ಅಂತ್ಯಕ್ರಿಯೆ ಪ್ರಕ್ರಿಯೆಗೆ ಹೊಸ ಆನ್ಲೈನ್ ವ್ಯವಸ್ಥೆ ಜಾರಿ

Tuesday, May 25th, 2021
BBMP

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ವಲಯಗಳಲ್ಲಿ ಕೋವಿಡ್ – 19 ಸಾಂಕ್ರಾಮಿಕ ರೋಗ ಹಾಗೂ ಇತರೆ ಕಾರಣಗಳಿಂದ ಮೃತಪಟ್ಟ ಪ್ರಕರಣಗಳಲ್ಲಿ ಚಿತಾಗಾರ / ಸ್ಮಶಾನಗಳಲ್ಲಿ ಅಂತ್ಯಕ್ರಿಯೆಯನ್ನು ನಡೆಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಲಯ ಕಚೇರಿಗಳ ಆರೋಗ್ಯ ನಿರೀಕ್ಷಕರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಮರಣ ಹೊಂದಿದ ವ್ಯಕ್ತಿಗಳ ಪಾರ್ಥಿವ ಶರೀರವನ್ನು ಚಿತಾಗಾರ / ಸ್ಮಶಾನಕ್ಕೆ ಕಳುಹಿಸುತ್ತಿರುವ ಪ್ರಸ್ತುತ ಪದ್ದತಿಯನ್ನು ಕೈಬಿಡಲಾಗಿದ್ದು, ಈಗಿರುವ […]

ಕೋವಿಡ್ ಸೋಂಕಿತ ವ್ಯಕ್ತಿಯ ಮೃತ ದೇಹ ಅದಲು ಬದಲು, ಮೃತ ವ್ಯಕ್ತಿಯ ಸಂಬಂಧಿಕರ ಆಕ್ರೋಶ

Monday, May 17th, 2021
Dead body

ಕಾರ್ಕಳ: ಆಸ್ಪತ್ರೆ ಸಿಬಂದಿಯ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಶವ ಬದಲಾಗಿರುವುದು ಸಂಬಂಧಿಕರಿಗೆ ತಿಳಿದು ಶವವನ್ನು ವಾಪಸ್ ಕಳಿಸಿದ ಘಟನೆ ಸೋಮವಾರ ನಡೆದಿದೆ. ಅಂತ್ಯ ಸಂಸ್ಕಾರಕ್ಕೆಂದು ಕಾರ್ಕಳದ ಕರಿಯಕಲ್ಲು ಸ್ಮಶಾನಕ್ಕೆ ಮೃತ ದೇಹ ತಂದಿದ್ದ ವೇಳೆ  ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಶೃಂಗೇರಿ ಮೂಲದ 44 ರ ವಯಸ್ಸಿನ ವ್ಯಕ್ತಿ ಕಾರ್ಕಳದ ತನ್ನ ಪತ್ನಿ ಮನೆಗೆ ಬಂದಿದ್ದ ಅವರಿಗೆ ಸೋಂಕು ದೃಢ ಪಟ್ಟಿತ್ತು. ಮಂಗಳೂರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಚಿಕಿತ್ಸೆ […]

ಕೊರೊನಾದಿಂದ ಮೃತ ವ್ಯಕ್ತಿಯನ್ನು ದಫನ ಮಾಡುವುದರಿಂದ ಸೋಂಕು ಹರಡಲ್ಲ : ಜಿಲ್ಲಾಧಿಕಾರಿ

Friday, April 24th, 2020
DC Sindhu

ಮಂಗಳೂರು: ಸೋಂಕಿತ ವ್ಯಕ್ತಿಯ ಮೃತದೇಹವನ್ನು ಹೂಳುವುದು ಅಥವಾ ದಹನ ಮಾಡುವ ಮೂಲಕ ಅಂತ್ಯಕ್ರಿಯೆ ಜರುಗಿಸಬಹುದು. ಹೀಗೆ ದಹಿಸಿದ ಅಥವಾ ದಫನ ಮಾಡಿದ ದೇಹದ ಬೂದಿಯಿಂದ ಮತ್ತೊಬ್ಬರಿಗೆ ಯಾವುದೇ ವೈರಾಣು ಹರಡುವುದಿಲ್ಲ. ಈ ಬೂದಿಯನ್ನು ಸಂಗ್ರಹಿಸಿ ಇತರ ಧಾರ್ಮಿಕ ಆಚರಣೆಗಳನ್ನೂ ನಡೆಸಬಹುದು ಎಂದು ಜಿಲ್ಲಾಧಿಕಾರಿ  ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಿವಾಸಿ 78 ವರ್ಷದ ಮಹಿಳೆ ಕೋವಿಡ್-19ನಿಂದ ಮೃತಪಟ್ಟ ಬಳಿಕ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ಉಂಟಾದ ಗೊಂದಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಕೆಲವು ಮಾಹಿತಿಗನ್ನು ಸಾರ್ವಜನಿಕರಿಗೆ ನೀಡಿದ್ದಾರೆ. ಕೊರೊನಾ ಸೋಂಕಿತರ ಮೃತದೇಹದಿಂದ […]