ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ

Tuesday, December 28th, 2021
Abdul Nazir

ಸುಬ್ರಹ್ಮಣ್ಯ : ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಸೋಮವಾರ ದೇವಸ್ಥಾನಕ್ಕೆ ಆಗಮಿಸಿದ  ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು. ದೇವಸ್ಥಾನದಲ್ಲಿ  ಅವರು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.  ಅಬ್ದುಲ್ ನಝೀರ್ ಅವರು ಮಂಗಳವಾರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬರುವ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಸೂಕ್ತ ತೀರ್ಮಾನ: ಸಚಿವ ಆರ್ ಅಶೋಕ

Thursday, September 16th, 2021
R Ashoka

ಬೆಂಗಳೂರು  : “ಸುಪ್ರೀಂ ಕೋರ್ಟ್‍ನ ತೀರ್ಪನ್ನು ಯಥಾವತ್ತಾಗಿ ಪಾಲನೆ ಮಾಡುವುದು ಕರ್ತವ್ಯ. ಆದರೆ ಆ ಧಾವಂತದಲ್ಲಿ ಅಧಿಕಾರಿಗಳು ಈ ರೀತಿಯ ಅವಸರದ ತೀರ್ಮಾನ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಜಿಲ್ಲಾಡಳಿತದಿಂದ ಜನರ ಭಾವನೆಗಳಿಗೆ ಧಕ್ಕೆಯಾಗದಂತಹ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ನಂಜನಗೂಡು ಮತ್ತು ಮೈಸೂರಿನಲ್ಲಿನ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು,”ಅಧಿಕಾರಿಗಳು ಹೀಗೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ತಪ್ಪು. ಸುಪ್ರೀಂ ಕೋರ್ಟ್ ಕೂಡಾ ರಸ್ತೆ ಮಧ್ಯದಲ್ಲಿರುವ […]

ಕೊರೋನಾ ಸೋಂಕು ಹೆಚ್ಚಳ : 20 ಮಂದಿ ಕೈದಿಗಳನ್ನು ಬಿಡುಗಡೆ ಮಾಡಿದ ಜಿಲ್ಲಾ ಕಾರಾಗೃಹ

Friday, May 28th, 2021
mandya-jail

ಮಂಡ್ಯ:  ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ನ ನಿರ್ದೇಶನ ಮೇರೆಗೆ ಜಿಲ್ಲಾ ಕಾರಾಗೃಹದಿಂದ 20 ಮಂದಿ ಕೈದಿಗಳನ್ನುಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದ 20 ಮಂದಿಗೆ 45ದಿನಗಳ ಮಧ್ಯಂತರ ಜಾಮೀನು ದೊರಕಿದೆ. ಕೊರೊನಾ ಸೋಂಕು ನಿಮಿತ್ತ ಕೊಲೆ, ದರೋಡೆ, ಸಣ್ಣಪುಟ್ಟಪ್ರಕರಣಗಳು ಸೇರಿದಂತೆ 7 ವರ್ಷ ಮೇಲ್ಮಟ್ಟ ಶಿಕ್ಷೆಯಾಗುವ ಬಂಧಿತರನ್ನು ಹೊರತುಪಡಿಸಿ 7 ವರ್ಷದೊಳಗಿನ ಕಾರಾಗೃಹ ಶಿಕ್ಷೆಯಾಗುವ ನ್ಯಾಯಾಂಗ ಬಂಧಿತರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರಿಂಕೋರ್ಟ್‌ಹಾಗೂ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆಮೇರೆಗೆ ಬಂಧಿತರು ಜಿಲ್ಲಾ ಕಾನೂನುಸೇವೆಗಳ ಪ್ರಾ ಧಿಕಾರಕ್ಕೆ […]

ಮಹದಾಯಿ ಯೋಜನೆ ಕಾಮಗಾರಿ ಸದ್ಯಕ್ಕೆ ಆರಂಭಿಸದಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Monday, March 2nd, 2020
SC

