Blog Archive

ಎಚ್.ಡಿ.ದೇವೇಗೌಡ-ಬಿಎಸ್‌ವೈ ಮಾತುಕತೆ ಗೊತ್ತಿಲ್ಲ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Wednesday, November 6th, 2019
siddaramaiahh

ಉಡುಪಿ : ಎಚ್.ಡಿ.ದೇವೇಗೌಡ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ನಡೆದಿದೆ ಎನ್ನಲಾದ ಫೋನ್ ಸಂಭಾಷಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಮೈತ್ರಿ ಸರ್ಕಾರ ಪತನಕ್ಕೆ ಯಾರು ಕಾರಣರು ಎಂಬುದಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಬುಧವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ಆಗಮಿಸಿದ ಅವರು ಕಾಪು ಸಾಯಿರಾಧಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಳ್ಳುತ್ತದೆಯೇ ಎಂಬುದು ನನಗೆ ಗೊತ್ತಿಲ್ಲ. ಇವರ […]

ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಸಿ.ಎಚ್.ವಿಜಯಶಂಕರ್ ಇಂದು ಬಿಜೆಪಿಗೆ ಮರುಸೇರ್ಪಡೆ

Tuesday, November 5th, 2019
CH-Vijayshankar

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ, ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಇಂದು ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ವಿಜಯಶಂಕರ್ ಬಿಜೆಪಿ ಸೇರ್ಪಡೆಗೊಂಡರು. ಈ ವೇಳೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿ.ಜೆ.ಪುಟ್ಟಸ್ವಾಮಿ ಸೇರಿದಂತೆ ಮೈಸೂರು ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಿಎಂ, ವಿಶೇಷ ಕಾರಣಕ್ಕೆ ವಿಜಯಶಂಕರ್ ಅವರು ಪಕ್ಷ ಬಿಟ್ಟಿದ್ದರು. ಆದರೆ ಬಹಳ ದಿನಗಳಿಂದಲೂ ಬಿಜೆಪಿ ಸೇರಲು ಮುಂದಾಗಿದ್ದರು. […]

ಸಿದ್ದರಾಮಯ್ಯರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು : ಜನಾರ್ದನ ಪೂಜಾರಿ ಆರೋಪ

Tuesday, November 5th, 2019
Janardhan-Poojary

ಮಂಗಳೂರು : ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ, ಅವರು ಪಕ್ಷವನ್ನು ಮುಗಿಸಿಯೇ ಹೋಗುವುದು. ಅವರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು, ಹೈಕಮಾಂಡ್ ಮಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ. ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೇಳಿಕೆ ಬಗ್ಗೆ ತನ್ನ ವಿರುದ್ಧ ದೂರು ನೀಡಲಿ, ಪಕ್ಷದಿಂದ ತೆಗೆದು ಹಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನಪಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆನ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಕರೆದರೂ ನಾನು ಹೋಗುವುದಿಲ್ಲ. ಅವರು ಏನು […]

ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದ್ದಾರೆ : ಶೋಭಾ ಕರಂದ್ಲಾಜೆ

Wednesday, October 30th, 2019
Shobha

ಉಡುಪಿ : ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡ ನಂತರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳೆದುಕೊಂಡಿದ್ದಾರೆ. ಕಾಂಗ್ರೆಸನ್ನು ಬ್ಲ್ಯಾಕ್‍ಮೇಲ್ ಮಾಡಿ ವಿಪಕ್ಷದ ನಾಯಕರಾಗಿದರು. ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯಗೆ ಯಾವುದೇ ಹಿಡಿತ ಇಲ್ಲ. ಕಾಂಗ್ರೆಸ್ ಬಣಗಳಾಗಿ ಒಡೆದಿದೆ. ಸಿದ್ದರಾಮಯ್ಯ ಬಣ, ಪರಮೇಶ್ವರ್ ಬಣ, ಡಿಕೆಶಿದ್ದು ಹೀಗೆ ಬೇರೆ ಬೇರೆ ಬಣಗಳನ್ನು ನಿಭಾಯಿಸಲಾಗದೆ. ಬಾಯಿಗೆ ಬಂದದ್ದು […]

ಮಂಗಳೂರು : ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದ ಸಾವರ್ಕರ್‌ಗೆ ಭಾರತ ರತ್ನ; ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ

Friday, October 18th, 2019
siddaramaiah

ಮಂಗಳೂರು : ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ. ಆದರೆ ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತ ರತ್ನ ನೀಡಲಿ ಎಂದು ಟೀಕಿಸಿದರು. ರಾಜ್ಯ ಬಿಜೆಪಿ […]

ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳೂರು ಬಿಟ್ಟು ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

