ಸೌಜನ್ಯ ಪ್ರಕರಣದ ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ

Wednesday, November 8th, 2023
ಸೌಜನ್ಯ ಪ್ರಕರಣದ ಆರೋಪಿ ಸಂತೋಷ್ ರಾವ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ

ಮಂಗಳೂರು : ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರ ಅಕ್ಟೋಬರ್ 10ರಂದು ನಡೆದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಕೊಲೆಪ್ರಕರಣದಲ್ಲಿದ್ದ ಆರೋಪಿ ಸಂತೋಷ್ ರಾವ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 16 ರಂದು ಖುಲಾಸೆಗೊಳಿಸಿತ್ತು ಮತ್ತು ಪ್ರಕರಣದಲ್ಲಿ ಅವರನ್ನು ಬಂಧಿಸಿದ್ದಕ್ಕಾಗಿ ತನಿಖಾಧಿಕಾರಿ ಮತ್ತು ಪ್ರಾಸಿಕ್ಯೂಷನ್ ಅನ್ನು ತರಾಟೆಗೆ ತೆಗೆದುಕೊಂಡಿತ್ತು. ತನಿಖೆಗೆ ಅಡ್ಡಿಪಡಿಸಿದ […]

ಯೋಗೇಶ್ ಗೌಡ ಕೊಲೆ ಪ್ರಕರಣ : ಸಿಬಿಐ ತಂಡ ತನಿಖೆ ಆರಂಭ

Saturday, September 28th, 2019
yogish-gawda

ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಸಿಬಿಐ ತಂಡ ಆಗಮಿಸಿ ‌ಮಾಹಿತಿ‌ ಕಲೆ ಹಾಕುತ್ತಿದೆ.‌ ಸಿಬಿಐ ಅಧಿಕಾರಿಗಳು ಯೋಗೇಶ್ ಗೌಡ ಸಹೋದರ ಗುರುನಾಥ ಗೌಡ ಹಾಗೂ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಧಾರವಾಡ ತಾಲೂಕಿನ ಗೋವನಕೊಪ್ಪದಲ್ಲಿರುವ ಗುರುನಾಥಗೌಡ ತೋಟದ ಮನೆಯಲ್ಲಿ ಸಿಬಿಐ ತಂಡ ಮಾಹಿತಿ ಪಡೆದುಕೊಳ್ಳುತ್ತಿದೆ. ಘಟನೆಯಲ್ಲಿ ಪ್ರಭಾವಿಗಳ ಕೈವಾಡವಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ರಾಜ್ಯ […]

ನವದೆಹಲಿ : ಪಿ.ಚಿದಂಬರಂ ಸೆಪ್ಟೆಂಬರ್ 2 ರವರೆ ಸಿಬಿಐ ವಶದಲ್ಲಿ

Friday, August 30th, 2019
chidambaram

ನವದೆಹಲಿ : ಐಎನ್‌ಎಕ್ಸ್‌ ಮೀಡಿಯಾ ಹಗರಣ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಪಿ.ಚಿದಂಬರಂ ಅವರು ಸೆಪ್ಟೆಂಬರ್ 2 ರವರೆಗೂ ಸಿಬಿಐ ವಶದಲ್ಲಿಯೇ ಇರಲಿದ್ದಾರೆ. ಚಿದಂಬರಂ ಅವರನ್ನು ಆಗಸ್ಟ್ 30 ರವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶ ನೀಡಲಾಗಿತ್ತು. ಇಂದು ಮತ್ತೆ ಅರ್ಜಿ ಸಲ್ಲಿಸಿದ ಸಿಬಿಐ ಮತ್ತೆ ಐದು ದಿನಗಳ ಕಾಲ ಸಿಬಿಐಗೆ ವಶಕ್ಕೆ ನೀಡುವಂತೆ ಕೇಳಿತ್ತು. ಆದರೆ ಇದಕ್ಕೆ ನಿರಾಕರಿಸಿರುವ ನ್ಯಾಯಾಲಯವು ಸೆಪ್ಟೆಂಬ್ ಎರಡರ ವರೆಗೆ ಮಾತ್ರವೇ ಚಿದಂಬರಂ ಅವರನ್ನು ಸಿಬಿಐ ವಶಕ್ಕೆ ನೀಡಿದೆ. ಸೆಪ್ಟೆಂಬರ್ 5 ವರೆಗೆ […]

