ಮರಳು ಸಮಸ್ಯೆ ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

Wednesday, November 7th, 2018
citu

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮರಳು ಸಮಸ್ಯೆ ಪರಿಹಾರಕ್ಕಾಗಿ ಹಾಗೂ ಜನಪರ ಮರಳು ನೀತಿಗಾಗಿ ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ನೇತ್ರತ್ವದಲ್ಲಿ ನಗರದಲ್ಲಿಂದು ಮಂಗಳವಾರ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಟ್ಟಡ ಕಾರ್ಮಿಕರು, ಜನಪರ ಮರಳು ನೀತಿ ಜಾರಿಯಾಗಲಿ,ಅಕ್ರಮ ಮರಳು ಸಾಗಾಟ ನಿಲ್ಲಲ್ಲೇಬೇಕು, ಮರಳು ಸಮಸ್ಯೆ ಕೂಡಲೇ ಪರಿಹರಿಸಿರಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ CITU ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ […]