ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ವಂಚನೆ ಪ್ರಕರಣ ಸಿಬಿಐಗೆ ಒಪ್ಪಿಸಲು ಒತ್ತಾಯ

Tuesday, June 11th, 2024
vruksha

ಮಂಗಳೂರು: ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ವೃಕ್ಷ ಬಿಸಿನೆಸ್ ಸೊಲ್ಯೂಷನ್ ಮತ್ತು ಕೆನರಾ ಫಿಶ್ ಫಾರ್ಮರ್ಸ್ ಕಂಪೆನಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ವಂಚನೆ ಎಸಗಿರುವ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. “ವೃಕ್ಷ ಬಿಸಿನೆಸ್ ಸೊಲ್ಯೂಶನ್ ಎಂಬ ಸಂಸ್ಥೆಯು ಮಂಗಳೂರಿನಲ್ಲಿ ಸ್ಥಾಪನೆಯಾಗಿ ಗ್ರಾಹಕರ ಹಣಕ್ಕೆ ಹೆಚ್ಚಿನ ಬಡ್ಡಿ ದರ ನೀಡುವುದಾಗಿ ನಂಬಿಸಿ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದಾದ್ಯಂತ ಹಣ […]

ಬಂಟ್ವಾಳ ತಾಲೂಕು ಸಾಮಾಜಿಕ ಹೋರಾಟ ಸಮಿತಿ ಆಶ್ರಯದಲ್ಲಿ ಬಿ.ಸಿ. ರೋಡ್‌ ತಾಲೂಕು ಕಚೇರಿ ಎದುರು ಪ್ರತಿಭಟನೆ

Friday, November 1st, 2013
sowjanya

ಬಂಟ್ವಾಳ:  ಬಂಟ್ವಾಳ ತಾಲೂಕು ಸಾಮಾಜಿಕ ಹೋರಾಟ ಸಮಿತಿ ಆಶ್ರಯದಲ್ಲಿ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಹಾಗೂ ಜಿಲ್ಲೆಯಲ್ಲಿ ನಡೆದ ಇತರ ಅಸಹಜ ಸಾವಿನ ಪ್ರಕರಣಗಳ ಸಿಬಿಐ ತನಿಖೆ ಆಗಲಿ ಎಂದು ಅ. 31ರಂದು ಬಿ.ಸಿ. ರೋಡ್‌ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಸಿದ್ದಕಟ್ಟೆಯ ಭಾರತಿ, ಅಡ್ಯಾರ್‌ನ ಅಕ್ಷತಾ, ಮೂಡಬಿದಿರೆಯ ಸುಚರಿತ ಸಹಿತ ಎಲ್ಲ ಅಸಹಜ ಪ್ರಕರಣಗಳ ತನಿಖೆ ನಡೆಸಬೇಕು ಎಂದು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಮಾಯಕ ಮಹಿಳೆಯರ […]

ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸರಕಾರ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು : ಹಿಂದೂ ನಾಯಕ ಮಹೇಶ ಶೆಟ್ಟಿ ತಿಮರೋಡಿ

Friday, October 11th, 2013
mafiya

ಮಂಗಳೂರು : ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸರಕಾರ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್‌ ಆಂದೋಲನ ನಡೆಸಲಾಗುವುದು ಎಂದು ಹಿಂದೂ ನಾಯಕ ಮಹೇಶ ಶೆಟ್ಟಿ ತಿಮರೋಡಿ ಎಚ್ಚರಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿ ಒಂದು ವರ್ಷ ಕಳೆದಿದೆ. ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನನ್ನು ಆರೋಪಿ ಎಂದು ಬಿಂಬಿಸಲಾಗಿದೆ. ಆದರೆ ಆತನ ಮೇಲೆ ಯಾವುದೇ ಆಪಾದನೆಗಳಿಲ್ಲ. ಪೊಲೀಸ್‌ ಇಲಾಖೆ ಮೇಲೆ ಒತ್ತಡ ಹೇರಿ ಪ್ರಕರಣದ […]

ವಿಗ್ರಹ ಕಳವು ಪ್ರಕರಣವನ್ನು ಸಿಬಿಐಗೆ ಕೊಡಲು ಒಪ್ಪಿದ ಸಿಎಂ

Thursday, October 3rd, 2013
basidi

ಮೂಡುಬಿದರೆ : ಸಿದ್ಧಾಂತ ಮಂದಿರ ವಿಗ್ರಹ ಕಳವು ಪ್ರಕರಣದ ಸಿಬಿಐ ತನಿಖೆಗೆ ಒತ್ತಾಯಿಸಿ ಜೈನಮಠದ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ನೇತೃತ್ವದಲ್ಲಿ ನಿನ್ನೆ ಸಾವಿರಕಂಬ ಬಸದಿ ವಠಾರದಲ್ಲಿ ನಿರಶನ ನಡೆಯಿತು. ಇಲ್ಲಿಗೆ ಆಗಮಿಸಿದ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ. ಸ್ವಾಮೀಜಿ ಜೊತೆ ಮಾತುಕತೆ ನಡೆಸಿ, ನೇರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ದೂರವಾಣಿ ಮುಖಾಂತರ ಸಂಪ ರ್ಕಿಸಿ, ಬಸದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಸ್ಯೆಯನ್ನು ವಿವರಿಸಿ ಸಿಬಿಐ ತನಿಖೆಯ ಭರವಸೆ ಪಡೆದಿದ್ದಾರೆ. ಸಿದ್ಧರಾಮಯ್ಯ ‘ಸಿ.ಬಿ.ಐ ತನಿಖೆ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಣಯ […]

ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಕೇಮಾರು ಶ್ರೀ ಒತ್ತಾಯ

Tuesday, November 6th, 2012
ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಕೇಮಾರು ಶ್ರೀ ಒತ್ತಾಯ

ಬೆಳ್ತಂಗಡಿ :ಸೌಜನ್ಯಳ ಮನೆಗೆ ಭೇಟಿ ನೀಡಿದ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿಯವರು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಆದ್ದರಿಂದ ಈ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಇನ್ನು15 ದಿನಗಳಲ್ಲಿ ಸೂಕ್ತ ತನಿಖೆ ನಡೆಸದೇ ಇದ್ದಲ್ಲಿ ಸಾರ್ವಜನಿಕರ ಬೆಂಬಲದೊಂದಿಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸಲಾಗುವುದು ಎಂದವರು ತಿಳಿಸಿದರು. ಪ್ರಕರಣದ ಹಿಂದೆ ಯಾರೇ ಇದ್ದರು ಅದನ್ನು ಕೂಡಲೇ ಪತ್ತೆಹಚ್ಚಿ ಬಹಿರಂಗಪಡಿಸಬೇಕು, ಹಾಗೂ ಸಾರ್ವಜನಿಕರ ಹಿತಾಸಕ್ತಿ […]