ಸಿಬಿಐಗೆ ಹೊಸ ನಿರ್ದೇಶಕರ ನೇಮಕ: ಕ್ರಮ ಸಮರ್ಥಿಸಿಕೊಂಡ ಕೇಂದ್ರ

Wednesday, October 24th, 2018
arun-jetley

ನವದೆಹಲಿ: ಸಿಬಿಐಗೆ ನೂತನ ನಿರ್ದೇಶಕರನ್ನು ನೇಮಕ ಮಾಡಿರುವ ಬಗ್ಗೆ ಸಮರ್ಥನೆ ಮಾಡಿಕೊಂಡಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಸಿಬಿಐನಲ್ಲಿ ವಿಶ್ವಾಸಾರ್ಹತೆ ಉಳಿಯುವುದು ಅಗತ್ಯ ಎಂದು ಹೇಳಿದ್ದಾರೆ. ಸಂಪುಟ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐನ ಸ್ಪೆಷಲ್ ಡೈರೆಕ್ಟರ್, ಸಿಬಿಐನ ಡೈರೆಕ್ಟರ್ ಮೇಲೆ ಆರೋಪ ಮಾಡಿದ್ದಾರೆ. ಸಂಸ್ಥೆಯ ಹಿರಿಯ ಅಧಿಕಾರಿಗಳೇ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ ಇಬ್ಬರೂ ಆರೋಪ ಹೊತ್ತಿರುವಾಗ ಪ್ರಕರಣದ ತನಿಖೆಯನ್ನು ಯಾರು ನಡೆಸುತ್ತಾರೆ? ಎಂದು ಪ್ರಶ್ನಿಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ, […]

ಸೌಜನ್ಯ ಕೊಲೆ ಪ್ರಕರಣ: ಸಿಬಿಐ ವಿಶೇಷ ತನಿಖೆಗೆ ಸೌಜನ್ಯ ಪೋಷಕರ ಸ್ವಾಗತ

Wednesday, February 15th, 2017
Soujanya-case

ಮಂಗಳೂರು: ಸೌಜನ್ಯಳ ಅಸಹಜ ಸಾವಿನ ಪ್ರಕರಣವನ್ನು ಮರುತನಿಖೆಗೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿರುವುದನ್ನು ಮೃತಳ ಪೋಷಕರು ಸ್ವಾಗತಿಸಿದ್ದಾರೆ. ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಮೂವರನ್ನು ತನಿಖೆಗೊಳಪಡಿಸಿದರೆ ಪ್ರಕರಣಕ್ಕೆ ನ್ಯಾಯ ಸಿಗುತ್ತದೆ ಎಂದು ಆಕೆಯ ತಾಯಿ ಕುಸುಮಾವತಿ ಆಶಾವಾದ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಳ ಪ್ರಕರಣ ಆರಂಭದಿಂದಲೇ ಸರಿಯಾಗಿ ತನಿಖೆಯಾಗಿರಲಿಲ್ಲ. ರಾತ್ರಿಯಾದರೂ ಮನೆಗೆ ಬಾರದ ಮಗಳನ್ನು ಅಂದು ಸಾಕಷ್ಟು ಹುಡುಕಲಾಗಿತ್ತು. ಆದರೆ, ಮರುದಿನ ಹುಡುಕಾಡಿದ ಜಾಗದಲ್ಲೇ ಅಂದರೆ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಕೂಗಳತೆ ದೂರದಲ್ಲೇ […]

ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಬಿಐಗೊಪ್ಪಿಸಿ ಕ್ರಮ ಕೈಗೊಳ್ಳಬೇಕು: ಜನಾರ್ದನ ಪೂಜಾರಿ

Friday, December 16th, 2016
janardhana-poojary

ಮಂಗಳೂರು: ಮೇಟಿ ಅವರ ರಾಸಲೀಲೆ ಪ್ರಕರಣದ ತನಿಖೆಯನ್ನು ಸಿಬಿಐಗೊಪ್ಪಿಸಬೇಕು ಹಾಗೂ ಇದೇ ರೀತಿ ಇನ್ನಿಬ್ಬರು ಸಚಿವರು, ಮೂವರು ಶಾಸಕರು ಕಾಮ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರ್‌ಟಿಐ ಕಾರ್ಯಕರ್ತ ನೀಡಿರುವ ಮಾಹಿತಿಯಂತೆ ಅವರ ಹೆಸರುಗಳನ್ನು ಬಹಿರಂಗಪಡಿಸಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌‌ ಹಿರಿಯ ನಾಯಕ ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಟಿಯ ದುರ್ನಡತೆಯಿಂದಾಗಿ ರಾಷ್ಟ್ರ ಮಟ್ಟದಲ್ಲೇ ಅಲ್ಲೋಲ ಕಲ್ಲೋಲವುಂಟಾಗಿದೆ. ಪಕ್ಷಕ್ಕೂ ಹಾನಿಯಾಗಿದೆ. ಪ್ರಕರಣದ ಸಿಡಿ ಬಿಡುಗಡೆಯಾಗುವ ಮೊದಲೇ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಅವರೊಂದಿಗೆ ಮಾತನಾಡದೆ, ಸಿಡಿ ತರಿಸಿಕೊಳ್ಳಲು ಮುಂದಾಗದೇ […]

ಸಿಐಡಿ ತನಿಖೆಯಿಂದ ನ್ಯಾಯ ಸಿಗದೇ ಹೋದರೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು: ಗೀತಾ ಭಾಸ್ಕರ್‌

Tuesday, August 30th, 2016
Baskar-Shetty-murder-case

ಕಾಪು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣವನ್ನು ನಡೆಸುತ್ತಿರುವ ಸಿಐಡಿ ತಂಡದ ತನಿಖೆಯಲ್ಲಿ ವಿಶ್ವಾಸವಿದೆ, ಯಾವುದೇ ಒತ್ತಡ ರಹಿತವಾಗಿ ತನಿಖೆ ನಡೆಯುತ್ತಿದೆ ಎನ್ನುವ ನಂಬಿಕೆ ಇದೆ. ಸಿಐಡಿ ತನಿಖೆಯಿಂದ ಸೂಕ್ತ ನ್ಯಾಯ ಸಿಗದೇ ಹೋದರೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್‌ ಅವರ ಮೂಲಕ ಒತ್ತಡ ಹೇರಿ ಸಿಬಿಐ ತನಿಖೆಗೆ ಆಗ್ರಹಿಸಲಾಗುವುದು ಎಂದು ಅಂತಾರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಯ ಮಹಿಳಾ ಅಧ್ಯಕ್ಷೆ ಗೀತಾ ಭಾಸ್ಕರ್‌ ಶೆಟ್ಟಿ ಪುಣೆ ಅವರು ತಿಳಿಸಿದ್ದಾರೆ. ಅವರು ಸೋಮವಾರ ಕಟಪಾಡಿ ಸರಕಾರಿ ಗುಡ್ಡೆಯಲ್ಲಿರುವ ಕೆ. […]

