ಸಮುದ್ರ ಮದ್ಯದಲ್ಲಿ ಸಿಲಿಂಡರ್‌ ಸ್ಫೋಟ, ದೋಣಿಯಲ್ಲಿದ್ದ 11 ಮೀನುಗಾರರ ರಕ್ಷಣೆ

Sunday, January 10th, 2021
cylinder blast

ಮಂಗಳೂರು: ಮೀನುಗಾರಿಕೆಗೆಂದು ತೆರಳಿದ್ದ ತಮಿಳುನಾಡು ಮೂಲದ ಈ ಮೀನುಗಾರಿಕಾ ದೋಣಿಯೊಂದರಲ್ಲಿ ಅರಬ್ಬಿ ಸಮುದ್ರ  ಮದ್ಯದಲ್ಲಿ ಸಿಲಿಂಡರ್‌ ಸ್ಫೋಟಗೊಂಡಿದ್ದು, ತಕ್ಷಣ ಬೋಟ್ನಲ್ಲಿದ್ದ 11 ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು  ರಕ್ಷಿಸಿದ್ದಾರೆ. ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿತ್ತು. ಈ ಸಂದರ್ಭ ಬೋಟ್ನಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡಿರುವ ಓರ್ವ ಮೀನುಗಾರ ಹಾಗೂ ಇತರ ಮೀನುಗಾರರನ್ನು ನವಮಂಗಳೂರು ಬಂದರಿಗೆ ಕರೆತರಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ […]