“ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ” -ಸುದೇಶ್ ಮರೋಳಿ

Tuesday, August 20th, 2024
sudesh-maroli

ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. “ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. […]