Blog Archive

ವಲಸೆ ಕಾರ್ಮಿಕರಿಗೆ ಅಕ್ಕಿ: ಸಚಿವ ಆಗ್ರಹ

Wednesday, January 10th, 2018
U-T-Kader

ಮಂಗಳೂರು: ದೇಶದ ವಿವಿಧ ಭಾಗ ಗಳಿಂದ ದುಡಿಮೆಗಾಗಿ ಕರ್ನಾಟಕಕ್ಕೆ ವಲಸೆ ಬರುವ ಕಾರ್ಮಿಕರಿಗೆ ಉಚಿತ ವಾಗಿ ಅಥವಾ ರಿಯಾಯಿತಿ ದರದಲ್ಲಿ ಅಕ್ಕಿ ವಿತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದರು. ಅವರು ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಕಾರ್ಮಿಕ ವರ್ಗದ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ, ಉತ್ತರ ಪ್ರದೇಶ, ಅಸ್ಸಾಂ, ಬಿಹಾರ, ಒಡಿಶಾ ಮುಂತಾದ ರಾಜ್ಯಗಳಿಂದ ಕೆಲಸಕ್ಕಾಗಿ ಕರ್ನಾಟಕಕ್ಕೆ ಬರುವ ಕಾರ್ಮಿಕರಿಗೆ ರಿಯಾಯಿತಿ […]

ಸಾಧನಾ ಸಮಾವೇಶಕ್ಕೆ ಕೊಲ್ಲೂರು ದೇಗುಲದ ಊಟ: ಚರ್ಚೆಗೆ ಗ್ರಾಸ

Tuesday, January 9th, 2018
mookambika

ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜ.8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಾಧನಾ ಸಮಾವೇಶ, 490.97 ಕೋ.ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನ ಸಮಾರಂಭದಲ್ಲಿ ಸೇರಿದ್ದ ಕಾರ್ಯಕರ್ತರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಮಧ್ಯಾಹ್ನದ ಊಟ ಒದಗಿಸಿರುವುದು ಈಗ ಪರ ಹಾಗೂ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಸಾಧನಾ ಸಮಾವೇಶದಲ್ಲಿ ಕೊಲ್ಲೂರು ದೇವಸ್ಥಾನದಿಂದ ಮಧ್ಯಾಹ್ನದ ಊಟ ಒದಗಿಸಿರುವುದನ್ನು ಅನೇಕರು ಪ್ರಶ್ನಿಸಿದ್ದಾರೆ. ಶಾಲೆಯೊಂದರ ಮಧ್ಯಾಹ್ನದ ಬಿಸಿಯೂಟಕ್ಕೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದವರು ಅದೇ ದೇವಸ್ಥಾನದ ಅನ್ನಪ್ರಸಾದವನ್ನು […]

ಗೋಪಾಲ ಪೂಜಾರಿ ಕ್ರಿಯಾಶೀಲ, ಜನಪರ ಶಾಸಕ; ಸಿಎಂ ಬಹುಪರಾಕ್

Monday, January 8th, 2018
Gopal-poojary

ಬೈಂದೂರು: ಬಿಜೆಪಿಯವರು ಕೆಲಸ ಮಾಡೋದು ಕಡಿಮೆ, ಪ್ರಚಾರ ಮಾಡೋದು ಜಾಸ್ತಿ. ನಾವು(ಕಾಂಗ್ರೆಸ್) ಮಾಡಿರುವ ಅಭಿವೃದ್ಧಿ ಕೆಲಸವನ್ನು ತಾವು(ಬಿಜೆಪಿ) ಮಾಡಿದ್ದು ಎಂದು ಹೇಳಿಕೊಳ್ಳೋದು ಬಿಜೆಪಿಯವರ ಚಾಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಸೋಮವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಯ ಒಟ್ಟು 490.97 ಕೋಟಿ ಮೊತ್ತದ ಕಾಮಗಾರಿಗೆ ಶಿಲಾನ್ಯಾಸ ಹಾಗೂ ರಾಜ್ಯ ಸರಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ನಾವು ಮಾಡಿರುವ ಕೆಲಸವನ್ನು ಅವರು ಮಾಡಿರುವುದಾಗಿ ಹೇಳಿಕೊಳ್ಳುತ್ತಾರೆಂದು ಶಾಸಕ ಗೋಪಾಲ ಪೂಜಾರಿ ಅವರು ನೊಂದುಕೊಳ್ಳಬೇಕಾಗಿಲ್ಲ. ಯಾಕೆಂದರೆ […]

ಉಡುಪಿ ಜಿಲ್ಲೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

Monday, January 8th, 2018
Baindoor

ಬೈಂದೂರು: ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ಉಡುಪಿಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೈಂದೂರು, ಕಾಪು, ಉಡುಪಿ ಕ್ಷೇತ್ರಗಳಲ್ಲಿ ಸೋಮವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿಯ ಸದ್ಯದ ಪರಿಸ್ಥಿತಿಗೆ ಕೋಮುವಾದಿಗಳು‌ ಕಾರಣ. ಇದಕ್ಕೆಲ್ಲ ಸಂಘ ಪರಿವಾರದ ‌ಕುಮ್ಮಕ್ಕು ಅವರು ಬಿಟ್ರೆ ಯಾರೂ ಇಲ್ಲಿ ಗಲಭೆ ಮಾಡಲ್ಲ, ಆದ್ದರಿಂದ ಬಿಜೆಪಿ‌ ಕೋಮುವಾದ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಿಎಫ್ ಐ, ಬಜರಂಗದಳ, ಶ್ರೀ ರಾಮಸೇನೆ ಮೇಲೆ ನಿಗಾ ಇಡಲು […]

ಜಾತಿ, ಧರ್ಮ ನೋಡಿ ಕೆಲಸ ಮಾಡಿಲ್ಲ

Monday, January 8th, 2018
belthangady

ಮಂಗಳೂರು: ‘ನಾಲ್ಕು ವರ್ಷ ಎಂಟು ತಿಂಗಳ ಅವಧಿಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ನಡೆದಿದ್ದೇನೆ. ಜಾತಿ, ಧರ್ಮ ನೋಡಿ ಯಾವ ಕೆಲಸವನ್ನೂ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳ್ತಂಗಡಿ ತಾಲ್ಲೂಕು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ 76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ‘ನಮ್ಮ ಸರ್ಕಾರ ಧರ್ಮ, ಜಾತಿ ನೋಡಿ ಯಾವ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂಬುದನ್ನು ತೋರಿಸಿ’ ಎಂದು ಸವಾಲು ಹಾಕಿದರು. ‘ಅನ್ನಭಾಗ್ಯ ಯೋಜನೆಯಡಿ ಎಲ್ಲ ಧರ್ಮ, ಜಾತಿಯ […]

ತುಳುಚಲನ ಚಿತ್ರ ನಿರ್ಮಾಪಕರಿಂದ ಮುಖ್ಯಮಂತ್ರಿ ಭೇಟಿ

Monday, January 8th, 2018
Tulu-film

ಮಂಗಳೂರು : ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಮತ್ತು ನಿರ್ಮಾಪಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ತುಳು ಸಿನಿಮಾರಂಗದಲ್ಲಿನ ಸಮಸ್ಯೆಯನ್ನು ನಿವಾರಿಸುವಂತೆ ಮನವಿ ಮಾಡಿದರು. ಸೀಮಿತ ಮಾರುಕಟ್ಟೆಯ ತುಳು ಚಿತ್ರರಂಗದಲ್ಲಿ ತಯಾರಾಗುತ್ತಿರುವ ಎಲ್ಲಾ ತುಳು ಸಿನಿಮಾಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಲಾಯಿತು. ಅಲ್ಲದೆ ಜಿಲ್ಲೆಯಲ್ಲಿ ಚಿತ್ರಮಂದಿರಗಳ ಸಮಸ್ಯೆ ಇದೆ. ಚಿತ್ರಮಂದಿರಗಳ ನಿರ್ಮಾಣದ ಜತೆಗೆ ಕಲಾವಿದರಿಗೆ ನೀಡುವ ಮಾಸಾಶನವನ್ನು ೧,೫೦೦ರಿಂದ ೫ ಸಾವಿರ ರೂ ವರೆಗೆ ಏರಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ತುಳು […]

