ವೀಕೆಂಡ್ ಕರ್ಫ್ಯೂ ಹಾಗೂ ಕೊರೋನಾ ನಿರ್ಬಂಧಗಳನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ
Friday, January 7th, 2022ಮಂಗಳೂರು : ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದಲ್ಲಿಂದು (07-01-2021) ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ ಅವೈಜ್ಞಾನಿಕ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿಯವರು, *ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬೊಮ್ಮಯಿ […]