ಸೌದಿ ಅರೇಬಿಯಾದಿಂದ ಬಂದಿದ್ದ ವೃದ್ಧನಿಗೆ ಕೊರೋನಾ ಶಂಕೆ
Tuesday, March 10th, 2020ಕಲಬುರ್ಗಿ : ಕಲಬುರ್ಗಿ ನಗರದಲ್ಲಿ ವೃದ್ದರೊಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿದೆ. ಸೌದಿ ಅರೇಬಿಯಾದಿಂದ ಬಂದಿದ್ದ 75 ವರ್ಷದ ವೃದ್ದನಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅವರ ಗಂಟಲು ದ್ರವ ಸಂಗ್ರಹಿಸಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆ ಲ್ಯಾಬ್ ಗೆ ಕಳುಹಿಸಲಾಗಿದ್ದು, ವರದಿಗಾಗಿ ಜಿಲ್ಲಾ ಆರೋಗ್ಯ ಇಲಾಖೆ ಕಾಯುತ್ತಿದೆ. ಫೆಬ್ರವರಿ 29 ರಂದು ಸೌದಿ ಅರೇಬಿಯಾದಿಂದ ಬಂದಿದ್ದ ವೃದ್ದನಿಗೆ ಮಾರ್ಚ್ 5 ರಂದು ಜ್ವರ, ಶೀತ, ಕೆಮ್ಮು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. […]