ನವದೆಹಲಿ : ಮಹಾದಾಯಿ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಕರ್ನಾಟಕಕ್ಕೆ ಕೈಗೆ ಬಂದ ತುತ್ತು ಬಾಯಿಗೆ ತಲುಪಲು ಇನ್ನೂ ಸಾಧ್ಯವಾಗುತ್ತಿಲ್ಲ. ಮಹದಾಯಿ ಯೋಜನೆಯನ್ನು ತತ್ಕ್ಷಣವೇ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೊರ್ಟ್ ಸೂಚಿಸಿದೆ. ಮಹದಾಯಿ ಪ್ರಕರಣದಲ್ಲಿ ಕರ್ನಾಟಕದ ಯೋಜನೆಯನ್ನು ಆಕ್ಷೇಪಿಸಿ ಗೋವಾ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆಯನ್ನು ನ್ಯಾ‌.ಚಂದ್ರಚೂಡ್, ನ್ಯಾ.‌ಅಜಯ್ ರಸ್ಟೋಗಿ ದ್ವಿಸದಸ್ಯ ಪೀಠವು ನಡೆಸಿತು. “2014ರ ಮಧ್ಯಂತರ ಆದೇಶದಲ್ಲಿ ನೀಡಿರುವ ನಿರ್ದೇಶನ ಪಾಲಿಸಬೇಕು. ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕು. […]

ಮಹದಾಯಿ ನದಿ ನೀರು ಹಂಚಿಕೆ ವಿವಾದ : ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್​ ಅವಕಾಶ

Thursday, February 20th, 2020
SC

ನವದೆಹಲಿ : ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ಗೋವಾ, ಮಹಾರಾಷ್ಟ್ರ , ಕರ್ನಾಟಕ ಮೂರು ರಾಜ್ಯಗಳಿಗೂ ಸಮರ್ಥ ದಾಖಲೆ ಸಲ್ಲಿಸಲು ಸೂಚಿಸಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಜನರ ಹೋರಾಟಕ್ಕೆ ಕೊನೆಗೂ ಮನ್ನಣೆ ಸಿಕ್ಕಿದಂತಾಗಿದೆ. ಕಳೆದ ವರ್ಷವೇ ಮಹದಾಯಿ ನ್ಯಾಯಾಧೀಕರಣ ತೀರ್ಪು ನೀಡಿದ್ದರೂ ಈ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರಲಿಲ್ಲ. ಇದರಿಂದಾಗಿ ಕರ್ನಾಟಕ ಪಾಲಿನ ನೀರಿನ ಬಳಕೆಯಲ್ಲಿ ತೊಡಗುಂಟಾಗಿತ್ತು ವರ್ಷವೇ […]

ಹೊಸ ವಾದದೊಂದಿಗೆ ಸುಪ್ರೀಂ ಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿರುವ ನಿರ್ಭಯಾ ಅಪರಾಧಿ ಅಕ್ಷಯ್ ಸಿಂಗ್

Thursday, January 30th, 2020
akshay-singh

ನವದೆಹಲಿ : ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಅಕ್ಷಯ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಮತ್ತೋರ್ವ ಅಪರಾಧಿ ವಿನಯ್ ಶರ್ಮಾ ಮತ್ತೆ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಬುಧವಾರವಷ್ಟೇ ಅರ್ಜಿ ಸಲ್ಲಿಸಿದ್ದಾನೆ. ಮತ್ತೋರ್ವ ಅಪರಾಧಿ ಮುಖೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಜಸ್ಟಿಸ್ ಎನ್ ವಿ ರಮಣ ನೇತೃತ್ವದ ಪಂಚ ಸದಸ್ಯರ ಪೀಠದ ಮುಂದೆ ಇಂದು […]

ಅಪರಾಧಿ ಮುಕೇಶ್ ಸಿಂಗ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ವಜಾ : ಗಲ್ಲು ಶಿಕ್ಷೆ ಖಾಯಂ

Wednesday, January 29th, 2020
mukesh

ಹೊಸದಿಲ್ಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಮುಕೇಶ್ ಕುಮಾರ್ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಲಾಗಿದೆ. ನ್ಯಾ.ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರನ್ನು ಒಳಗೊಂಡ ಪೀಠ, ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡಿದರೆಂದರೆ ಅವರು ಅರ್ಜಿಯ ಬಗ್ಗೆ ಕಡೆಗಣಿಸಲಾಗಿದೆ ಎಂದಲ್ಲ. ಆ ಸಂದರ್ಭದಲ್ಲಿ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳಲ್ಲಿ ನೀಡಲಾಗಿರುವ ತೀರ್ಪಿನ ಪ್ರತಿಯನ್ನು ರಾಷ್ಟ್ರಪತಿಗಳ ಮುಂದಿಡಲಾಗಿತ್ತು ಎಂದಿದೆ. ಸರಿಯಾದ ಆಧಾರವಿಲ್ಲದ ಕಾರಣ ಅಪರಾಧಿ ಮುಕೇಶ್ […]

