ಅಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ ದಂಧೆ, ನಾಲ್ವರು ಯುವತಿಯರ ರಕ್ಷಣೆ

Wednesday, March 2nd, 2022
Nishmitha-Anupama

ಮಂಗಳೂರು :  ಬೆಂದೂರ್ ವೆಲ್ ನ ಅಪಾರ್ಟ್ ಮೆಂಟ್ ವೊಂದರ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದರ  ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡು ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಕದ್ರಿ ಪೋಲಿಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ ಪೀಬಿ ರೆಸಿಡೆನ್ಸಿ ಎಂಬ ಅಪಾರ್ಟ್ ಮೆಂಟ್ ನ 2 ನೇ ಮಹಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ […]

ಪುರೋಹಿತರನ್ನು ಪೂಜೆ ಮಾಡಿಸಿ, 49 ಲಕ್ಷ ರೂ. ಸುಲಿಗೆ ಮಾಡಿದ ಆರೋಪಿಗಳು

Friday, January 21st, 2022
Honey Trap

ಮಂಗಳೂರು : ನಗರದ ಪದವಿನಂಗಡಿಯ ಬಾಡಿಗೆ ಮನೆಯೊಂದಕ್ಕೆ ಪೂಜೆ ನೆಪದಲ್ಲಿ ಚಿಕ್ಕಮಗಳೂರಿನ ಪುರೋಹಿತರೊಬ್ಬರನ್ನು ಕರೆಸಿಕೊಂಡು ಜೊತೆಗೆ ಫೋಟೋ ತೆಗಿಸಿಕೊಂಡು ಬ್ಲಾಕ್ಮೇಲ್ ಮಾಡಿ  ಸುಮಾರು 49 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತ: ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಭವ್ಯ (30) ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕುಮಾರ್ ರಾಜು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕಾರು ಚಾಲಕನಾಗಿರುವ ಕುಮಾರ್ ರಾಜು ಹಾಗೂ ಭವ್ಯ ನಗರದ ಮೇರಿಹಿಲ್‌ನ ಅಪಾರ್ಟ್‌ಮೆಂಟ್‌ನ […]

ಕುಖ್ಯಾತ ಆರೋಪಿ ಆಕಾಶಭವನ ಶರಣ್  ರೋಹಿದಾಸ್ ಹಾಗೂ ಇತರ ನಾಲ್ವರ ಸೆರೆ

Friday, January 14th, 2022
Akash Bhavan

ಮಂಗಳೂರು :  ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಅತ್ಯಾಚಾರ, ದರೋಡೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾಗಿ 2 ತಿಂಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಆಕಾಶಭವನ ಶರಣ್ ಅಲಿಯಾಸ್ ರೋಹಿದಾಸ್ ಹಾಗೂ ಆತನ ಇತರ 4 ಸಹಚರರನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ […]

ಅಕ್ರಮ ದಂಧೆ – ‘ಮುಂಗಾರು ಮಳೆ-2’ ಚಿತ್ರದ ನಟಿ ನೇಹಾ ಶೆಟ್ಟಿ ತಂದೆಯ ಬಂಧನ

Saturday, June 5th, 2021
Neha-Shetty

ಬೆಂಗಳೂರು:  ನಗರದಲ್ಲಿ ಜೂಜು ಅಡ್ಡೆನಿರ್ಮಿಸಿ ಕಾನೂನು ಬಾಹಿರ ಕೃತ್ಯ ಆರೋಪದಡಿಯಲ್ಲಿ ‘ಮುಂಗಾರು ಮಳೆ-2’ ಚಿತ್ರದ ನಟಿ ನೇಹಾ ಶೆಟ್ಟಿ ತಂದೆ ಹರಿರಾಜ್ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಹರಿರಾಜ್ ಶೆಟ್ಟಿಯನ್ನು ನಗರದ ಪ್ರಮುಖ ಜೂಜುಕೋರ ಅಂತಾ ಗೂಂಡಾ ಕಾಯ್ದೆಯಡಿ ಬಂಧನ ಮಾಡಲಾಗಿದೆ.  ಹರಿರಾಜ ಶೆಟ್ಟಿ ವಿರುದ್ಧ ಇಲ್ಲಿತನಕ 13 ಕೇಸ್‍ಗಳು ದಾಖಲಾಗಿದೆ. ಬೆಂಗಳೂರಿನಲ್ಲಿ ಪೂಲ್ ಎನ್, ರಿ ಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಹತ್ತಾರು ಕಡೆ ನಡೆಸ್ತಿದ್ದ, ಗೇಮ್ ಗಳು ಬ್ಯಾನ್ ಇರುವ ಸ್ಕಿಲ್ ಗೇಮ್, ವೀಡಿಯೋ ಗೇಮ್ […]