Friday, October 18th, 2019
Siddaramaiah

ಮಂಗಳೂರು :  ನಳಿನ್ ಕುಮಾರ್ ಕಟೀಲ್ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ, ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ ಸಿದ್ದರಾಮಯ್ಯ ಹೇಳಿದರು. ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ ಎಂದು ಹೇಳಿಕೆ ತಿಳಿಸಿದ್ದಾರೆ. ನಂತರ ಮಾತನಾಡಿದ ಅವರು ಕಾವೇರಿ ಅತಿಥಿ ಗೃಹವನ್ನು ನಾನು ಕೇಳಿದ್ದೇನೆ ಅದು ನೀಡುವುದು […]

ಅಂಬೇಡ್ಕರ್ ಅವರನ್ನು ಮರೆತರೆ ನಮಗೆ ನಾವೇ ಅನ್ಯಾಯ ಮಾಡಿಕೊಂಡಂತೆ : ಮಾಜಿ ಸಿಎಂ ಸಿದ್ದರಾಮಯ್ಯ

Monday, October 14th, 2019
saddaramaih

ಮೈಸೂರು : ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರನ್ನು ಮರೆತರೆ ನಮಗೆ ನಾವೇ ಅನ್ಯಾಯ ಮಾಡಿಕೊಂಡಂತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಟಿ.ನರಸೀಪುರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ರಾಜಕೀಯ ಸ್ವಾತಂತ್ರ್ಯ ಕೇವಲ ಮತ ಹಾಕುವಾಗ ಮಾತ್ರ ಇರುತ್ತದೆ. ನಾವೆಲ್ಲ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ದೇಶದಲ್ಲಿ ಸಂವಿಧಾನ ಬದಲಾವಣೆ ಮಾಡಲು ಯಾರಾದರೂ ಹೋದರೆ ರಕ್ತಪಾತವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅಂಬೇಡ್ಕರ್ ಒಂದು ಜಾತಿಗೆ ಸಿಮೀತವಾಗಿಲ್ಲ. […]

ಕನಿಷ್ಠ ಆರು ದಿನ ಅಧಿವೇಶನ ವಿಸ್ತರಿಸಲು ಸಿದ್ದರಾಮಯ್ಯ ಒತ್ತಾಯ

Friday, October 11th, 2019
siddaramaiah

ಬೆಂಗಳೂರು : ವಿಧಾನಸಭೆ ಕಲಾಪವನ್ನು ಇನ್ನೂ ಆರು ದಿನ ವಿಸ್ತರಿಸಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಚಳಿಗಾಲದ ಅಧಿವೇಶನವನ್ನು ಕೇವಲ ಮೂರು ದಿನ ಮಾತ್ರ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮೂರು ದಿನ ನೆರೆ ಹಾಗೂ ಕನಿಷ್ಠ ಮೂರು ದಿನ ಬಜೆಟ್ ಕುರಿತು ಚರ್ಚೆ ನಡೆಯಬೇಕಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಇವೆಲ್ಲವೂ ಚರ್ಚೆಯಾಗುತ್ತಿತ್ತು, ನೀವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿಲ್ಲ ಯಡಿಯೂರಪ್ಪನವರೇ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೀರ, ನಿಮಗೆಲ್ಲಾ ತಿಳಿದಿದೆ ಪಲಾಯನವಾದ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆಯಿದ್ದ […]

ಉಪಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ : ಸಿದ್ದರಾಮಯ್ಯ

Monday, September 30th, 2019
siddaramaiah

ರಾಯಚೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ನಡೆಸುವುದು ತಂತಿ ಮೇಲೆ ನಡೆದಷ್ಟು ಕಷ್ಟವಾಗಿದ್ದರೆ ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಲ್ಲಿನ ವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಸೋಮವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ತಂತಿ ಮೇಲೆ ನಡೆವಾಗ ಬಿದ್ದುಗಿದ್ದಾರು ಎಂದು ಲೇವಡಿ ಮಾಡಿದರು. ಅವರೊಬ್ಬ ವೀಕ್ ಚೀಫ್ ಮಿನಿಸ್ಟರ್. ಪಕ್ಷದಲ್ಲಿ ಅವರ ಆಟ ನಡೆಯುತ್ತಿಲ್ಲ. ರೆಕ್ಕೆ ಪುಕ್ಕ ಕತ್ತರಿಸಿಬಿಟ್ಟಿದ್ದಾರೆ ಎಂದರು. ಉಪಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಆಗ ಸರ್ಕಾರ ವಿಸರ್ಜಿಸಿ ಮಧ್ಯಂತರ […]

ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು : ಬಸವರಾಜ ಹೊರಟ್ಟಿ

Tuesday, September 24th, 2019
kumarswamy

ಹುಬ್ಬಳ್ಳಿ : ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಅವರು ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ತಿಂಗಳ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಇಬ್ಬರು ನಾಯಕರು ಇದೀಗ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಆರೋಪಗಳನ್ನು ಮಾಡುತ್ತಿರುವುದು ಎರಡೂ ಪಕ್ಷಗಳಿಗೂ ಒಳ್ಳೆಯದಲ್ಲ ಎಂಬುದನ್ನು […]