Blog Archive

ಶೋಭಾ ತಪ್ಪು ಮಾಡಿದರೆ ಮುಲಾಜಿಲ್ಲದೇ ಪೊಲೀಸರು ಬಂಧಿಸುತ್ತಾರೆ: ಸಿಎಂ

Monday, December 25th, 2017
shobha-karandlaje

ಹಾವೇರಿ: ತಾಕತ್ತಿದ್ದರೆ ಸಿದ್ದರಾಮಯ್ಯ ಸರಕಾರ ನನ್ನನ್ನು ಬಂಧಿಸಲು ಪೊಲೀಸರಿಗೆ ಆದೇಶ ನೀಡಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಕಾನೂನಿಗಿಂತ ಈ ನೆಲದಲ್ಲಿ ಯಾರೂ ದೊಡ್ಡವರಲ್ಲ. ಶೋಭಾ ಅವರು ಉದ್ವೇಗದಿಂದ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಜೊತೆಗೆ, ಶೋಭಾ ಕರಂದ್ಲಾಜೆಯವರು ತಪ್ಪು ಮಾಡಿದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಪೊಲೀಸರು ಬಂಧಿಸುತ್ತಾರೆಯೇ ಹೊರತು ನಾವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಹದಾಯಿ […]

ಕರ್ನಾಟಕದಿಂದ ಕಾಂಗ್ರೆಸ್ ಗೆಲುವಿನ ಇನ್ನಿಂಗ್ಸ್ ಆರಂಭ: ಸಿದ್ದರಾಮಯ್ಯ

Friday, December 22nd, 2017
siddaramaiah

ಬೆಳಗಾವಿ: 2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಗೆಲುವಿನೊಂದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಮೊದಲ ಗೆಲುವಿನ ಗಿಫ್ಟ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಗುರುವಾರ ಬೆಳಗಾವಿಯ ಹಾರೋಗೇರಿಯಲ್ಲಿ ಮಾತನಾಡಿದ ಅವರು, “ಬಿಜೆಪಿಯವರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳುತ್ತಾರೆ. ಇದು ಸಾಧ್ಯವಿಲ್ಲ. ಕಾಂಗ್ರೆಸ್ 132 ವರ್ಷಗಳ ಇತಿಹಾಸ ಇರುವ ಪಕ್ಷ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ,” ಎಂದು ಹೇಳಿದ್ದಾರೆ. 2018ರ ಕರ್ನಾಟಕ ಚುನಾವಣೆ : ಅಹಿಂದ V/S ಹಿಂದುತ್ವ! “ಇವತ್ತು ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. […]

ಕಾಂಗ್ರೆಸ್ ದೇಶದ್ರೋಹಿ ಸಂಘಟನೆಯೊಂದಿಗೆ ಹೊಂದಾಣಿಕೆಗೆ ಮುಂದಾಗಿದೆ’

Friday, December 22nd, 2017
congrss

ಮಂಗಳೂರು: ಏಕಾಂಗಿಯಾಗಿ ಚುನಾವಣೆ ಎದುರಿಸಲಾಗದೆ ಕಾಂಗ್ರೆಸ್ ದೇಶದ್ರೋಹಿ ಸಂಘಟನೆಗಳಾದ ಎಸ್‌ಡಿಪಿಐ, ಪಿಎಫ್ಐ ಜತೆ ಹೊಂದಾಣಿಕೆಗೆ ಮುಂದಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಆರೋಪಿಸಿದೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಶತಾಯಗತಾಯ ಅಧಿಕಾರಕ್ಕೆ ಬರಬೇಕೆನ್ನುವ ಉದ್ದೇಶದಿಂದ ಕಾಂಗ್ರೆಸ್ ತಾನು ಯಾವ ಮಟ್ಟಕ್ಕೂ ಇಳಿಯಲು ಸಿದ್ಧ ಎಂಬುದುದನ್ನು ತೋರಿಸಿದೆ. ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್‌ ಅವರು ಎಸ್‌ಡಿಪಿಐ ಮತ್ತು ಪಿಎಫ್ಐ ಜತೆಯಲ್ಲಿ ಮಾತುಕತೆ ಮಾಡಿರುವುದನ್ನು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಬಿತ್ತರಿಸಿದೆ ಎಂದರು. ಎಸ್‌ಡಿಪಿಐ ಮತ್ತು […]

ವರ್ಷಾಂತ್ಯದ ವೇಳೆಗೆ ಹೊಸ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ!