ಇಂದು ಸುಪ್ರೀಂ ಕೋರ್ಟ್ ನಲ್ಲಿ ಶಬರಿಮಲೆ ಮರುಪರಿಶೀಲನಾ ಅರ್ಜಿ ವಿಚಾರಣೆ

Monday, January 13th, 2020
shabarimale

ನವದೆಹಲಿ : ಕೇರಳದ ಪುರಾಣ ಪ್ರಸಿದ್ದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಇಂದು ಸುಪ್ರೀಂ ಕೋರ್ಟ್ ನ ಒಂಬತ್ತು ಸದಸ್ಯರ ಪೀಠದ ಮುಂದೆ ಬರಲಿದೆ. ಮಹಿಳೆಯರ ಪ್ರವೇಶಕ್ಕೆ ಅಸ್ತು ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲಿಸುವಂತೆ ಸುಮಾರು 60 ಅರ್ಜಿಗಳು ಸಲ್ಲಿಕೆಯಾಗಿವೆ. ಕಳೆದ ವರ್ಷದ ನವೆಂಬರ್ 14ರಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಆಗಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ, ಇದನ್ನು ಒಂಬತ್ತು ಸದಸ್ಯರ ಪೀಠಕ್ಕೆ […]

ಅನರ್ಹರ ಆರೋಗ್ಯ ಸರಿಯಿಲ್ಲ, ವೈದ್ಯರ ಬಳಿ ತೋರಿಸೋದು ಒಳ್ಳೆದು : ಅನರ್ಹರಿಗೆ ಟಾಂಗ್ ಕೊಟ್ಟ ರಮೇಶ್ ಕುಮಾರ್

Wednesday, November 27th, 2019
Ramesh-Kumar

ಬೆಳಗಾವಿ : ಅನರ್ಹರ ಆರೋಗ್ಯ ಸರಿಯಿಲ್ಲ, ಅವರನ್ನು ತಲೆಗೆ ಸಂಬಂಧಿಸಿದ ವೈದ್ಯರ ಬಳಿ ತೋರಿಸೋದು ಒಳ್ಳೆದು ಎಂದು ಅಥಣಿಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹರಿಗೆ ಟಾಂಗ್ ಕೊಟ್ಟಿದ್ದಾರೆ. ಅಥಣಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನರ್ಹಗೊಂಡ ನಂತರವೂ ಶಾಸಕರು ತಾವು ಅರ್ಹರು ಎಂದು ಹೇಳಿಕೊಳ್ಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸುಪ್ರೀಂ ಕೋರ್ಟಿನಲ್ಲೂ ಅನರ್ಹಗೊಂಡ ನಂತರ ಅರ್ಹರು ಎಂದು ಹೇಳಿಕೊಳ್ಳುತ್ತಿದ್ದಾರೆ. ಅನರ್ಹರ ಆರೋಗ್ಯ ಸರಿಯಿಲ್ಲ, ಒಳ್ಳೆಯ ತಲೆ ಸಂಬಂಧಿಸಿದ ವೈದ್ಯರಿಗೆ ತೋರಿಸಿ ಎಂದು ಕಾಲೆಳೆದಿದ್ದಾರೆ. ನಾನು […]

ಡಿ.ಕೆ.ಶಿವಕುಮಾರ್ ಗೆ ಇಂದು ಸುಪ್ರೀಂ ಕೋರ್ಟ್​ನಲ್ಲಿ ಇಡಿ ಮೇಲ್ಮನವಿ ಅರ್ಜಿ ವಿಚಾರಣೆ

Friday, November 15th, 2019
DKShi

ನವದೆಹಲಿ : ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದರು. ಈ ಕುರಿತು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವಂತೆ ಡಿ.ಕೆ. […]