ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಸೆರೆ

Friday, December 8th, 2023
MMDA

ಮಂಗಳೂರು : “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದವವರನ್ನು ದಸ್ತಗಿರಿ ಮಾಡಿ 6 ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ. ಮಂಗಳೂರು ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ […]

ಚೈತ್ರಾ ಹಣ ಪಡೆದು ವಂಚನೆ ಪ್ರಕರಣ : ಸಿಸಿಬಿಯಿಂದ 800 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

Wednesday, November 8th, 2023
ಚೈತ್ರಾ ಹಣ ಪಡೆದು ವಂಚನೆ ಪ್ರಕರಣ : ಸಿಸಿಬಿಯಿಂದ 800 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

ಉಡುಪಿ : ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಗ್ಯಾಂಗ್​ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ (CCB) ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ […]

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿಯ ಸೆರೆ

Tuesday, September 26th, 2023
Lukmanul

ಮಂಗಳೂರು : ಸಿಸಿಬಿ ಪೊಲೀಸರು ತನ್ನ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಸ್ತಗಿರಿ ಮಾಡಿದ್ದಾರೆ. ಆತನ ವಶದಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,60,000/-ಆಗಬಹುದು. ಆರೋಪಿಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈತನು ಮಂಗಳೂರು ನಗರದ […]

ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತೆ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

Monday, March 1st, 2021
BMWcar

ಮಂಗಳೂರು : ಐಷಾರಾಮಿ ಕಾರು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ  ದಿನಗಳ ಹಿಂದಷ್ಟೇ ಸಿಸಿಬಿಯಲ್ಲಿ ಎಸ್ಐ ಆಗಿದ್ದ ಕಬ್ಬಾಳರಾಜ್ ಮತ್ತು ಪಾಂಡೇಶ್ವರದ ನಾರ್ಕೋಟಿಕ್ ಮತ್ತು ಆರ್ಥಿಕ ಅಪರಾಧ ಠಾಣೆಯ ಇನ್ ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಅಮಾನತುಗೊಳಿಸಿದ ಬಳಿಕ  ಮತ್ತೆ ಇಬ್ಬರು ಪೊಲೀಸ್ ಸಿಬ್ಬಂದಿಗಳು ಅಮಾನತುಗೊಂಡಿದ್ದಾರೆ. ಸಿಸಿಬಿಯಲ್ಲಿದ್ದ ರಾಜ ಮತ್ತು ಆಶಿತ್ ಡಿಸೋಜ ಎಂಬ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶಿಸಿದ್ದಾರೆ. ಈ ನಡುವೆ ಕಾರು ಮಾರಾಟ ಮತ್ತು ಅದಕ್ಕೆ ಕಾರಣವಾದ ಮನಿ ಡಬ್ಲಿಂಗ್ ಪ್ರಕರಣವನ್ನು […]

ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚನೆ, 32 ಸ್ಥಳಗಳಲ್ಲಿ ಚೆಕ್‌ಪೋಸ್ಟ್ : ವಿಕಾಸ್‌ ಕುಮಾರ್

Tuesday, October 27th, 2020
Ujjodi Cow

ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚಿಸಲಾಗಿದ್ದು, ಇಲ್ಲಿಯವರೆಗೆ 28 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ವಿಕಾಸ್‌ ಕುಮಾರ್ ತಿಳಿಸಿದ್ದಾರೆ. ದನ ಕಳವು, ಅಕ್ರಮ ದನ ಸಾಗಾಟ ಮತ್ತು ಅಕ್ರಮ ದನಗಳ ವಧೆ ತಡೆಟ್ಟುವ ಸಲುವಾಗಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ‘ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ’ ಎಂಬ ವಿಶೇಷ ತಂಡ ಅ.5ರಿಂದ ಕಾರ್ಯಾಚರಿಸುತ್ತಿದೆ. ನಗರಕ್ಕೆ […]

ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ

Friday, September 4th, 2020
ragini

ಬೆಂಗಳೂರು: ಸ್ಯಾಂಡಲ್ ವುಡ್  ನಟಿ ರಾಗಿಣಿ ದ್ವಿವೇದಿ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶಕ್ಕೆ ಪಡೆದಿದೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ ಅವರ ಯಲಹಂಕದ ಜ್ಯುಡಿಷಿನಲ್ ಲೇಔಟ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಸತತ 3 ಗಂಟೆ ಶೋಧ ಕಾರ್ಯ ಬಳಿಕ ಮನೆ ಕೀ, ಕಾರು ಕೀ, ಮೊಬೈಲ್ ಅನ್ನು ವಶಕ್ಕೆ ಪಡೆದು ರಾಗಿಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ […]

