ಸಹಕಾರ ಸಂಘದಲ್ಲಿ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರಿಗೆ ಶೋಧ

Tuesday, February 6th, 2024
Kadaba

ಕಡಬ : ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಲಕ್ಷಾಂತರ ರೂಪಾಯಿಗಳನ್ನು ಸಾಲ ಪಡೆದು ಇಬ್ಬರು ವಂಚಿಸಿರುವುದಾಗಿ ದೂರು ದಾಖಲಾಗಿದೆ. ನೆಲ್ಯಾಡಿ ಸಹಕಾರ ಸಂಘ, ಉಪ್ಪಿನಂಗಡಿಯ ಸಹಕಾರಿ ಸಂಘ, ಅಲಂಕಾರು ಸಹಕಾರಿ ಸಂಘಗಳಲ್ಲಿ ಇವರು ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು […]

ಕೊಕ್ಕಡ ಗ್ರಾಮ ಪಂಚಾಯತ್ ಮೇಲೆ ಎಸಿಬಿ ದಾಳಿ: ಪಿಡಿಒ, ಅಧ್ಯಕ್ಷನ ವಿಚಾರಣೆ

Wednesday, February 7th, 2018
arrested

ಮಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡ ಗ್ರಾಮ ಪಂಚಾಯತ್‌ನಲ್ಲಿ ಇಂದು ಎಸಿಬಿ ದಾಳಿ ನಡೆಸಿದೆ. ಲಂಚ ಕೇಳಿದ್ದರೆನ್ನಲಾದ ಪಿಡಿಒ ಪುರುಷೋತ್ತಮ ಹಾಗೂ ಅಧ್ಯಕ್ಷ ಸೆಬಾಸ್ಟಿಯನ್ ಎಂಬುವರನ್ನು ಎಸಿಬಿ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದೆ. ಸ್ಥಳೀಯ ಗುತ್ತಿಗೆದಾರ ಉಮರ್ ಎಂಬುವರ ಕಾಮಗಾರಿಯ ಬಿಲ್ ಪಾಸ್ ಮಾಡಲು 30 ಸಾವಿರ ಲಂಚ ಕೇಳಿದ್ದರು ಎಂದು ಉಮರ್ ಎಸಿಬಿಗೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.