ಕೇಂದ್ರ ಸಚಿವ ಜಾವಡೇಕರ್‌ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

Wednesday, January 24th, 2018
jawadekar

ಮಂಗಳೂರು: ದೇಶದಲ್ಲಿಯೇ ಕಾಂಗ್ರೆಸ್ ಸರ್ಕಾರ ದರೋಡೆ, ದೌರ್ಜನ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂಬ ಬಿಜೆಪಿ ಹೇಳಿಕೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕ್ರೈಂ ರೇಟ್‌ನಲ್ಲಿ ಕರ್ನಾಟಕ ಹತ್ತನೇ ಸ್ಥಾನದಲ್ಲಿದೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅಪರಾಧ ಪ್ರಕರಣ ಹೆಚ್ಚಿವೆ. ಕರ್ನಾಟಕದ ಬಗ್ಗೆ ಮತನಾಡುವ ಮೊದಲು ಉತ್ತರ ಪ್ರದೇಶದ ಸ್ಥಿತಿಯನ್ನು ಅವರು ಅರಿಯಬೇಕಿದೆ ಎಂದು ಟಾಂಗ್‌ ನೀಡಿದರು. […]

ದಕ್ಷಿಣ ಕನ್ನಡ ಎಸ್‌ಪಿ ವರ್ಗಾವಣೆ : ಪೂಜಾರಿ ವಾಗ್ದಾಳಿ!

Tuesday, January 23rd, 2018
sudheer-kumar

ಮಂಗಳೂರು:’ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪದೇ-ಪದೇ ವರ್ಗಾವಣೆ ಮಾಡುವುದು ಸರಿಯಲ್ಲ. ವರ್ಗಾವಣೆ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಇದ್ದರೆ ಅದರ ಪರಿಣಾಮವನ್ನು ಅವರು ಅನುಭವಿಸುತ್ತಾರೆ’ ಎಂದು ಜನಾರ್ದನ ಪೂಜಾರಿ ಹೇಳಿದರು. ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ತಪ್ಪು ನಿರ್ಧಾರಗಳ ಬಗ್ಗೆ ಮುಖ್ಯಮಂತ್ರಿ, ಸಚಿವರನ್ನು ಹೇಳುವವರು, ಕೇಳುವವರು ಇಲ್ಲವೇ ? ಎಂದು ಪ್ರಶ್ನಿಸಿದರು’. ‘ದಕ್ಷಿಣ ಕನ್ನಡದ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರ ವರ್ಗಾವಣೆ ಹಿಂದೆ ಮುಖ್ಯಮಂತ್ರಿಗಳ ಕೈವಾಡವಿದ್ದರೆ ಅದನ್ನು ನಾನು ಖಂಡಿಸುತ್ತೇನೆ. ಜಿಲ್ಲಾ […]

ಮರಳು ಮಾಫಿಯಾ ವಿರುದ್ಧ ಕ್ರಮಕ್ಕೆ ವರ್ಗಾವಣೆ ಭಾಗ್ಯವೇ?.. ದ.ಕ ಜಿಲ್ಲೆಯ ಪ್ರಜ್ಞಾವಂತರ ಆಕ್ರೋಶ!

Monday, January 22nd, 2018
sp-belthangady

ಮಂಗಳೂರು: ಜನವರಿ 12ರಂದು ಗೃಹಸಚಿವ ರಾಮಲಿಂಗಾರೆಡ್ಡಿ ಮಂಗಳೂರಿಗೆ ಭೇಟಿ ನೀಡಿದ್ದಾಗ ಪತ್ರಕರ್ತರು, `ಎಸ್ಪಿ ಸುಧೀರ್ ಕುಮಾರ್ ರೆಡ್ಡಿಯವರ ವರ್ಗಾವಣೆ ಇದೆಯೇ’ ಎಂದು ಕೇಳಿದ್ದರು. ಇಂತಹ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದರು ಸಚಿವರು. ಆದರೆ ಒಂದು ವಾರದಲ್ಲೇ ಎಸ್ಪಿ ವರ್ಗಾವಣೆಗೊಂಡಿದ್ದಾರೆ. ಈ ವರ್ಗಾವಣೆ ಹಿಂದೆ ಮರಳು ಮಾಫಿಯಾ ಕೈವಾಡವಿದೆ ಎಂಬ ಮಾತುಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಭೂಷಣ್ ಗುಲಾಬ್ ರಾವ್ ಬೊರಸೆ ಬಳಿಕ ಜಿಲ್ಲಾ ಎಸ್ಪಿಯಾಗಿ ಬಂದವರು ಸುಧೀರ್ ರೆಡ್ಡಿ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ […]

