ಶೂಟಿಂಗ್ ವೇಳೆ ಹಂಸಲೇಖಗೆ ಎದೆನೋವು… ಆಸ್ಪತ್ರೆಗೆ ದಾಖಲು
Tuesday, April 10th, 2018ಬೆಂಗಳೂರು: ಸರಿಗಮಪ ಕಾರ್ಯಕ್ರಮದ ಶೂಟಿಂಗ್ ವೇಳೆ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಗೆ ತೀವ್ರ ಎದೆನೋವು ಕಾಣಿಸಿಕೊಂಡ ಪರಿಣಾಮ ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಹಂಸಲೇಖ ಅವರನ್ನು ದಾಖಲಿಸಲಾಗಿದೆ. ಈ ಹಿಂದೆಯೂ ಒಮ್ಮೆ ಹೃದಯ ಸಂಬಂಧಿ ಕಾಯಿಲೆಗೆ ಹಂಸಲೇಖ ಚಿಕಿತ್ಸೆ ಪಡೆದಿದ್ದರು. ಮತ್ತೆ ಈಗ ಎದೆನೋವು ಕಾಣಿಸಿಕೊಂಡಿರುವುದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ.