Blog Archive

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

Monday, May 13th, 2013
Siddaramaiah

ಬೆಂಗಳೂರು : ಅಕ್ಷಯ ತೃತೀಯ ಮತ್ತು ಬಸವ ಜಯಂತಿಯ ವಿಶೇಷ ದಿನವಾದ ಸೋಮವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ   ಕರ್ನಾಟಕ ರಾಜ್ಯದ 28 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಅಧಿಕಾರ ಸ್ವೀಕರಿಸಿದರು. ಸಹಸ್ರಾರು ಅಭಿಮಾನಿಗಳಿಂದ ಕಿಕ್ಕಿರಿದು ತುಂಬಿದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ರವರು ಸಿದ್ದರಾಮಯ್ಯನವರಿಗೆ ಪ್ರತಿಜ್ಗ್ನಾ ವಿಧಿ ಬೋಧಿಸಿದರು. ಭಯ, ಪಕ್ಷಪಾತ, ಯಾವುದೇ ದ್ವೇಷವಿಲ್ಲದೆ, ರಾಜ್ಯದ ಜನರಿಗೆ ಸಂವಿಧಾನಬದ್ದವಾಗಿ ಹಾಗು ಕಾನೂನಿಗೆ ಅನುಸಾರವಾಗಿ ಆಡಳಿತ ನೀಡುತ್ತೇನೆ ಎಂದು ಸತ್ಯದ ಹೆಸರಿನಲ್ಲಿ ಸಿದ್ದರಾಮಯ್ಯನವರು ಪ್ರಮಾಣವಚನ […]

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಹಿನ್ನಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ

Saturday, May 11th, 2013
DK celebration victory

ಮಂಗಳೂರು : ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಿಹಿತಿಂಡಿ ವಿತರಿಸಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಿಸಿದರು. ಬಿಜೆಪಿ ಯ ಆಡಳಿತದಿಂದ ಬೇಸತ್ತ ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಗೆಲ್ಲಿಸುವ ಮೂಲಕ ಮತ್ತೊಮ್ಮೆ  ರಾಜ್ಯ ರಾಜಕೀಯದಲ್ಲಿ ಅಭಿವೃದ್ದಿಯ ಶಕೆ ಆರಂಭವಾಗುವಂತೆ ಮಾಡಿದ್ದಾರೆ ಎಂದು ಅಶ್ರಫ್ ಹೇಳಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಪೂರ್ ಮಾತನಾಡಿ, ಹಿಂದುಳಿದ ವರ್ಗದ […]

ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ

Tuesday, April 9th, 2013
Siddaramaiah CM candidate

ಉಡುಪಿ : ಬಿಜೆಪಿಯ ಭದ್ರ ಕೋಟೆಯಾಗಿದ್ದ ಉಡುಪಿಯಲ್ಲಿ ಸ್ಥಳೀಯ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲೆ ರಾಜ್ಯದಲ್ಲೂ ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಹೊಂದಿರುವ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿರುವ ಸಿದ್ದರಾಮಯ್ಯ ನವರೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದಾಗಿ ಘೋಷಿಸಿದ್ದಾರೆ. ಸೋಮವಾರ ಉಡುಪಿ ತಾಲುಕಿನ ಪರ್ಕಳದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿದ್ದಾರಮಯ್ಯನವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯನವರೆ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿ ದೇವಾಲಯದಲ್ಲಿ  ವಿಶೇಷ ಪೂಜೆ ಸಲ್ಲಿಸಿದರು.