ಡ್ರಗ್ ಪ್ರಕರಣ : ಕಿಶೋರ್ ನ ಹಳೆ ಮಿತ್ರ ಸ್ಯಾಮ್ ಫರ್ನಾಂಡಿಸ್‍ನನ್ನು ಬಂಧಿಸಿದ ಸಿಸಿಬಿ ಪೊಲೀಸರು

Friday, October 2nd, 2020
samu

ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು  ಮತ್ತೊಬ್ಬ ಡ್ಯಾನ್ಸ್ ಕೊರಿಯೋಗ್ರಾಫರನ್ನು ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ನ ಹಳೆ ಮಿತ್ರ ಸ್ಯಾಮ್ ಫರ್ನಾಂಡಿಸ್‍ನನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಿಶೋರ್ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿರುವುದಾಗಿ ಸ್ಯಾಮ್ ಫರ್ನಾಂಡಿಸ್ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಯಾಮ್ ವಿಚಾರಣೆ ಮಾಡಿದ ಬಳಿಕ ನಿರೂಪಕಿ ಅನುಶ್ರೀ ಬಗೆಗಿನ ಮತ್ತಷ್ಟು ಮಾಹಿತಿಗಳು ಸಿಸಿಬಿ ಪೊಲೀಸರಿಗೆ ಲಭ್ಯವಾಗಿವೆ. ಅನುಶ್ರೀ ಸೇರಿದಂತೆ ಬೆಳ್ಳಿತೆರೆ, ಕಿರುತೆರೆ ಹಾಗೂ ರಿಯಾಲಿಟಿ ಶೋನ ನಟ, ನಟಿಯರು […]

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಮತ್ತು ಸಹಚರನನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

Saturday, September 19th, 2020
kishor Shetty

ಮಂಗಳೂರು: ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್,  ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ  ನೀಡಿದರು. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ನಂತರ ಹಿಂದಿ ಭಾಷೆಯ ಎಬಿಸಿಡಿ ಚಿತ್ರದಲ್ಲಿ ನಟಿಸಿದ್ದ. ಪ್ರಕರಣದಲ್ಲಿ ಮತ್ತೋರ್ವನನ್ನು ಬಂಧಿಸಲಾಗಿದ್ದು, ಅಕೀಲ್ ನೌಶೀಲ್ ಎಂದು […]

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿಯನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ ಸಿಸಿಬಿ ಪೊಲೀಸರು

Wednesday, September 16th, 2020
sanjana

ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ಸಂಜನಾ ಗಲ್ರಾನಿ ಇಂದು ಪರಪ್ಪನ ಅಗ್ರಹಾರ ಜೈಲಿನೊಳಗೆ ಸೇರಿದ್ದಾರೆ. ಅಲ್ಲಿ  ಹೋಗುವ ವೇಳೆಯೂ  ಗೇಟ್  ಚಿಕ್ಕದಾಯಿತು ಎಂದು  ಹೇಳಿದ್ದಾರೆ. ಸಂಜನಾ, ಜೈಲಿಗೆ ಎಂಟ್ರಿ ಕೊಡುವಾಗ ಇಷ್ಟು ಚಿಕ್ಕ ಗೇಟ್‍ನಲ್ಲಿ ನಾನು ಹೋಗಲ್ಲ ಎಂದು ಹಠಕ್ಕೆ ಬಿದ್ದಿದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ಒಳಗೆ ಹೋಗಿ ಎಂದು ಹೇಳಿದ್ದಾರೆ. ನಂತರ ಒಂದು ನಿಮಿಷದ ಬಳಿಕ ಸಂಜನಾ ಒಳಗೆ ಹೋಗಿದ್ದಾರೆ. ಸಂಜನಾ ಜೊತೆಗೆ ವೀರೇನ್ ಖನ್ನಾ ಮತ್ತು ರವಿಶಂಕರ್ ನನ್ನೂ ಕೂಡ ಸಿಸಿಬಿ […]

