ಗೌರಿ ಲಂಕೇಶ್ ಹತ್ಯೆ ಪ್ರಕರಣ : ಬಂಧನಕ್ಕೆ ಒಳಗಾಗಿದ್ದ ಆರೋಪಿ 15 ದಿನಗಳ ಕಾಲ ಎಸ್ಐಟಿ ವಶಕ್ಕೆ
Monday, January 13th, 2020ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಎಸ್ಐಟಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಆರೋಪಿ ರಿಷಿಕೇಶ್ನನ್ನು 15 ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂವರೆ ವರ್ಷದ ಬಳಿಕ ಮತ್ತೊಬ್ಬ ಆರೋಪಿ ರಿಷಿಕೇಶ್ ದೇವಾಡಿಕರ್ ಅಲಿಯಾಸ್ ಮುರಳಿ ಎಂಬಾತನನ್ನು ಎಸ್ಐಟಿ ಪೊಲೀಸರು ಮೂರು ದಿನಗಳ ಹಿಂದೆ ಜಾರ್ಖಂಡ್ನಲ್ಲಿ ಬಂಧಿಸಿದ್ದರು. ಬಂಧಿತ ಆರೋಪಿ ಕೃತ್ಯಕ್ಕೆ ಬಳಸಿದ್ದ ಪಿಸ್ತೂಲ್ಗಳನ್ನು ನಾಶ ಮಾಡಿದ್ದ ಎನ್ನಲಾಗಿದೆ. ಹೀಗಾಗಿ […]