ನಗರದ ಸೆಂಟ್ರಲ್ ಮಾರುಕಟ್ಟೆ ಹಳೆ ಕಟ್ಟಡ ನೆಲಸಮ

Wednesday, May 26th, 2021
central Market

ಮಂಗಳೂರು :  ಸ್ಮಾರ್ಟ್ ಸಿಟಿ ಯೋಜನೆಯಡಿ ನೂತನ ಮಾರುಕಟ್ಟೆಯ ಕಟ್ಟಡ ನಿರ್ಮಾಣಕ್ಕಾಗಿ ನಗರದ ಸೆಂಟ್ರಲ್ ಮಾರುಕಟ್ಟೆಯ  ಈಗಿರುವ  ಕಟ್ಟಡವನ್ನು ಬುಧವಾರ ಮೇ 26 ರಂದು ನೆಲಸಮ ಮಾಡಲಾಯಿತು. ಸುಮಾರು 55 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಸೆಂಟ್ರಲ್ ಮಾರುಕಟ್ಟೆಯ ಕಟ್ಟಡ ಪೊಲೀಸ್ ಬಂದೋಬಸ್ತ್‌ನಲ್ಲಿ ಜೆಸಿಬಿ ಬಳಸಿಕೊಂಡು ಬುಧವಾರ ಪೂರ್ವಾಹ್ನ ಸುಮಾರು 11 ಗಂಟೆಗೆ ಒಳಗಿನ ಕಟ್ಟಡವನ್ನು ನೆಲಸಮ ಮಾಡಲಾಯಿತು. ಯಾರೂ ಒಳಗೆ ಪ್ರವೇಶಿದಂತೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರು.  ಈ ಮಧ್ಯೆ ವಿಷಯ ತಿಳಿದ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಮುಖಂಡರು, ಮನಪಾದ ವಿಪಕ್ಷ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸೆಂಟ್ರಲ್ […]

ಕಾಂಗ್ರೆಸ್ ಅವಧಿಯಲ್ಲಿ ಆರಂಭಿಸಿದ ಕೆಲಸಗಳನ್ನೇ ಬಿಜೆಪಿ ಶಾಸಕರು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ : ವಿಪಕ್ಷ ನಾಯಕ

Monday, October 19th, 2020
Ravoof

ಮಂಗಳೂರು : ನಗರದ 8 ಮಾರುಕಟ್ಟೆಗಳಿಗೆ 2017ರಲ್ಲಿಯೇ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು ಅಳಕೆ ಮಾರುಕಟ್ಟೆ ಶಿಲಾನ್ಯಾಸ ಮಾತ್ರ ಹಿಂದಿನ ಅವಧಿಯಲ್ಲಿ ನಡೆದಿರುವುದು ಎಂಬುದಾಗಿ ಮಂಗಳೂರು ದಕ್ಷಿಣ ಶಾಸಕರು ನೀಡಿರುವ ಹೇಳಿಕೆ ಅಪ್ಪಟ್ಟ ಸುಳ್ಳು’’ ಎಂದು ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಅಬ್ದುಲ್ ರವೂಫ್ ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರಾದವರು  ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡಬಾರದು ಅಳಕೆ ಮಾರುಕಟ್ಟೆ ಮಾತ್ರವಲ್ಲದೆ ಸುರತ್ಕಲ್, ಕಾವೂರು, ಉರ್ವಾ, ಜೆಪು, ಬಿಜೈ, ಕಂಕನಾಡಿ ಹಾಗೂ ಕದ್ರಿ ಸೇರಿ […]

ಸೆಂಟ್ರಲ್ ಮಾರುಕಟ್ಟೆಯಲ್ಲಿ ಮತ್ತೆ ವ್ಯವಹಾರ ಆರಂಭಿಸಿದ ವರ್ತಕರು

Thursday, August 13th, 2020
central market

ಮಂಗಳೂರು :  ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಮತ್ತೆ ವ್ಯವಹಾರ ಸುರು ಮಾಡಿದ್ದಾರೆ.   ಮಹಾನಗರ ಪಾಲಿಕೆಯೇ ತಮ್ಮ ಆದೇಶ ವನ್ನು ಹಿಂಪಡೆದಿದೆ  ಎಂದು ಹೇಳಲಾಗುತ್ತಿದೆ. ಆದರೆ ಪಾಲಿಕೆಯ ಅಧಿಕೃತ ಮಾಹಿತಿ ಬಂದಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಡಿ ನೂತನ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಿ ಏಪ್ರಿಲ್ 7ರಿಂದ ನಗರದ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶಿಸಿತ್ತು. ವ್ಯಾಪಾರಿಗಳಿಗೆ ವ್ಯಾಪಾರ ವಹಿವಾಟು ನಡೆಸಲು ಎಪಿಎಂಸಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು.ಆದರೆ, ಎಪಿಎಂಸಿಯಲ್ಲಿ ಬಹಳಷ್ಟು ಅವ್ಯವಸ್ಥೆ ಇದ್ದ ಕಾರಣ ವ್ಯಾಪಾರಿಗಳು ಕೋರ್ಟ್ ಮೆಟ್ಟಿಲೇರಿತ್ತು. ತಮಗೆ ಮತ್ತೆ ಸೆಂಟ್ರಲ್ […]

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸೆಂಟ್ರಲ್ ಮಾರುಕಟ್ಟೆಯಲ್ಲಿ ನಾಲ್ಕು ಅಂಗಡಿಗಳು ಬೆಂಕಿಗಾಹುತಿ

Thursday, December 6th, 2018
central-market

ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ಕು ಅಂಗಡಿಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿಯಾಗಿದೆ. ಜನನಿಬಿಡ ಪ್ರದೇಶವಾಅದ ಕೇಂದ್ರ ಮಾರುಕಟ್ಟೆಯಲ್ಲಿನ ಅಂಗಡಿಗಳಿಗೆ ಬೆಂಕಿ ಹೊತ್ತಿ ಉರಿದು ಭಾರೀ ಹೊಗೆ ಆವರಿಸಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ನಗರದ ಪಾಂಡೇಶ್ವರ ಹಾಗೂ ಕದ್ರಿ ಠಾಣೆಯ ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.ಘಟನೆಯಿಂದ ಅಪಾರ ಹಾನಿ ಸಂಭವಿಸಿದೆ […]

ಮಂಗಳೂರಿನ ಮೆಡಿಕಲ್ ಶಾಪ್​ಗೆ ಬೆಂಕಿ: ಔಷಧಗಳು ಸುಟ್ಟು ಭಸ್ಮ

Wednesday, October 24th, 2018
shop-medical

ಮಂಗಳೂರು: ಇಲ್ಲಿನ ಹಂಪನಕಟ್ಟೆಯಲ್ಲಿರುವ ಸೆಂಟ್ರಲ್ ಮಾರುಕಟ್ಟೆ ರಸ್ತೆಯಲ್ಲಿನ ಮೆಡಿಕಲ್ ಶಾಪ್ಗೆ ಬೆಂಕಿ ಬಿದ್ದು, ಔಷಧಗಳು ಸೇರಿದಂತೆ ಪೀಠೋಪಕರಣಗಳು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ರಾತ್ರಿ 11 ಗಂಟೆಯ ಸುಮಾರಿಗೆ ಸೆಂಟ್ರಲ್ ಮಾರುಕಟ್ಟೆಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ಗೆ ಬೆಂಕಿ ಬಿದ್ದಿದೆ. ಇದರಿಂದ ಮೆಡಿಕಲ್ ಶಾಪಿನ ಎಲ್ಲಾ ಔಷಧಗಳು ಬೆಂಕಿಗಾಹುತಿಯಾಗಿವೆ . ಜೊತೆಗೆ ಪೀಠೋಪಕರಣ ಸೇರಿದಂತೆ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿವೆ. ರಾತ್ರಿಯಾದ್ದರಿಂದ ಮೆಡಿಕಲ್ ಶಾಪ್ನಲ್ಲಿ ಯಾರೂ ಇರಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, […]