ಮೀನುಗಾರಿಕೆ ಬಂದರ್ ವರೆಗೆ ಸಿಟಿ ಬಸ್

Monday, April 18th, 2011
ಮೀನುಗಾರಿಕೆ ಬಂದರ್ ವರೆಗೆ ಸಿಟಿ ಬಸ್ ಮೀನುಗಾರಿಕೆ ಬಂದರ್ ವರೆಗೆ ಸಿಟಿ ಬಸ್

ಮಂಗಳೂರು : ಮೀನುಗಾರರಿಗೆ ಅನುಕೂಲವಾಗುವಂತೆ ಈ ಹಿಂದೆ ಇದ್ದಂತೆ ರೂಟ್ ಸಂ.26,32 ಹಾಗೂ ಇನ್ನು ಕೆಲವು ಮಾರ್ಗದ ಬಸ್ಸುಗಳನ್ನು ಹಳೆ ಬಂದರು ಪ್ರದೇಶದ ಮೀನುಗಾರಿಕಾ ಬಂದರ್ ವರೆಗೆ ವಿಸ್ತರಣೆ ಮಾಡಲು ಕ್ರಮಕೈಗೊಳ್ಳುವುದಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅವರು ಮೀನುಗಾರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದ್ದಾರೆ. ಅವರು ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೀನುಗಾರಿಕೆಗೆ ಸಂಬಂಧಿಸಿದ ವಿಷಯಗಳ ಕುರಿತ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೀನುಗಾರರ ಸೂಕ್ತ ರಕ್ಷಣೆಗೆ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳನ್ನು ವಿನಂತಿಸಿದರು. ಇತ್ತೀಚೆಗೆ ಮೀನುಗಾರರಿಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಇಳಿಕೆ-ಸುಭೋದ್ ಯಾದವ್

Saturday, December 4th, 2010
ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಒಂದು ಸಾವಿರ ಶಿಶುಗಳ ಜನನದಲ್ಲಿ ಶಿಶು ಮರಣ ಪ್ರಮಾಣ 10-11 ಕ್ಕೆ ಇಳಿದಿದೆಯೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ತಿಳಿಸಿದ್ದಾರೆ. ಅವರು ಇಂದು ನಗರದ ವೆನ್ ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯುನಿಸೆಫ್ ವತಿಯಿಂದ ಆಯೋಜಿಸಿದ್ದ ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆ […]

ಸ್ಥಳೀಯ ಆದ್ಯತೆ ಗಮನದಲ್ಲಿರಿಸಿ ಕಾರ್ಯಕ್ರಮ ರೂಪಿಸಿ-ಸುಭೋದ್ ಯಾದವ್

Saturday, November 13th, 2010
DC Subhod Yadav

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಕಲೆ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕರಾವಳಿ ಉತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಸ್ಥಳೀಯರ ಅಭಿರುಚಿಯನ್ನು ಗಮನದಲ್ಲಿರಿಸಿ ಉತ್ಸವ ಅಚರಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  ಡಿಸೆಂಬರ್ 22 ರಿಂದ ಉತ್ಸವ ಆಚರಿಸಲು ಸಕಲ ಸಿದ್ಧತೆಗಳು ನಡೆಸಿರುವ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಕರಾವಳಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ್ ಯಾದವ್ ಅವರು ಪರಿಶೀಲಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಈ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಬಾರಿಯ ಕರಾವಳಿ […]