ಷರತ್ತಿಗೊಳಪಟ್ಟು ನಾಳೆಯಿಂದ ಕಾಸರಗೋಡು ಬಸ್ ಸಂಚಾರ ಆರಂಭ

Sunday, July 18th, 2021
KV Rajendra

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, […]

ಕೋವಿಡ್ ನಿರ್ವಹಣೆ ಕುರಿತು ಶಾಸಕರು, ಸಂಸದರೊಂದಿಗೆ ಸಿಎಂ ಸಂವಾದ

Saturday, May 29th, 2021
cm talk

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಸಂಸದರು ಮತ್ತು ಶಾಸಕರೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ – 19ರ ಸೋಂಕು ತಡೆಗಟ್ಟುವ ಕುರಿತಂತೆ ಚರ್ಚೆ ನಡೆಸಿದರು. ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಪಾಸಿಟಿವಿಟಿ ದರ ಶೇಕಡ 10ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಮರಣ ಪ್ರಮಾಣ ರಾಜ್ಯದಲ್ಲಿ ಶೇಕಡ […]

ಕೊತ್ತಂಬರಿ ಸೊಪ್ಪು ಚರ್ಮದ ಶೀಲೀಂದ್ರ ಸೋಂಕು ನಿವಾರಕ ಶಕ್ತಿ ಹೊಂದಿದೆ

Tuesday, May 25th, 2021
Kottambari

ಕೊತ್ತಂಬರಿ ಬೀಜಗಳಲ್ಲಿ ಹಾಗೂ ಪುಡಿಯಲ್ಲಿ ಅಧಿಕ ಪೋಷಕಾಂಶಗಳಿರುತ್ತವೆ. ಕೊತ್ತಂಬರಿ ಬೀಜ ಹಾಗೂ ಪುಡಿಯನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ, ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ನಮ್ಮ ದೇಹದಲ್ಲಿ ಸಂಗ್ರಹವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ಆರೋಗ್ಯ ರಕ್ಷಣೆ ಮಾಡುತ್ತದೆ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ದಿನಂಪ್ರತಿ 1 ಲೋಟ ತಯಾರಿಸಿದ ಕೊತ್ತಂಬರಿ ಪಾನಿಯವನ್ನು […]

ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು

Tuesday, August 18th, 2020
Zameer Ahmed

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಜಮೀರ್ ಅಹಮದ್ ಟ್ವಿಟ್ಟರ್ ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹಮದ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೋವಿಡ್-19 ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

ಕೊರೋನಾ : ಧಾರವಾಡ ಜಿಲ್ಲೆ 191ಸೋಂಕು ಪತ್ತೆ, ಬಲಿ 8

Tuesday, August 4th, 2020
corona positive

ಧಾರವಾಡ : ಸೋಮವಾರ ಜಿಲ್ಲೆಯಲ್ಲಿ 191 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದರ ಜೊತೆಗೆ ಕೋವಿಡ್‌ಗೆ ಮತ್ತೆ 8 ಜನ ಸೋಂಕಿತರು ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 155ಕ್ಕೆ ಏರಿದೆ. 191 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4644 ಕ್ಕೆ ಏರಿಕೆ ಕಂಡರೆ 88 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಗುಣಮುಖರಾದವರ ಸಂಖ್ಯೆ 2152ಕ್ಕೆ ಏರಿದೆ. ಇದರಿಂದ ಈಗ ಜಿಲ್ಲೆಯಲ್ಲಿ 2347 ಪ್ರಕರಣಗಳು ಸಕ್ರಿಯವಾಗಿದ್ದು, 37 ಜನ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ […]

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢ, ಪುತ್ರಿಗೂ ಸೋಂಕು ದೃಢ

Monday, August 3rd, 2020
cm-yediyurappa

ಬೆಂಗಳೂರು :  ಕರ್ನಾಟಕ  ಸಿಎಂ ಯಡಿಯೂರಪ್ಪ ಅವರಿಗೆ  ಕೊರೋನಾ ಸೋಂಕು ದೃಢಪಟ್ಟಿದೆ. ಖುದ್ದು ಸಿಎಂ ಯಡಿಯೂರಪ್ಪ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. “ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕು” ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ […]

ಬೆಳ್ಮಣ್‌ : ಹೊಟೇಲ್ ಉದ್ಯಮಿ ಹಾಗೂ ಪತ್ನಿ, ಮಗಳಿಗೂ ಕೊರೊನಾ ಸೋಂಕು

Wednesday, July 22nd, 2020
belman corona

ಉಡುಪಿ  :  ಹೊಟೇಲ್ ಉದ್ಯಮಿಯೊಬ್ಬರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದು ಎರಡು ದಿನಗಳ ಬಳಿಕ ಆತನ ಪತ್ನಿ ಹಾಗೂ ಮಗಳಿಗೂ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಮಾಜಿ ತಾಲೂಕು ಪಂಚಾಯತಿ ಸದಸ್ಯ ಹಾಗೂ ಹೋಟೆಲ್ ಉದ್ಯಮಿಗೆ ಪಾಸಿಟಿವ್ ವರದಿ ದೃಢವಾದ ಹಿನ್ನಲೆಯಲ್ಲಿ ಬೆಳ್ಮಣ್‌ನಲ್ಲಿ ಅವರು ನಡೆಸುತ್ತಿದ್ದ ಹೊಟೇಲ್ ಹಾಗೂ ಅವರ ವಾಸದ ಬಾಡಿಗೆ ಮನೆಯ ಸಹಿತ ಸುಮಾರು 15 ಮನೆ ಹಾಗೂ 30 ಅಂಗಡಿ ಹಾಗೂ ಎರಡು ಬ್ಯಾಂಕ್‌‌ಗಳನ್ನು ಸೀಲ್ ಡೌನ್ ಮಾಡಲಾಗಿತ್ತು. ಒಂದೇ ಮನೆಯ ಮೂವರಲ್ಲಿ ಕೊರೊನಾ ಸೋಂಕು […]

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊವೀಡ್ -19 ಸೋಂಕು ದೃಢ

Tuesday, July 21st, 2020
Sugunendra Thirtha swamy

ಉಡುಪಿ :  ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಸೋಮವಾರ ರಾತ್ರಿ  ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ. ಸ್ವಾಮೀಜಿಗಳು ಇಂದಿನಿಂದ ಪಾಡಿಗಾರು ಮಠದಲ್ಲಿ ಚಾರ್ತುಮಾಸ […]

ಚೀನಾದಲ್ಲಿ ಮಾರಣಾಂತಿಕ ಕೊರೊನಾ ವೈರಸ್‍ಗೆ 170 ಮಂದಿ ಬಲಿ

Thursday, January 30th, 2020
karona-viras

ಬೀಜಿಂಗ್ : ವಿಶ್ವಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಚೀನಾದಲ್ಲಿ ಕಂಡುಬಂದಿರುವ ಮಾರಣಾಂತಿಕ ಕೊರೋನ್ ವೈರಸ್‍ಗೆ ಬಲಿಯಾದವರ ಸಂಖ್ಯೆ 170ಕ್ಕೆ ಏರಿದೆ. ದಿನೇ ದಿನೇ ಚೀನಾದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈವರೆಗೆ 7,700 ಮಂದಿಗೆ ಸೋಂಕು ತಗುಲಿರುವುದು ಖಚಿತಗೊಂಡಿದೆ. ಇತ್ತ ಭಾರತದಲ್ಲಿ ಸುಮಾರು 670 ಮಂದಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಕೇರಳದಲ್ಲಿಯೇ ಅತಿ ಹೆಚ್ಚು ಅಂದರೆ 633 ಮಂದಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಇನ್ನು ದೆಹಲಿಯಲ್ಲಿ 3, ಪಂಜಾಬ್‍ನಲ್ಲಿ 16, ಹರ್ಯಾಣದಲ್ಲಿ […]