Wednesday, December 13th, 2017
siddarmaiah

ಬೆಂಗಳೂರು: ಇಂದಿನಿಂದ ‘ನವ ಕರ್ನಾಟಕ ನಿರ್ಮಾಣ’ ಯಾತ್ರೆಯನ್ನು ಆರಂಭಿಸಲಿರುವ ಸಿಎಂ ಸಿದ್ದರಾಮಯ್ಯ ವರ್ಷಾಂತ್ಯದ ವೇಳೆಗೆ ಅಪರೂಪದ ದಾಖಲೆಯೊಂದನ್ನು ಸೃಷ್ಟಿಸಲಿದ್ದಾರೆ. ಸಿದ್ದರಾಮಯ್ಯನವರ ಹೊಸ ದಾಖಲೆ ಏನಿರಬಹುದು ಎಂಬ ಕುತೂಹಲವೇ.? ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ನಂತರ ಅತ್ಯಂತ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ ಅವರ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ. 1999 ರ ಅಕ್ಟೋಬರ್ 11 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಎಸ್.ಎಂ. ಕೃಷ್ಣ ಅವರು 2004 ರ ಮೇ 28 ರ ತನಕ ಕರ್ನಾಟಕದ […]

ಸಂಪೂರ್ಣ ಮದ್ಯ ನಿಷೇಧ ಮಾಡಲು ಮೋದಿಗೆ ಹೇಳಿ:ಸಿದ್ದರಾಮಯ್ಯ

Tuesday, November 21st, 2017
Siddaramaiah

ಬೆಳಗಾವಿ:ಸದನದಲ್ಲಿ ಇಂದು ಮಂಗಳವಾರ ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ಸದಸ್ಯರ ನಡುವೆ ವಾಗ್ಸಮರ ನಡೆದಿದೆ.ಈ ವೇಳೆ ದೇಶಾದ್ಯಂತ ಸಂಪೂರ್ಣ ಮದ್ಯ ನಿಷೇಧ ಮಾಡಲು ನಿಮ್ಮ ಮೋದಿಗೆ ಹೇಳಿ’ ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದರು. ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಅವರ ಮದ್ಯ ನಿಷೇಧ ಕುರಿತ ಪ್ರಸ್ತಾವಕ್ಕೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿ ‘ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಇಲ್ಲ’ ಎಂದರು. ಸಿ.ಟಿ.ರವಿ ಅವರು ‘ನಾವು ಸರಾಯಿ ನಿಷೇಧ ಮಾಡಿ ಒಂದು ಹೆಜ್ಜೆ […]

ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ: ರೈ

Saturday, November 11th, 2017
ramanath rai

ಮಂಗಳೂರು :ಮುಖ್ಯ ಮಂತ್ರಿ ಸಿದ್ಧರಾಮಯ್ಯ ವಿರುದ್ಧ ಯಡಿಯೂರಪ್ಪ ಅವರು ಸಡಿಲ ಭಾಷೆ ಬಳಸಿರುವುದು ಅರಣ್ಯ ಸಚಿವರ ಸಿಟ್ಟಿಗೆ ಕಾರಣ. ಬಿಜೆಪಿ ನಾಯಕ ಯಡಿಯೂರಪ್ಪ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕಿಡಿ ಕಾರಿದ್ದಾರೆ. ರಮಾನಾಥ ರೈ ‘ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೂರ್ಖ ಎಂದು ಕರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆ ಖಂಡನೀಯ. ಮುಂಬರುವ ದಿನಗಳಲ್ಲಿ ಯಾರು ಮೂರ್ಖರು ಎಂಬುದನ್ನು ದಕ್ಷಿಣ ಕನ್ನಡ ಜಿಲ್ಲೆಯ ಪ್ರಜ್ಞಾವಂತ ಜನರೇ ಉತ್ತರ […]

