ಕಾಪು : ಪಾಂಗಾಳ ಸಮೀಪ ಕಾರು ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು
Tuesday, March 10th, 2020ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 9:45ರ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಉದ್ಯಾವರ ನಿವಾಸಿ, ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಧಾಕರ್(40) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ಇನ್ನೊಂದು ಬದಿಯ ರಸ್ತೆಗೆ ಪಲ್ಟಿಯಾಗಿ ಇದ್ದಿದ್ದು, ಇದೇ ವೇಳೆ ಉಡುಪಿ ಕಡೆಯಿಂದ ಕಾಪು […]