ದೀಪಕ್ ಹತ್ಯೆ ಪ್ರಕರಣ…ಪೊಲೀಸರ ಕ್ಷೀಪ್ರ ಕಾರ್ಯಾಚರಣೆಗೆ ನಗದು ಬಹುಮಾನ

Friday, January 5th, 2018
nagara-police

ಮಂಗಳೂರು: ಜಿಲ್ಲೆಯ ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಸಂಬಂಧ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್‌ ಮಾಡಿ ಬಂಧಿಸಿದ್ದು, ಪೊಲೀಸರ ಕ್ಷೀಪ್ರ ಕಾರ್ಯಾಚರಯನ್ನು ಎಡಿಜಿಪಿ ಕಮಲ್‌ ಪಂತ್‌ ಶ್ಲಾಘಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಈ ಕ್ಷೀಪ್ರ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್‌ ತಂಡಕ್ಕೆ 1.20 ಲಕ್ಷ ರೂ. ಬಹುಮಾನ ಘೋಷಿಸಿದರು. ಆರೋಪಿಗಳು ಸ್ವಿಫ್ಟ್ ಕಾರಿನಲ್ಲಿ ಕಾವೇರಿ ರಸ್ತೆಯ ಚೆಕ್‌ಪೋಸ್ಟ್ ಬಳಿ ವೇಗವಾಗಿ ಹೋಗುತ್ತಿದ್ದಾಗ […]

ಫರಂಗಿಪೇಟೆಯಲ್ಲಿ ಆರು ಮಂದಿಯ ತಂಡದಿಂದ ಇಬ್ಬರ ಹತ್ಯೆ

Tuesday, September 26th, 2017
Farangipet murder

ಮಂಗಳೂರು : ಪೂರ್ವ ದ್ವೇಷದ ಹಿನ್ನಲೆ ಫರಂಗಿಪೇಟೆಯಲ್ಲಿ ನಡೆದ ಗ್ಯಾಂಗ್ ವಾರ್‌ಗೆ ಸೋಮವಾರ ರಾತ್ರಿ ಇಬ್ಬರು ಬಲಿಯಾಗಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ನಗಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಅಡ್ಯಾರ್‌ಕಟ್ಟೆ ನಿವಾಸಿ ರಿಯಾಝ್ ಯಾನೆ ಝಿಯಾ ಮತ್ತು ಅಡ್ಯಾರ್ ಬಿರ್ಪುಗುಡ್ಡೆ ನಿವಾಸಿ ಫಯಾಝ್ ಯಾನೆ ಪಯ್ಯ ಎಂದು ಗುರುತಿಸಲಾಗಿದೆ. ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಯ ಬಳಿ ಯಲ್ಲಿ ಅಡ್ಯಾರ್‌ನಿಂದ ಬಿ.ಸಿ.ರೋಡ್ ಕಡೆಗೆ ಬರುತ್ತಿದ್ದ ರಿಯಾಝ್, ಫಯಾಝ್, ಮುಷ್ತಾಕ್, ಫಝಲ್, ಅನೀಸ್ ಮತ್ತು ಅಝ್ಮಾನ್ ಎಂಬವರು  ಸ್ವಿಫ್ಟ್ […]

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

Thursday, June 22nd, 2017
sp

ಮಂಗಳೂರು :  ರಾಜ್ಯ ಸರಕಾರದ ಆದೇಶದಂತೆ ದ.ಕ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೂತನವಾಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಇಂದು ಅಧಿಕಾರ ಸ್ವೀಕರಿಸಿದರು. ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, ಪ್ರಸ್ತುತ ಬೆಂಗಳೂರಿನ ನಗರ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಭೂಷಣ್ ಗುಲಾಬ್ ರಾವ್ ಬೊರಸೆ ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು. ಸುಧೀರ್ ಕುಮಾರ್ ರೆಡ್ಡಿ 2010ನೆ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು, ಮಂಡ್ಯದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತ: ಆಂಧ್ರ ಪ್ರದೇಶದ ಗುಂಟೂರಿನವರು.  ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, […]