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ : ಇಬ್ಬರು ರಣಜಿ ಆಟಗಾರರ ಬಂಧನ

Thursday, November 7th, 2019
KPL

ಬೆಂಗಳೂರು : ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2019ರ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪವಿದೆ. ಈ ಹಿನ್ನೆಲೆ ತನಿಖೆ ತೀವ್ರಗೊಳಿಸಿದ ಸಿಸಿಬಿ ಪೊಲೀಸರ ಬಲೆಗೆ ಬಳ್ಳಾರಿ ಟಸ್ಕರ್ಸ್ ತಂಡದ ಇಬ್ಬರು ಆಟಗಾರರು ಸಿಕ್ಕಿಬಿದ್ದಿದ್ದಾರೆ. ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನಕ್ಕೊಳಗಾದ ಆಟಗಾರರು. ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವುದಾಗಿ ಆಟಗಾರರು […]

ಬೆಂಗಳೂರು : ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ಪೊಲೀಸರ ದಾಳಿ

Wednesday, October 9th, 2019
parappana

ಬೆಂಗಳೂರು : ಮಾಡಿರುವ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಜೈಲಿನಲ್ಲೂ ಅಕ್ರಮ ನಡೆಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ನಗರ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ ಈ ದಾಳಿ ನಡೆದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ 60 ಮಂದಿ ತಂಡ ದಾಳಿ ನಡೆಸಿ ಕೈದಿಗಳ ವಿಚಾರಣೆ ನಡೆಸಿದೆ. ಜೈಲಿನೊಳಗೆ ಗಾಂಜಾ ಬಳಕೆಯಾಗುತ್ತಿದೆ ಎಂಬ ಆರೋಪದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಜೈಲಿನೊಳಗೆ ಮಾರಕಾಯುಧಗಳು […]

‘ಪೈಲ್ವಾನ್’ ಸಿನಿಮಾದ ಲಿಂಕ್​ ಶೇರ್​ ಮಾಡಿದ ಆರೋಪಿ ಸರೆ

Friday, September 20th, 2019
Rakesh-L

ಬೆಂಗಳೂರು : ಪೈಲ್ವಾನ್ ಚಿತ್ರದ ಪೈರಸಿ ಕಾಪಿಯನ್ನು ಸಾಮಾಜಿಕ ಜಾಲ ಬಳಕೆದಾರರಿಗೆ ಸಿಗುವಂತೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಿಸಿಬಿ ಸೈಬರ್ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಕೇಶ್ ಎಲ್ ಅಲಿಯಾಸ್ ರಾಕೇಶ್ ವಿರಾಟ್ ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್ವಾರ್ ಗೆ ಕಾರಣನಾಗಿದ್ದ. ಈತ ನೆಲಮಂಗಲ ತಾಲೂಕಿನ ಇಮಚೇನಹಳ್ಳಿ ನಿವಾಸಿಯಾಗಿದ್ದು ಇತ್ತೀಚೆಗೆ ಬಿಡುಗಡೆಯಾದ ಪೈಲ್ವಾನ್ ಕನ್ನಡ ಚಲನಚಿತ್ರದ ಪೈರಸಿ ಕಾಪಿ ಇರುವ ಲಿಂಕ್ಅನ್ನು ಜಾಲತಾಣ ಬಳಕೆದಾರರಿಗೆ ಮೆಸೆಂಜರ್ ಮೂಲಕ ಕಳುಹಿಸಿದ್ದ. ಹೀಗಾಗಿ ಪೈಲ್ವಾನ್ ಚಿತ್ರದ ನಿರ್ಮಾಪಕಿ ಸ್ವಪ್ನಕೃಷ್ಣ ಚಿತ್ರ […]

ಸಿಸಿಬಿಯಿಂದ ಕುಖ್ಯಾತ ರೌಡಿ ಮಿರ್ಲೆ ವರದರಾಜ್​ ಅರೆಸ್ಟ್

Thursday, December 6th, 2018
bengaluru

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಿರ್ಲೆ ವರದರಾಜ್ಗೆ ಸಿಸಿಬಿ ಪೊಲೀಸರು ಶಾಕ್ ನೀಡಿದ್ದಾರೆ. ಮಿರ್ಲೆ ವರದರಾಜ್ಗೆ ಸೇರಿದ ಕೆಂಗೇರಿ ಸ್ಯಾಟಲೇಟ್ ಟೌನ್ ಬಳಿಯಿರುವ ಮನೆ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಈತ ಭೂ ಹಗರಣ, ಹಫ್ತಾ ವಸೂಲಿ ಸೇರಿದಂತೆ ಹಲವು ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆತನ ಸಹಚರರಾದ ಲಕ್ಷ್ಮಣ ಹಾಗೂ ಡಿಪೋ ನಾಗರಾಜ್ […]