ಧರ್ಮಸ್ಥಳ ಸುತ್ತಮುತ್ತ ನಡೆದ ಎಲ್ಲಾ ಅಸಹಜ ಸಾವುಗಳನ್ನು ಸಿಬಿಐಗೆ ಒಪ್ಪಿಸಲು ಮನವಿ: ಎಸ್‍ಎಫ್‍ಐ

Friday, November 8th, 2013
SFI

ಮಂಗಳೂರು : ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐಗೆ ವಹಿಸಲು ಮತ್ತು ಧರ್ಮಸ್ಥಳ ಸುತ್ತಮುತ್ತ ನಡೆದ ಅಸಹಜ ಸಾವು ಗಳನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸಿ ನ. 7 ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ  ಪ್ರತಿಭಟನೆ ನಡೆಯಿತು. ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ)ನ ಕಾರ್ಯದರ್ಶಿ ಜೀವನ್‍ರಾಜ್ ಕುತ್ತಾರ್  ಮಾತನಾಡಿ , ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಈವರೆಗೆ ನಡೆದ ಬಹುತೇಕ ಕೊಲೆ ಮತ್ತು ಅತ್ಯಾಚಾರಗಳು ದ್ವೇಷದಿಂದ ನಡೆದದ್ದು. ಇಲ್ಲಿ ಜನರ ಆಸ್ತಿ ಲಪಟಾಯಿಸುವ ಉದ್ದೇಶ ಪ್ರಮುಖವಾಗಿತ್ತು ಎಂದು ಹೇಳಿದರು. […]

ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ : ಶ್ರೀರಾಮ ಸೇನೆ

Saturday, October 19th, 2013
shri-ram-sena

ಮಂಗಳೂರು: ಸೌಜನ್ಯ ಹತ್ಯೆ ಪ್ರಕರಣವಾಗಿ ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅವಹೇಳನಕಾರಿ ಮಾತುಗಳು ಕೇಳಿಬರುತ್ತಿದೆ. ಇದನ್ನು ಶ್ರೀರಾಮಸೇನೆ ಸಹಿಸುವುದಿಲ್ಲ, ಅದಕ್ಕಾಗಿ ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಶ್ರೀರಾಮ ಸೇನೆ ರಾಜ್ಯ ಉಪಾ ಧ್ಯಕ್ಷ ಕುಮಾರ್ ಮಾಲೆಮಾರ್ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಕುಮಾರ್ ಮಾಲೆಮಾರ್ ಅವರು, ಸೌಜನ್ಯ ಸಾವಿನ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಧ್ವನಿ ಎತ್ತಿದ್ದಾರೆ. ಆದರೆ ಇದನ್ನು ಖಂಡಿಸುವವರು ತುಂಬಾ […]

ಸರ್ವಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಸಿಬಿಐಗೆ ನೀಡುವಂತೆ ಅಗ್ರಹಿಸಿ ಪ್ರತಿಭಟನೆ

Saturday, October 19th, 2013
Sowjanya's-birthday

ಮಂಗಳೂರು : ಸೌಜನ್ಯ ಜನ್ಮ ದಿನದ ಹಿನ್ನೆಲೆಯಲ್ಲಿ ಆಕೆಯ ಸಾವಿಗೆ ನ್ಯಾಯ ಅಗ್ರಹಿಸಿ, ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿ ಮತ್ತು ಆಕೆಯ ಕುಟುಂಬಕ್ಕೆ ರೂ.ಐದು ಲಕ್ಷ ಪರಿಹಾರ ನೀಡುವಂತೆ ಅಗ್ರಹಿಸಿ ಸರ್ವಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಕ್ಯಾಂಡಲ್ ಪ್ರತಿಭಟನೆಯು ಶುಕ್ರವಾರ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಸರ್ವಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ದಿನಕರ್ ಶೆಟ್ಟಿ ಕ್ಯಾಂಡಲ್ ಪ್ರತಿಭಟನೆಯನ್ನು ಉದ್ದೇಶಿಸಿ ಕಾಮುಕರ ದುಷ್ಟತನಕ್ಕೆ ಬಲಿಯಾದ ಸೌಜನ್ಯ ಮರಳಿ ಈ ಭೂಮಿಗೆ ಬರುವುದು ಅಸಾಧ್ಯವಾದರೂ ಕೊಲೆ ಆರೋಪಿ […]