ಬೆಳ್ತಂಗಡಿ ಮಸೀದಿಯಲ್ಲಿ ಬಿಯರ್ ಬಾಟಲಿ, ಸ್ಥಳೀಯರಲ್ಲಿ ಆತಂಕ

Thursday, February 24th, 2022
Mosque

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುರ ಜುಮ್ಮಾ ಮಸೀದಿಯಲ್ಲಿ  ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ನಡೆದಿದೆ. ಬುಧವಾರ ತಡ ರಾತ್ರಿಯವೇಳೆ ಮಸೀದಿಯ ಆವರಣದೊಳಗೆ ಬಿಯರ್ ಬಾಟಲಿ ಎಸೆದಿದ್ದಾರೆ. ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೇ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ತಿಳಿದು ಬಂದಿದೆ. ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಸೀದಿಯೊಳಗೆ ಬಿಯರ್ ಬಾಟ್ಲಿ ಎಸೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಲು ಕಾರಣವಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದವರ ಬಗ್ಗೆ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ

ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಕಂದಾಯ ಸಚಿವ

Sunday, August 8th, 2021
R Ashoka

ಮಂಗಳೂರು  : ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿಡಲು ಕ್ರೀಡೆಗಳು ಅತ್ಯಗತ್ಯ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಭಾನುವಾರ ಕುಮಾರಸ್ವಾಮಿ ಲೇಔಟ್‌ನ ಕಾರ್ಮೆಲ್ ಶಾಲಾ ಮೈದಾನದಲ್ಲಿ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯುವಕರು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಆಟಗಳಿಗೆ ಆದ್ಯತೆ ನೀಡಬೇಕು ಮತ್ತು ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದರು. ಬಿಎಚ್‌ಸಿಎಸ್ ಲೇಔಟ್‌ನಲ್ಲಿ ಅಳವಡಿಸಿದ ಸಿಸಿಟಿವಿಗಳನ್ನು ಉದ್ಘಾಟಿಸಿದ ಆರ್ ಅಶೋಕ್ ಕಂದಾಯ ಸಚಿವ ಆರ್ ಅಶೋಕ ಭಾನುವಾರ […]

ಮನೆಯಲ್ಲಿ ಮಲಗಿದ್ದ ನಾಯಿಯನ್ನು ಹಿಡಿದ ಚಿರತೆ, ಆದರೂ ನಾಯಿ ಬದುಕಿದ್ದು ಹೇಗೆ ಗೊತ್ತಾ ?

Saturday, July 3rd, 2021
chita

ಮೂಡುಬಿದಿರೆ:  ಚಿರತೆಯೊಂದು ಮನೆಯಂಗಳಕ್ಕೆ ಬಂದು ನಾಯಿಯೊಂದನ್ನು ಹಿಡಿದಿದ್ದು, ಚಿರತೆ ಕಾಂಪೌಂಡ್ ಹಾರುವ ವೇಳೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆಯ ಬಳಿ ಗುರುವಾರ ರಾತ್ರಿ ಅಡ್ಡಾಡುತ್ತಿದ್ದ ಚಿರತೆ ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಹೋಗಲು ಪ್ರಯತ್ನಿಸಿ ವಿಫಲವಾಗಿದೆ. ಸ್ಥಳಕ್ಕೆ ಉಪವಲಯಾರಣ್ಯಾಧಿಕಾರಿ ಮಂಜುನಾಥ ಗಾಣಿಗ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ. ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಜೊತೆ ಮಾತುಕತೆ ನಡೆಸಿದ್ದು, ಚಿರತೆಯನ್ನು ಹಿಡಿಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.  

ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ- ಜಿಲ್ಲಾಧಿಕಾರಿ

Monday, July 13th, 2020
Dharmika-Datthi-Elakhe

ಮಂಗಳೂರು : ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮರಾಗಳನ್ನು ಒಳಗೊಂಡಿರಬೇಕು ಮತ್ತು ಅವುಗಳು ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ನಿತ್ಯ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿನ ಆಭರಣಗಳನ್ನು ಸಂರಕ್ಷಣೆ ಹಾಗೂ ಮೌಲ್ಯಮಾಪನ ಮಾಡುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾದ ಸಭೆಯನ್ನುದ್ಧೇಶಿಸಿ ಅವರು ಮಾತನಾಡಿದರು. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಅನಾದಿ ಕಾಲದ ವಿಗ್ರಹ, ಚಿನಬೆಳ್ಳಿ ಮತ್ತು ಇನ್ನಿತರ ಅಮೂಲ್ಯ […]