Blog Archive

ಸುರತ್ಕಲ್‌ನಲ್ಲಿ ತಾತ್ಕಾಲಿಕವಾಗಿ ನಿರ್ಮಾಣಗೊಂಡಿರುವ ಮಾರುಕಟ್ಟೆಯಲ್ಲಿ; ಎಂಟು ಅಂಗಡಿಗಳಿಗೆ ಹಾನಿ

Wednesday, April 18th, 2018
surathkal

ಮಂಗಳೂರು: ಸುರತ್ಕಲ್‌ನಲ್ಲಿ ತಾತ್ಕಾಲಿಕವಾಗಿ ನಿರ್ಮಾಣಗೊಂಡಿರುವ ಮಾರುಕಟ್ಟೆಯಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಎಂಟು ಅಂಗಡಿಗಳು ಬೆಂಕಿಯಿಂದ ಹಾನಿಗೀಡಾಗಿವೆ. ಘಟನೆಯಲ್ಲಿ ತರಕಾರಿ ಅಂಗಡಿಯೊಂದು ಸೇರಿದಂತೆ 3 ಅಂಗಡಿಗಳು ಸಂಪೂರ್ಣ ಭಸ್ಮವಾಗಿವೆ. ಉಳಿದ ಅಂಗಡಿಗಳಿಗೆ ಹಾನಿಯಾಗಿವೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಸಿಡಿಲು, ಮಿಂಚು ಸಹಿತ ಮಳೆ ಸುರಿದಿದ್ದು, ಈ ವೇಳೆ ಉಂಟಾಗಿರುವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿರಬಹುದೆಂದು ಸುರತ್ಕಲ್ ಠಾಣಾ ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾವ 2 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ […]

ಚುನಾವಣೆ: ಮಂಗಳೂರಿನಲ್ಲಿ ಪ್ಯಾರಾ ಮಿಲಿಟರಿ ಫೋರ್ಸ್ ಭದ್ರತೆ

Friday, April 13th, 2018
election-karnataka

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ಈಗಾಗಲೇ ಪ್ಯಾರಾ ಮಿಲಿಟರಿ ಫೋರ್ಸ್ ಮೊಕ್ಕಾಂ ಹೂಡಿದೆ. ಸುರತ್ಕಲ್ ಪ್ರದೇಶದಲ್ಲಿ ಕೇಂದ್ರೀಯ ಪ್ಯಾರಾ ಮಿಲಿಟರಿ ಪೋರ್ಸ್‌ನಿಂದ ಇಂದು ರೂಟ್ ಮಾರ್ಚ್ ನಡೆಯಿತು. ಸುರತ್ಕಲ್, ಕಾಟಿಪಳ್ಳ, ಕುಳಾಯಿ ಪ್ರದೇಶದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಸುರತ್ಕಲ್ ಪೊಲೀಸರ ಸಹಕಾರದೊಂದಿಗೆ ಪಥ ಸಂಚಲನ ನಡೆಯಿತು. ಸುರತ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಕೆ.ಜಿ. ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಭಾಗದಲ್ಲಿ ರೂಟ್ ಮಾರ್ಚ್ ಮಾಡುವ ಮೂಲಕ […]

