12 ಕೋಟಿ ರೂ. ವೆಚ್ಚದಲ್ಲಿ ಸೈಬರ್ ಲ್ಯಾಬ್ : ಕಿಶೋರ್ ಚಂದ್ರ
Tuesday, May 30th, 2017ಮಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಪತ್ತೆಹಚ್ಚುವ ಸಲುವಾಗಿ ಬೆಂಗಳೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ಹಾಗೂ ಸೌಲಭ್ಯಗಳನ್ನು ಹೊಂದಿರುವ ಸೈಬರ್ ಲ್ಯಾಬ್ನ್ನು ನಿರ್ಮಿಸಲಾಗುವುದು ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಕಿಶೋರ್ ಚಂದ್ರ ಹೇಳಿದರು. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಲೌಡ್ ಕಂಪ್ಯೂಂಟಿಂಗ್ ಮುಂತಾದ ನೂತನ ವರ್ಷನ್ ತಂತ್ರಜ್ಞಾನಗಳನ್ನು ಹೊಂದಿರುವ ಸೈಬರ್ ಲ್ಯಾಬ್ನ್ನು ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಬಗ್ಗೆ ಯೋಜನೆ ಹಾಕಲಾಗಿದೆ. ಇಷ್ಟು ಮಾತ್ರವಲ್ಲದೆ ಜಿಲ್ಲಾ ವ್ಯಾಪ್ತಿಗಳಲ್ಲಿರುವ ಸೈಬರ್ […]