ರನ್ವೇಯಲ್ಲಿ ಸಿಗ್ನಲ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್ಇಂಡಿಯಾ ವಿಮಾನ, 186 ಮಂದಿ ಪಾರು
Monday, July 17th, 2017ಮಂಗಳೂರು : ರನ್ವೇಯಲ್ಲಿ ಅಳವಡಿಸಿದ್ದ ಸಿಗ್ನಲ್ ಕಂಬಕ್ಕೆ ಏರ್ಇಂಡಿಯಾ ವಿಮಾನವು ಢಿಕ್ಕಿ ಹೊಡೆದ ಘಟನೆ ರವಿವಾರ ಬೆಳಗ್ಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ ಏರ್ ಇಂಡಿಯಾ ವಿಮಾನದಲ್ಲಿದ್ದ 186 ಮಂದಿ ಅಪಾಯದಿಂದ ಪಾರಾಗಿದ್ದಾರೆ. ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಏರ್ಇಂಡಿಯಾ ವಿಮಾನವು ಇಳಿಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತು. ರವಿವಾರ ಏರ್ಇಂಡಿಯಾ 814 ವಿಮಾನವು ದುಬೈನಿಂದ ಮಂಗಳೂರು ಏರ್ಪೋರ್ಟ್ಗೆ ಆಗಮಿಸಿತ್ತು. 186 ಮಂದಿ ಪ್ರಯಾಣಿಕರನ್ನು ಹೊತ್ತ ವಿಮಾನವು ರನ್ವೇನಲ್ಲಿ ಇಳಿಯುತ್ತಿದ್ದಂತೆ ಅಲ್ಲಿ ಅಳವಡಿಸಲಾಗಿದ್ದ ಸಿಗ್ನಲ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪ್ರಯಾಣಿಕರು […]