ಸಾಹಿತ್ಯ ರಚನೆಯಾದರೆ ಭಾಷೆಯೂ ಬೆಳೆದಂತೆ: ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ

Thursday, September 30th, 2021
Book Release

ಮಂಗಳೂರು: ಸಾಹಿತ್ಯ ಬೆಳೆದಂತೆ ಬಾಷೆಯೂ ಬೆಳೆಯುತ್ತದೆ. ಹೀಗಾಗಿ ಎಲ್ಲಾ ಪ್ರಾಕಾರಗಳಲ್ಲಿ ಸಾಹಿತ್ಯ ರಚನೆಯಾಗಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಆಶಿಸಿದ್ದಾರೆ. ವಿ.ವಿ ಕಾಲೇಜಿನ ಡಾ.ಶಿವರಾಮ ಕಾರಂತ ಸಭಾ ಭವನದಲ್ಲಿ ಗುರುವಾರ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ನಂದಾದೀಪ ಪ್ರಕಾಶನ ಕನ್ಯಾನ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ʼಬೇಲಿʼ ಹಾಗೂ ʼಸಾಪೊದ ಕಣ್ಣ್ʼ ನಾಟಕ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೂಲತಃ ಹವ್ಯಕ ಬಾಷೆಯವರಾದ ಲೇಖಕಿ ಅಕ್ಷತಾರಾಜ್ ಪೆರ್ಲ ಅವರ […]

ʼದೇಶ ಮೊದಲುʼ ಎಂಬ ಭಾವನೆ ನಮ್ಮೆಲ್ಲರಲ್ಲಿ ಮೂಡಲಿ: ಡಾ. ಶಿಕಾರಿಪುರ ಕೃಷ್ಣಮೂರ್ತಿ

Sunday, August 15th, 2021
Konaje University

ಮಂಗಳೂರು: ದೇಶದಲ್ಲಿ ಜನರ ಮೂಲಭೂತ ಅಗತ್ಯಗಳಾದ ಆಹಾರ, ನೀರು ಮತ್ತು ವಿದ್ಯೆ ಉಚಿತವಾಗಿ ಸಿಗುವಂತಾಗಬೇಕು. ಇದನ್ನು ಬಿಟ್ಟು ಎಲ್ಲವನ್ನೂ ವ್ಯಾವಹಾರಿಕ ದೃಷ್ಟಿಯಿಂದ ನೋಡಿದರೆ ಸಮಾಜ ಅಧೋಗತಿಗಿಳಿಯುವುದು ಖಚಿತ, ಎಂದು ನಿವೃತ್ತ ಪ್ರಾಧ್ಯಾಪಕ, ನಟ, ಚಿಂತಕ ಡಾ. ಶಿಕಾರಿಪುರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಎನ್‌ಎಸ್‌ಎಸ್‌ ಮುಂದಾಳತ್ವದಲ್ಲಿ ಆಯೋಜಿಸಲಾಗಿದ್ದ 75 ನೇ ಸ್ವಾತಂತ್ರ್ಯೋತ್ಸವದ ಉದ್ಘಾಟನೆ (ʼಆಜಾದಿ ಕ ಅಮೃತ್‌ ಮಹೋತ್ಸವ್‌ʼ) ನೆರವೇರಿಸಿ ಮಾತನಾಡಿದ ಅವರು, ದೇಶವಾಸಿಗಳು ಸ್ವಾತಂತ್ರ್ಯದ ಮೌಲ್ಯದ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. […]

ಯೋಗ ಉಸಿರಾಟದಷ್ಟೇ ಸಹಜವಾಗಿರಲಿ: ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ

Monday, June 21st, 2021
yadapaditaya

ಮಂಗಳೂರು: ಯೋಗ ಉಸಿರಾಟದಷ್ಟೇ ಸಹಜ ಮತ್ತು ದೈನಂದಿನ ಪ್ರಕ್ರಿಯೆಯಾಗಬೇಕು. ವಿಶೇಷವಾಗಿ ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ದೈಹಿಕ ಆರೋಗ್ಯ ಮತ್ತು ಅದಕ್ಕೆ ಪೂರಕವಾದ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯಂತ ಸೂಕ್ತ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜು ಸೋಮವಾರ ಆನ್‌ಲೈನ್‌ ನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಮ್ಮ ಸ್ವಾಸ್ಥ್ಯಕ್ಕೆ ಅಗತ್ಯವಾದ ಶಾರೀರಿಕ ದಂಡನೆ, ಮಾನಸಿಕ- ಬೌದ್ಧಿಕ ಆರೋಗ್ಯ, ಜೊತೆಗೆ ಆಧ್ಯಾತ್ಮಿಕ ಚಿಂತನೆಗಳಿಗೆ […]