ಬೆಂಗಳೂರು ಟೆಕ್ಕಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

Friday, March 6th, 2020
tekki

ಬೆಂಗಳೂರು : ಟೆಕ್ಕಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್‌ ಮಾಡಿಕೊಂಡು ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳ ಮೂಲಕ ನಾಲ್ವರು ಆರೋಪಿಗಳು ಬೆಂಗಳೂರಿನ ಟೆಕ್ಕಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಆಂಧ್ರ ಪ್ರದೇಶದಿಂದ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು. ಈ ಕುರಿತಾದ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ […]

ಹೈಟೆಕ್ ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ

Saturday, February 8th, 2020
hightek

ಬೆಂಗಳೂರು : ನಗರದಲ್ಲಿ ಹೈಟೆಕ್ ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಮಾರ್, ಭರತ್ ಕುಮಾರ್, ರಘು ಹಾಗೂ ಪ್ರಜ್ವಲ್ ಬಂಧಿತ ಆರೋಪಿಗಳು. ಬಂಧಿತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಲೊಕೆಂಟೋ ವೆಬ್ ಸೈಟ್ ಮೂಲಕ ಹೈಟೆಕ್ ಮಾದರಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ದಂಧೆಗೆ ಬಳಸಿಕೊಳ್ಳುವ ಹೆಣ್ಣು ಮಕ್ಕಳನ್ನು ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಂದ ಕೆಲಸ ಕೊಡಿಸುವುದಾಗಿ ನಂಬಿಸಿ‌ ಕರೆ ತರುತ್ತಿದ್ದರು. ಬಳಿಕ‌ ಇವರ ಫೊಟೋಗಳನ್ನು ಆನ್ ಲೈನ್ ಮುಖಾಂತರ ಕಳುಹಿಸಿ ಗ್ರಾಹಕರನ್ನು‌ […]

ಐವರು ಶಾಸಕರನ್ನು ಹನಿಟ್ರ್ಯಾಪ್ ಮೂಲಕ ಬಲೆಗೆ ಕೆಡವಿದ್ದ ಕಿಲಾಡಿಯಿಂದ ಮತ್ತೋರ್ವ ಸಚಿವರಿಗೆ 10 ಕೋಟಿ ರೂ. ಬೇಡಿಕೆ

Wednesday, November 27th, 2019
honeytrap

ಬೆಂಗಳೂರು:  ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆಯೊಡ್ಡಿ ಬಿಜೆಪಿಯ ಮಾಜಿ ಸಚಿವ ರಿಂದ  10 ಕೋಟಿ ರೂ. ಸುಲಿಗೆಗೆ ಮುಂದಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪರಪ್ಪನ ಅಗ್ರಹಾರ ನಿವಾಸಿ ರಾಘವೇಂದ್ರ ಬಂಧಿತ ಆರೋಪಿ ಇತ್ತೀಚೆಗೆ ಕೆಲಸ ತೊರೆದು ಮನೆಯಲ್ಲಿಯೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಘವೇಂದ್ರ ತನ್ನ ಗೆಳತಿಯ ಮೂಲಕ ಹನಿಟ್ರ್ಯಾಪ್‌ಗೆ ಮಾಜಿ ಸಚಿವರೊಬ್ಬರನ್ನು ಕೆಡವಿದ್ದ. ಗೆಳತಿಯೊಂದಿಗೆ ಮಾಜಿ ಸಚಿವರು ಇರುವ ವಿಡಿಯೋ ಚಿತ್ರೀಕರಿಸಿಕೊಂಡಿದ್ದ. […]