuesday, January 14th, 2020
pinarayi

ನವದೆಹಲಿ : ವಿವಾದಾತ್ಮಕ ಪೌರತ್ವ ನಿಷೇಧ ಕಾಯ್ದೆಯನ್ನು ಅಸಂವಿಧಾನಿಕ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸುಪ್ರೀಂ ಕೋರ್ಟ್ನಲ್ಲಿ ಮೊಕದ್ದಮೆ ಹೂಡಿದ್ದಾರೆ. ಈ ಮೂಲಕ ಸುಪ್ರೀಂ ನಲ್ಲಿ ಸಿಎಎ ಕಾನೂನನ್ನು ಪ್ರಶ್ನಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಕೇರಳ ಪಾತ್ರವಾಗಿದೆ. ಕೇರಳ ವಿಧಾನಸಭೆ ಕಳೆದ ಡಿಸೆಂಬರ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರ್ಣಯವನ್ನು ಅಂಗೀಕರಿಸಿತ್ತು. ಎಲ್ಲಾ ಪಕ್ಷದ ಶಾಸಕರೂ ಸಿಎಎ ಕೇರಳದಲ್ಲಿ ಜಾರಿಯಾಗಬಾರದು ಎಂದು ಒಮ್ಮತದ ನಿರ್ಣಯ ತೆಗೆದುಕೊಂಡಿದ್ದರು. ಅಲ್ಲದೆ, ದೇಶಾದ್ಯಂತ ಪ್ರತಿಭಟನೆಗೆ ಕಾರಣವಾದ […]

ಜ.15 ರಂದು ಅಡ್ಯಾರಿನಲ್ಲಿ ಸಿಎಎ, ಎನ್.ಆರ್.ಸಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ

Tuesday, January 14th, 2020
TMCC

ಮಂಗಳೂರು : ಸಿಎಎ, ಎನ್.ಆರ್.ಸಿ ಕಾಯ್ದೆ ವಿರುದ್ಧ ದ.ಕ.,ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಜ. 15 ರಂದು ಅಡ್ಯಾರ್ ಶಹಾ ಮೈದಾನದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿ ಗೊಳಸಲು ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಕರೆ ನೀಡಿದೆ. ಎಸ್ ವೈ ಎಸ್ ನ‌ ಎಲ್ಲ ಘಟಕಗಳಿಂದ ವಿಶೇಷ ವಾಹನಗಳನ್ನು ವ್ಯವಸ್ಥೆ ಗೊಳಿಸಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಸಮ್ಮೇಳನವನ್ನು ಐತಿಹಾಸಿಕ ಗೊಳಿಸಬೇಕು ಹಾಗೂ ಗರಿಷ್ಠ ಮಟ್ಟದಲ್ಲಿ ಇದನ್ನು ಪ್ರಚಾರ […]

ಹಿಂಸಾಚಾರ ನಿಂತ ಬಳಿಕವೇ ವಿಚಾರಣೆ : ಸಿಎಎ ಮೇಲ್ಮನವಿ ಬಗ್ಗೆ ಸುಪ್ರೀಂಕೋರ್ಟ್

Thursday, January 9th, 2020
SC

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಸಿಂಧುತ್ವ ಪ್ರಶ್ನಿಸಿ ಹಾಗೂ ಸಿಎಎ ಸಂವಿಧಾನಬದ್ಧ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಸಾಚಾರ ನಿಂತ ಬಳಿಕವೇ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಗುರುವಾರ ತಿಳಿಸಿದೆ. ದೇಶ ಪ್ರಸ್ತುತ ಸಂದಿಗ್ಧ ಕಾಲಘಟ್ಟದಲ್ಲಿದೆ. ಇಂತಹ ಮೇಲ್ಮನವಿಗಳಿಂದ ಸಹಾಯವಾಗಲ್ಲ. ಹೀಗಾಗಿ ಹಿಂಸಾಚಾರ ನಿಂತ ನಂತರವೇ ಸಿಎಎ ಕುರಿತ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ ಎ ಬೋಬ್ಡೆ ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬದ್ಧ ಎಂದು ಘೋಷಿಸಬೇಕು. ಅಲ್ಲದೇ ಕಾನೂನಿನ ಕುರಿತು ಪ್ರತಿಭಟನೆ […]

ಎನ್‌ಆರ್‌ಸಿ, ಸಿಎಎ ಕಾಯ್ದೆ ವಿರುದ್ಧ ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ

Friday, January 3rd, 2020
CPIM

ಮಡಿಕೇರಿ : ಕೇಂದ್ರ ಸರ್ಕಾರದ ಎನ್‌ಆರ್‌ಸಿ ಮತ್ತು ಸಿಎಎ ಕಾಯ್ದೆಯನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಡಾ.ಇ.ರ.ದುರ್ಗಾಪ್ರಸಾದ್, ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನದ ಮೂಲ ಆಶಯಗಳಿಗೆ ವಿರೋಧವಾಗಿದ್ದು, ದೇಶದ ಐಕ್ಯತೆಗೆ ಧಕ್ಕೆ ತಂದರುವಂತಾಗಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಅನುಸರಿಸುತ್ತಿರುವ […]

ಸಿಎಎ ನೆಪದಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ : ಸಚಿವ ಸಿ.ಟಿ.ರವಿ

Thursday, December 26th, 2019
CT-Ravi

ಮಂಗಳೂರು : ಸಿಎಎ ನೆಪದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ ಅವರು, ತ್ರಿವಳಿ ತಲಾಖ್, 370ನೆ ವಿಧಿ ರದ್ದು, ಬಾಬರಿ ಮಸ್ಜಿದ್ ತೀರ್ಪು ಇತ್ಯಾದಿ ಸಂದರ್ಭ ದೇಶಾದ್ಯಂತ ಗಲಭೆಯಾಗಬಹುದು ಎಂದು ಕಾಂಗ್ರೆಸ್ಸಿಗರು ಭಾವಿಸಿದ್ದರು. ಆದರೆ, ಎಲ್ಲೂ ಏನೂ ಆಗಿಲ್ಲ. ಈ ಮಧ್ಯೆ ಸಿಎಎ ಅನುಷ್ಠಾನಕ್ಕೆ ಸಿದ್ಧತೆ ನಡೆಯತೊಡಗಿದಾಗ ಕಾಂಗ್ರೆಸ್ […]