ಸುರತ್ಕಲ್‌ನ ತಾತ್ಕಾಲಿಕ ಮಾರುಕಟ್ಟೆ ಉದ್ಘಾಟನೆ

Sunday, March 25th, 2018
Surathkal Market

ಸುರತ್ಕಲ್ : ಸುರತ್ಕಲ್‌ನಲ್ಲಿ ಅತ್ಯಾಧುನಿಕ ಸುಸಜ್ಜಿತ ಮಾರುಕಟ್ಟೆಯನ್ನು ಒಂದೂವರೆ ವರ್ಷದೊಳಗೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಮೊಹಿಯುದ್ದೀನ್ ಬಾವಾ ಹೇಳಿದರು. ಸುರತ್ಕಲ್ ನ ತಾತ್ಕಾಲಿಕ ಮಾರುಕಟ್ಟೆಯನ್ನು ಶನಿವಾರ ಶಾಸಕ ಮೊಹಿಯುದ್ದೀನ್ ಬಾವಾ ಉದ್ಘಾಟಿಸಿ ಮಾತನಾಡಿದರು. ನೂತನ ಮಾರುಕಟ್ಟೆ ನಿರ್ಮಾಣವಾಗುವ ವರೆಗೆ ವ್ಯಾಪಾರಿಗಳ ಹಿತ ದೃಷ್ಟಿಯಿಂದ ಅವರ ಅನುಕೂಲಕ್ಕೆ ತಕ್ಕಂತೆ ಪಾಲಿಕೆ ವತಿಯಿಂದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಹೊಸ ಮಾರುಕಟ್ಟೆ ನಿರ್ಮಾಣವಾದ ಬಳಿಕ ನೂತನ ಮಾರುಕಟ್ಟೆಗೆ ಸ್ಥಳಾಂತರಿಸಲಾಗುವುದು ಎಂದರು. ಅಭಿವೃದ್ಧಿಯಲ್ಲಿ ಜನತೆ ಕೈ ಜೋಡಿಸಿದಾಗ ನಮಗೂ […]

ಹಳೆ ಮಾರುಕಟ್ಟೆ ಧರಾಶಾಹಿ ಕಾಮಗಾರಿ ಆರಂಭ

Thursday, March 22nd, 2018
surathkal

ಸುರತ್ಕಲ್: ಇಲ್ಲಿ ಹೊಸ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಕಾಮಗಾರಿಗಾಗಿ ಹಳೆ ಮಾರುಕಟ್ಟೆ ಧರಾಶಾಹಿ ಕಾಮಗಾರಿ ಆರಂಭಿಸಲಾಗಿದೆ. ಗುರುವಾರ ಪೊಲೀಸ್ ಬಿಗಿಭದ್ರತೆಯಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಪಾಲಿಕೆ ಕಂದಾಯ ಡಿ ಸಿ ಗಾಯತ್ರಿ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಮಾಗಾರಿ ಆರಂಭದ ವೇಳೆ ಸ್ಥಳಕ್ಕಾಗಮಿಸಿದ ಶಾಸಕ ಮೊಯಿದೀನ್ ಬಾವಾ ಬಂದ ಸಂದರ್ಭ ವ್ಯಾಪಾರಿಗಳ ತೀವ್ರ ಆಕ್ರೋಶ ಹೊರ ಹಾಕಿದರು. ಕಾರ್ಪೋರೇಟರ್‌ ಪ್ರತಿಭಾ ಕುಳಾಯಿ ಅವರು ಕಾಮಗಾರಿ ಆರಂಭದ ವೇಳೆ ಹಾಜರಿದ್ದರು.

ಸುರತ್ಕಲ್‌ನಲ್ಲಿ ರಾಹುಲ್ ಗಾಂಧಿ… ಮೋದಿ ವಿರುದ್ಧ ತೀವ್ರ ವಾಗ್ದಾಳಿ

Tuesday, March 20th, 2018
rahul-surathakal

ಮಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸದಲ್ಲಿದ್ದು, ಇಂದು ಕರಾವಳಿಯ ಸುರತ್ಕಲ್‌ಗೆ ಭೇಟಿ ನೀಡಿದರು. ಇಲ್ಲಿ ನಡೆದ ಬೃಹತ್‌ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕರ್ನಾಟಕ‌‌ ಬಸವಣ್ಣ, ನಾರಾಯಣ ಗುರುಗಳು ನಡೆದಾಡಿದ ನಾಡು. ಅವರ ತತ್ವಾದರ್ಶನಗಳನ್ನು ತಮ್ಮ ಭಾಷಣದಲ್ಲಿ ಪ್ರಯೋಗಿಸುವ ಮೋದಿ ಸುಳ್ಳು ಹೇಳುತ್ತಲೇ ಬರುತ್ತಾರೆ. ಬಸವಣ್ಣನ ನುಡಿದಂತೆ ನಡೆ ತತ್ವದಂತೆ ಮೋದಿಯವರೇ ನೀವು ನಡೆದುಕೊಳ್ಳಿ ಎಂದರು. ಪ್ರಧಾನಿಯಾಗುವ ಮುನ್ನ ಪ್ರತಿಯೊಬ್ಬರ […]

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ದೀಪಕ್ ಪೂಜಾರಿ ನೇಮಕ

Friday, March 16th, 2018
congress-club

ಮಂಗಳೂರು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸುರತ್ಕಲ್ ಬ್ಲಾಕಿನ ಹಂಗಾಮಿ ಅಧ್ಯಕ್ಷರಾಗಿ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾಗಿರುವ ದೀಪಕ್ ಪೂಜಾರಿಯವರನ್ನು ಜಿಲ್ಲಾ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಆದೇಶ ಹೊರಡಿಸಿರುತ್ತಾರೆ . ಆದೇಶವನ್ನು ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ಬಿ ರಮಾನಾಥ್ ರೈ ರವರು ಮಂಗಳೂರು ಕಚೇರಿಯಲ್ಲಿ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕರಾದ ಮೊಯ್ದಿನ್ ಬಾವ, ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಹಾಗು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ […]

ಸುರತ್ಕಲ್ ಮಾರುಕಟ್ಟೆ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಸಮಗ್ರ ತನಿಖೆಗೆ ಡಿವೈಎಫ್‌ಐ ಒತ್ತಾಯ

Friday, March 9th, 2018
protest

ಮಂಗಳೂರು: ಸುರತ್ಕಲ್ ಮಾರುಕಟ್ಟೆ ನಿರ್ಮಾಣ ಪ್ರಕ್ರಿಯೆ ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿ ಕಳೆದ ಏಳು ದಿನಗಳಿಂದ ಹಗಲು ರಾತ್ರಿ ಧರಣಿ ನಡೆಸುತ್ತಿರುವ ಡಿವೈಎಫ್‌ಐ ಸಂಘಟನೆ, ತಾತ್ಕಾಲಿಕ ಮಾರಕುಟ್ಟೆ ಕಟ್ಟಡ ನಿರ್ಮಾಣ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಆಗಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ಸುರತ್ಕಲ್‌ನ ಇಂದಿರಾ ಕ್ಯಾಂಟೀನ್ ಬಳಿ ಅನಿರ್ದಿಷ್ಟ ಧರಣಿ ನಡೆಸಲಾಗುತ್ತಿರುವ ಸ್ಥಳದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸುರತ್ಕಲ್ ಮಾರುಕಟ್ಟೆ ಭ್ರಷ್ಟಾಚಾರದ ಆಗರವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ […]

ಮಂಗಳೂರನ್ನು ರಾಜ್ಯದ 2ನೇ ಮುಖ್ಯ ನಗರವನ್ನಾಗಿಸಲು ಪಣ: ಲೋಬೋ

Wednesday, March 7th, 2018
j-r-lobo

ಮಂಗಳೂರು  : ಮಂಗಳೂರನ್ನು ಕರ್ನಾಟಕದ 2ನೇ ಮುಖ್ಯ ನಗರವನ್ನಾಗಿ ಅಭಿವೃದ್ಧಿಪಡಿಸಲು ಎಲ್ಲ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದು ಶಾಸಕ ಜೆ.ಆರ್‌. ಲೋಬೋ ಹೇಳಿದರು. ಬೆಂದೂರ್‌ವೆಲ್‌ ಸೈಂಟ್‌ ಸೆಬಾಸ್ಟಿಯನ್‌ ಪ್ಲಾಟಿನಂ ಜ್ಯೂಬಿಲಿ ಆಡಿಟೋರಿಯಮ್‌ನಲ್ಲಿ ಮಂಗಳವಾರ ನಡೆದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಸ್ಮಾರ್ಟ್‌ ಸಿಟಿ ಯೋಜನೆ, ಅಮೃತ್‌ ಯೋಜನೆ ಸಹಿತ ಹಲವಾರು ಯೋಜನೆಗಳು ಮಂಜೂ ರಾಗಿದೆ. ನಗರದಲ್ಲಿ ಸುಮಾರು 2,500 ಕೋಟಿ ರೂ. ಯೋಜನೆಗಳು […]

ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದ ಕಿಡಿಗೇಡಿಗಳು…!