ಗೋಡ್ಸೆ ಅನುಯಾಯಿ ಆದಿತ್ಯನಾಥ್ ರಿಂದ ನಮಗೆ ಪಾಠ ಬೇಡ: ಸಿದ್ದರಾಮಯ್ಯ

Monday, January 8th, 2018
congress-war

ಉಡುಪಿ: ಕಲ್ಲಡ್ಕ ಪ್ರಭಾಕರ ಭಟ್ ಶಾಲೆಗೆ ಮಾತ್ರ ಏಕೆ ಊಟ, ಬೇರೆ ಶಾಲೆಗಳಿಗೂ ಕೊಡಬಹುದಲ್ಲಾ? ಹೀಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಾಫ್ಟ್ ಹಿಂದುತ್ವ ಅಂದರೆ ಏನು? ಈ ಸಾಫ್ಟ್, ಹಾರ್ಡ್ ಏನೂ ಇಲ್ಲ. ನಾನು ದೇವಸ್ಥಾನಗಳಿಗೆ ಹೋಗುತ್ತೇನೆ. ಹಾಗಂತ ಎಲ್ಲಾ ದೇವಸ್ಥಾನಕ್ಕೆ ಹೋಗಲ್ಲ. ಕೃಷ್ಣಮಠಕ್ಕೆ ಹೋಗದೇ ಇರೋದು ದೊಡ್ಡ ವಿಷಯ ಅಲ್ಲ ಎಂದು ತಮ್ಮ ವಿರುದ್ಧ ಆರೋಪಗಳಿಗೆ ಉತ್ತರಿಸಿದರು. ಕರಾವಳಿಯಲ್ಲಿ ಉಲ್ಬಣವಾಗಿರುವ ಕೋಮು ಸಂಘರ್ಷಕ್ಕೆ ಕೋಮುವಾದಿ […]

ಬಶೀರ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲು ಸಂಸದ ನಳಿನ್ ಒತ್ತಾಯ

Monday, January 8th, 2018
basheer

ಉಡುಪಿ: ಮಂಗಳೂರು ಕೊಟ್ಟಾರಚೌಕಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಅಬ್ದುಲ್ ಬಶೀರ್ ಕುಟುಂಬಕ್ಕೆ ರಾಜ್ಯ ಸರಕಾರ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಹತ್ಯೆಗಳು ನಿರಂತರ ನಡೆಯುತ್ತಿದ್ದು, ಈ ರೀತಿಯ ಮತಾಂಧರ ಹತ್ಯೆ ಖಂಡನೀಯ. ಯಾವುದೇ ಧ್ವೇಷ ಇದ್ದರೂ ಕಾನೂನು ಕೈಗೆತ್ತಿಕೊಂಡು ಒಬ್ಬ ವ್ಯಕ್ತಿಯನ್ನು ಹತ್ಯೆಗೈಯ್ಯುವ ಹಕ್ಕು ಯಾರಿಗೂ ಇಲ್ಲ ಎಂದರು. ಸಿದ್ದರಾಮಯ್ಯ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. […]

ದಕ್ಷಿಣ ಕನ್ನಡ ಕೋಮುವಾದದ ಪ್ರಯೋಗಾಲಯ ಆಗಬಾರದು: ಸಿದ್ದರಾಮಯ್ಯ

Monday, January 8th, 2018
Ramanath-rai

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 76 ಕೋಟಿ ರೂಪಾಯಿ ವೆಚ್ಚದ ಅಭಿವೃದಿ ಕಾಮಗಾರಿಗಳನ್ನು ಉದ್ಘಾಟಿಸಿದರು . ಈ ನಡುವೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಂಗಳೂರಿನಲ್ಲಿ ಮೃತಪಟ್ಟ ದೀಪಕ್ ರಾವ್ ಹಾಗು ಅಬ್ದುಲ್ ಬಷೀರ್ ಅವರ ಸಾವಿಗೆ ಸಂತಾಪ ಸೂಚಿಸಲಾಯಿತು. ನಂತರ ಕಾರ್ಯಕ್ರಮವನ್ನು ಉದೇಶಿಸಿ ಮಾತನಾಡಿದ ಅವರು, “ನಾವು ವಿಶ್ವ ಮಾನವರಾಗಬೇಕು. ಮೊದಲು ನಾವು […]

ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್, ಬಷೀರ್ ಮನೆಗೆ ಸಿಎಂ ಭೇಟಿ

Monday, January 8th, 2018
deepak-rao

ಮಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾದ ದೀಪಕ್ ರಾವ್ ಮತ್ತು ಅಬ್ದುಲ್ ಬಷೀರ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದ ಸಿದ್ದರಾಮಯ್ಯ ಮೊದಲಿಗೆ ಸುರತ್ಕಲ್ ಕಾಟಿಪಳ್ಳದಲ್ಲಿರುವ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಸಂಜೆ ವೇಳೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು. ಸಿ‌.ಎಂ ಅವರೊಂದಿಗೆ ಸಚಿವ ರಮನಾಥ್ ರೈ, ಯು.ಟಿ ಖಾದರ್, ಮಂಗಳೂರು ಮೇಯರ್ ಕವಿತಾ ಸನಿಲ್ ಕೂಡ ದೀಪಕ್ ಮನೆಗೆ ಭೇಟಿ ನೀಡಿದರು. ಸಂಕಷ್ಟಕ್ಕೆ ಸ್ಪಂದಿಸಿದ […]