ನಾಪತ್ತೆಯಾಗಿದ್ದ ಹೆಣ್ಣು ಮಗು ಹೊಳೆಯಲ್ಲಿ ಶವವಾಗಿ ಪತ್ತೆ

Wednesday, August 11th, 2021
Drithvi

ವೇಣೂರು : ಸುಲ್ಕೇರಿ ಗ್ರಾಮದ ಪರಾರಿ ಎಂಬಲ್ಲಿ  ಆ.10 ರ ಮಂಗಳವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಬುಧವಾರ ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗು  ದೃತ್ವಿ ಯೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ ಹಿಂತಿರುಗಿ ಬರುವಷ್ಟರಲ್ಲಿ ಮಗು […]

ನಕ್ಸಲ್ ಪೀಡಿತ ಬೆಳ್ತಂಗಡಿ ಗ್ರಾಮದ ಕೊರಗ ಕಾಲೋನಿಯಲ್ಲಿ ಡೆಂಗ್ಯೂ ಹಾಗೂ ಜ್ವರದ ಭೀತಿ

Wednesday, July 8th, 2020
sulkeri gp

ಬೆಳ್ತಂಗಡಿ  : ನಕ್ಸಲ್ ಪೀಡಿತ ಗ್ರಾಮವಾದ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಕೊರಗ ಕಾಲೋನಿಗೆ ಜನರು ಹೋಗುವುದೆಂದರೆ ಅದು ಸಾಹಸ, ಅದರಲ್ಲೂ ಆಶಾ ಕಾರ್ಯಕರ್ತೆಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಹಗ್ಗದ ಸೇತುವೆ ದಾಟಿ ಅಲ್ಲಿಗೆ ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ. ಸುಲ್ಕೇರಿ ಗ್ರಾಮದ ಕೊರಗ ಕಾಲೋನಿಯಲ್ಲಿ 40 ಕ್ಕೂ ಹೆಚ್ಚು ಗಳು ವಾಸಿಸುತ್ತಿವೆ. ಇಲ್ಲಿರುವ  ಕೆಲ ಕುಟುಂಬಗಳಿಗೆ ಡೆಂಗ್ಯೂ ಸೇರಿದಂತೆ ಜ್ವರದ ಲಕ್ಷಣಗಳೂ ಕಾಣಿಸಿಕೊಂಡಿದೆ. ಮಳೆಯ ನಡುವೆ ರಭಸದಿಂದ ಹರಿಯುವ ಹೊಳೆಯನ್ನು ದಾಟಿ  ಅಲ್ಲಿನ ಜನರಿಗೆ ಬರುವುದು ಅಸಾಧ್ಯವಾಗಿರೋದ್ರಿಂದ ಆಶಾ ಕಾರ್ಯಕರ್ತೆಯರು ಪ್ರತಿದಿನ ಆ […]