Blog Archive

ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಸರಕಾರದ ಆದೇಶಕ್ಕೆ ವಿರೋದ ವ್ಯಕ್ತಪಡಿಸಿದ ಎಸ್ಎಫ್ಐ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲು

Friday, November 2nd, 2012
Kannada Rajyithsava

ಮಂಗಳೂರು : ಮಂಗಳೂರು ಗುರುವಾರ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚವ ಆದೇಶಕ್ಕೆ ವಿರೋದ ವ್ಯಕ್ತಪಡಿಸಿ, ಗಲಭೆಯನ್ನೆಬ್ಬಿಸಿದ ಎಸ್ಎಫ್ಐ ಕಾರ್ಯಕರ್ತರನ್ನು ಬಂದಿಸಿ, ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಉಪನ್ಯಾಸಕ ಪ್ರೊ.ಗೋವಿಂದ ತನ್ನ ವರದಿಯಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ ಎಂದು ರಾಜ್ಯದ 12,740 ಕನ್ನಡ ಶಾಲೆಗಳನ್ನು ಮುಚ್ಚಲು ಶಿಫಾರಸ್ಸು ಮಾಡಿದ್ದು, ಅದರಂತೆ ರಾಜ್ಯ ಸರಕಾರವು ಕೂಡ ಆ ಶಾಲೆಗಳನ್ನು ಮುಚ್ಚುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ಹಿನ್ನಲೆಯಲ್ಲಿ ನಿನ್ನೆ ನೆಹರೂ […]

ಕನ್ನಡದ ಅಭಿಮಾನ ಇಲ್ಲದವರಿಂದಲೇ ಕನ್ನಡಕ್ಕೆ ಅಪಾಯವಿದೆ : ಸಿ ಟಿ ರವಿ

Thursday, November 1st, 2012
Kannada Rajyothsava Mangalore

ಮಂಗಳೂರು : ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನಿನಲ್ಲಿ (ನ.1) ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 7.45 ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಸುರಿಯುವ ತುಂತುರು ಮಳೆಯನ್ನೂ ಲೆಕ್ಕಿಸದೆ ಕನ್ನಡಾಭಿಮಾನದ ಸಂದೇಶವನ್ನು ಸಾರುವ ಅನೇಕ ವಾಹನಗಳ ಜಾಥ ಕನ್ನಡ ರಾಜ್ಯೋತ್ಸವಕ್ಕೆ ಮೆರುಗನ್ನು ನೀಡಿತು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಪಥಸಂಚಲನದ ಕಮಾಂಡರ್ ನಿಂದ ಗೌರವ ಸ್ವೀಕರಿಸಿ, ಪ್ಯಾರೆಡ್ ವೀಕ್ಷಿಸಿದರು. ಬಳಿಕ ಜಿಲ್ಲೆಯ ಜನತೆಗೆ ಸಂದೇಶ ನೀಡಿದರು. ಕನ್ನಡಿಗರಿಗೆ ರಾಜ್ಯೋತ್ಸವ ನಿತ್ಯನೂತನವಾಗಿರಬೇಕು ಅದು ನವೆಂಬರ್ […]

ಮಂಗಳೂರು ರಾಜೋತ್ಸವ ಆಚರಣೆಗೆ ಎಸ್.ಎಫ್.ಐ. ಕಾರ್ಯಕರ್ತರಿಂದ ಅಡ್ಡಿ; ಬಂಧನ

Thursday, November 1st, 2012
Rajyotsava Lathi Charge

ಮಂಗಳೂರು :  ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ ರಾಜೋತ್ಸವದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ರಾಜ್ಯೋತ್ಸವದ ಸಂದೇಶ ನೀಡಲು ಪ್ರಾರಂಬಿಸುತ್ತಿದ್ದಂತೆ ಮೈದಾನದ ಹೊರಗಿನಿಂದ ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತ ಒಳ ಪ್ರವೇಶಿಸಿದ ಎಸ್.ಎಫ್.ಐ. ಕಾರ್ಯಕರ್ತರು, ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರಕಾರಕ್ಕೆ ರಾಜ್ಯೋತ್ಸವ ಆಚರಿಸುವ ಅರ್ಹತೆಯಿಲ್ಲ ಎಂದು ಘೋಷಣೆ ಕೂಗುತ್ತ ರಾಜೋತ್ಸವ ಆಚರಣೆಗೆ ಅಡ್ಡಿಪಡಿಸಲು ಮುಂದಾದರು. ಕಾರ್ಯಕರ್ತರು ದೆಹಲಿ ವಿಶ್ವವಿದ್ಯಾನಿಲಯದ ಉಪನ್ಯಾಸಕ ಪ್ರೊ.ಗೋವಿಂದ ತನ್ನ ವರದಿಯಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ […]

ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ :ಸಿ.ಟಿ.ರವಿ

Wednesday, October 24th, 2012
C T Ravi

ಮಂಗಳೂರು: ಮಂಗಳವಾರ ಮಂಗಳೂರಿಗೆ ಭೇಟಿ ಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಸರ್ಕ್ಯೂಟ್ ಹೌಸ್ ನಲ್ಲಿ  ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ಬಿಟ್ಟು ಹೊಸ ಪಕ್ಷವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿಲ್ಲ, ಒಂದು ವೇಳೆ ಯಡ್ಡಿಯೂರಪ್ಪನವರು ಬಿಜೆಪಿಯಿಂದ ಹೊರನಡೆದರೆ ಅದರಿಂದ ಅವರಿಗೆ ನಷ್ಟವೇ ಹೊರತು ಪಕ್ಷಕ್ಕೆ ಯಾವ ನಷ್ಟವೂ ಇಲ್ಲ, ಅವರ ಹೊರತಾಗಿಯೂ ಪಕ್ಷ ಇನ್ನಷ್ಟು ಬಲಿಷ್ಟವಾಗಿ ಬದುಕಲಿದೆ ಎಂದರು. ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ […]

ಜನಚೇತನ ಯಾತ್ರೆಗೆ ಜಿಲ್ಲೆಯಲ್ಲಿ ಈಗಾಗಲೇ ಉತ್ಸಾಹದ ವಾತಾವರಣ ಮೂಡಿದೆ : ರವಿ

Tuesday, October 25th, 2011
CT Ravi

ಮಂಗಳೂರು: ಆಡ್ವಾಣಿಯವರ ಜನಚೇತನ ಯಾತ್ರೆಯ ಸಿದ್ಧತೆ ಕುರಿತಂತೆ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿವರಣೆ ನೀಡಿದರು. ಅಕ್ಟೋಬರ್ 31 ರಂದು ಜನಚೇತನ ಯಾತ್ರೆ ಮಂಗಳೂರು ನಗರಕ್ಕೆ ಬರಲಿದೆ. ನಗರದ ಕೇಂದ್ರ ಮೈದಾನಿನಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದ್ದು ಬಳಿಕ ಯಾತ್ರೆ ಉಡುಪಿಗೆ ತೆರಳಲಿದೆ. ಯಾತ್ರೆಯ ಕುರಿತಂತೆ 30 ವಿವಿಧ ವಿಭಾಗಗಳನ್ನು ರಚಿಸಲಾಗಿದ್ದು ಸಿದ್ದತೆಯಲ್ಲಿ ಕಾರ್ಯೊನ್ಮುಖವಾಗಿದೆ. ಯುವಮೋರ್ಚಾದಿಂದ ಯುವಜಾಗೃತಿ ರಥಯಾತ್ರೆ ನಡೆಯಲಿದ್ದು ಜಿಲ್ಲೆಯ 8 ವಿಧಾನಸಭಾ […]

ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

Tuesday, September 21st, 2010
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

ಬೆಂಗಳೂರು : ಚಿಕ್ಕಮಗಳೂರು ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದ ಶಾಸಕ ಸಿ.ಟಿ.ರವಿ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಗೊಂಡಿದೆ. ಚಿಕ್ಕಮಗಳೂರಿನಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಕೂಡ ಯಾವುದೇ ಬೆಲೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಸಿ.ಟಿ.ರವಿ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಇಂದು ಬೆಳಿಗ್ಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ಪುನಾರಚನೆ ಕುರಿತಾಗಿ ಹೈಕಮಾಂಡ್ ಜೊತೆ ಮಾತುಕತೆ […]