ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ
Monday, July 26th, 2021ಬೆಂಗಳೂರು: ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ […]