ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ :ಮಾರ್ಚ್ 7ರಂದು ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Wednesday, March 6th, 2013
Local bodies election

ಮಂಗಳೂರು : ಮಾರ್ಚ್ 7ರಂದು ನಡೆಯುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 677 ಅಭ್ಯರ್ಥಿಗಳ ಭವಿಷ್ಯ ನಿರ್ಧಾರಗೊಳ್ಳಲಿದೆ. ಅದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಮತಪ್ರಚಾರದಲ್ಲಿ ತೊಡಗಿದ್ದು, ಅಂತಿಮವಾಗಿ ಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದು ಕುತೂಹಲ ಹುಟ್ಟಿಸಿದೆ. ಈ ಚುನಾವಣೆಯು ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪೂರ್ವಭಾವಿಯಾದ ಸೆಮಿಫೈನಲ್ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೋ […]

ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

Saturday, March 2nd, 2013
dco election

ಮಂಗಳೂರು : ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಚುನಾವಣಾ ಆಯೋಗ ರೂಪಿಸಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ದ.ಕ. ಜಿಲ್ಲಾಧಿಕಾರಿ ಎನ್.ಪ್ರಕಾಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕೋರ್ಟ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಚಾರಕ್ಕಾಗಿ ಉಪಯೋಗಿಸುವ ವಾಹನಗಳ ನೋಂದಣಿ ಸಂಖ್ಯೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ನೀಡಿ ಅವರಿಂದ ಅನುಮತಿ ಪತ್ರ ಬರೆದು ಅದನ್ನು ಉಪಯೋಗಿಸುತ್ತಿರುವ ವಾಹನದಲ್ಲಿ ಅಂಟಿಸಿ ಚುನಾವಣಾ ಪ್ರಚಾರ ಮಾಡಲು ಅವಕಾಶವಿದೆ, ಚುನಾವಣಾ ಪ್ರಚಾರಕ್ಕಾಗಿ ಅನುಮತಿ ಪಡೆದ ಧ್ವನಿ ವರ್ಧಕಗಳನ್ನು […]