Saturday, February 3rd, 2018
indira-canteen

ಮಂಗಳೂರು: ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾದ ಇಂದಿರಾ ಕ್ಯಾಂಟೀನ್‌ಗೆ ಮಸಿ ಬಳಿದು ವಿರೂಪಗೊಳಿಸಿದ ಘಟನೆ ನಗರದ ಸುರತ್ಕಲ್‌ನಲ್ಲಿ ನಡೆದಿದೆ. ಇಂದಿರಾ ಕ್ಯಾಂಟೀನ್‌‌ ರಾಜ್ಯವ್ಯಾಪಿ ಸ್ಥಾಪಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲೂ ಕ್ಯಾಂಟೀನ್ ನಿರ್ಮಿಸಲು ಯೋಜಿಸಲಾಗಿದೆ. ಇದರಂತೆ ಸುರತ್ಕಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಇಂದಿರಾ ಕ್ಯಾಂಟೀನ್‌ಗೆ ಹಾಗೂ ಅಲ್ಲಿದ್ದ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದು ವಿರೂಪಗೊಳಿಸಿದ್ದಾರೆ. ಘಟನೆ ತಡರಾತ್ರಿ ನಡೆದಿರಬಹುದೆಂದು ಅಂದಾಜಿಸಲಾಗಿದ್ದು, ಸುರತ್ಕಲ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಾಧನೆಯನ್ನು ಸಹಿಸದ ಕೆಲವು ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ […]

ಗುತ್ತಿಗೆದಾರರು ಸಿಗದೆ ಸಾರ್ವಜನಿಕ ಶೌಚಾಲಯಗಳಿಗೆ ಬೀಗ

Thursday, February 1st, 2018
toilet

ಮಂಗಳೂರು: ಇಲ್ಲಿಯ ಬಸ್‌ ನಿಲ್ದಾಣದ ಸಮೀಪ ಇಟ್ಟ ಇ-ಟಾಯ್ಲೆಟ್‌ ಗೆ ಹೋಗಲು ಮಹಿಳೆಯರು, ವಿದ್ಯಾರ್ಥಿಗಳು ಮುಜುಗರ ಪಡುತ್ತಾರೆ. ಕಾರಣ ಎಲ್ಲರಿಗೂ ಕಾಣುವಂತೆ ಒಳಹೋಗಲು ಸಾರ್ವಜನಿಕರು ಅದರಲ್ಲಿಯೂ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ. ಸುರತ್ಕಲ್‌ ಬಸ್‌ ನಿಲ್ದಾಣದ ಬಳಿ ಇಡಲಾದ ಇ-ಟಾಯ್ಲೆಟ್‌ ಎತ್ತರದಲ್ಲಿದ್ದು, ವಯೋವೃದ್ಧರು ಹತ್ತಲಾರದ ಸ್ಥಿತಿಯಲ್ಲಿದೆ. ಇನ್ನು ಇದಕ್ಕೆ ಎದುರು ಬದಿ ತಡೆಯಿಲ್ಲದ ಕಾರಣ ಎಲ್ಲರ ಮುಂಭಾಗದಲ್ಲಿ ಶೌಚಕ್ಕೆ ಒಳ ಹೋಗಲು ಸಾರ್ವಜನಿಕರು ಮುಜುಗರವಾಗುತ್ತದೆ. ಸುರತ್ಕಲ್‌, ಬೈಕಂಪಾಡಿ ಮತ್ತಿತರೆಡೆ ಲಕ್ಷ ಲಕ್ಷ ಖರ್ಚು ಮಾಡಿ ಸಾರ್ವಜನಿಕ ಶೌಚಾಲಯ ಕಟ್ಟಿದರೂ […]