“ಜನಾಶೀರ್ವಾದ’ ಕ್ಕೆ ಸಿದ್ದರಾಮಯ್ಯ ಸಮಾಲೋಚನೆ

Friday, November 3rd, 2017
janashirvada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಹಾಗೂ ಜೆಡಿಎಸ್‌ ರ್ಯಾಲಿಗೆ ಸಡ್ಡು ಹೊಡೆಯಲು  “ಜನಾಶೀರ್ವಾದ’ ರ್ಯಾಲಿಗೆ ಮುಂದಾಗಿದ್ದಾರೆ. ಸರಕಾರದ ನಾಲ್ಕೂವರೆ ವರ್ಷಗಳ ಸಾಧನೆಗಳನ್ನು ಜನರ ಮುಂದಿಟ್ಟು ಮತ್ತೂಮ್ಮೆ ಮತದಾರರು ಆಶೀ ರ್ವಾದ ಮಾಡಿ ಎಂದು ಮನವಿ ಮಾಡುವ ಉದ್ದೇಶ ಈ ರ್ಯಾಲಿಯದು ಎನ್ನಲಾಗಿದೆ. ರಾಜ್ಯದ 224  ಕ್ಷೇತ್ರ ಗಳಲ್ಲೂ ರ್ಯಾಲಿ ನಡೆಸಿ ತಮ್ಮ ಶಕ್ತಿ ಪ್ರದರ್ಶಿಸುವುದು ಜನಾಶೀರ್ವಾದ ರ್ಯಾಲಿಯ ಗುರಿ. ಈ ಬಗ್ಗೆ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದ್ದು, ರ್ಯಾಲಿಯ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ […]

ನೆಹರೂ ಮೈದಾನದಲ್ಲಿ 4 ಹಾಗೂ 5ರಂದು ಇಂಡಿಯನ್‌ ಕರಾಟೆ ಚಾಂಪಿಯನ್‌ಶಿಪ್‌

Friday, November 3rd, 2017
karate

ಮಂಗಳೂರು: ಇಂಡಿಯನ್‌ ಕರಾಟೆ ಚಾಂಪಿಯನ್‌ಶಿಪ್‌ ನಗರದ ನೆಹರೂ ಮೈದಾನದಲ್ಲಿ ಈ ತಿಂಗಳ 4 ಹಾಗೂ 5ರಂದು ನಡೆಯಲಿದೆ. ಕರಾಟೆ ಚಾಂಪಿಯನ್‌ಶಿಪ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಲಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ 2 ಸಾವಿರಕ್ಕೂ ಹೆಚ್ಚು ಸ್ಪರ್ಧಾಳುಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದು ಕರಾಟೆಯ ರೋಚಕ ಅನುಭವ ನೀಡುವ ಜತೆಗೆ ಉತ್ಸಾಹಿ ತರುಣರಿಗೆ ಸ್ಫೂರ್ತಿಯಾಗಲಿದೆ. ಈ ನಿಟ್ಟಿನಲ್ಲಿ ಕರಾವಳಿ ಮಣ್ಣಿನಲ್ಲಿ ಅರಳಿದ ಕರಾಟೆಯ ಕುರಿತ ಡೀಟೈಲ್ ಸ್ಟೋರಿ ಇಲ್ಲಿದೆ. ಕರಾಟೆ ಅತ್ಯಂತ ಪ್ರಾಚೀನ ಸಮರಕಲೆಗಳಲ್ಲೊಂದು. ಭಾರತದಲ್ಲಿ ಕೂಡಾ […]

ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಸಿಎಂ ಭೇಟಿ

Monday, October 23rd, 2017
Darmasthala

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ, ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಟಿ.ಬಿ. ಜಯಚಂದ್ರ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್‌ ಡಿಸೋಜ ಸೇರಿದಂತೆ ಹಲವರು ಜೊತೆಯಲ್ಲಿದ್ದು ಸಾಥ್‌ ನೀಡಿದರು

ಗ್ರಾಮೀಣ ಜನತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳಷ್ಟು ಕೊಡುಗೆ ನೀಡಿದೆ: ಸಿದ್ದರಾಮಯ್ಯ

Monday, October 23rd, 2017
SKDRDP

ಮಂಗಳೂರು: ಗ್ರಾಮೀಣ ಪ್ರದೇಶಗಳ ಪ್ರಗತಿ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೊಡ್ಡ ಕೊಡುಗೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಗ್ರಾಮೀಣ ಜನತೆಯ ನೆಮ್ಮದಿಯ ಜೀವನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳಷ್ಟು ಕೊಡುಗೆ ನೀಡಿದೆ. ಯೋಜನೆಯ ಕಾರ್ಯಕ್ರಮಗಳು ಬಡತನ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದರು. ಜನ ಸ್ವಾಭಿಮಾನದಿಂದ […]