ರಾಜ್ಯದಾದ್ಯಂತ ರಸ್ತೆ ಅಗಲೀಕರಣಕ್ಕೆ ಪುರಾತನ ದೇವಸ್ಥಾನಗಳ ತೆರವು, ವಿಶ್ವ ಹಿಂದು ಪರಿಷತ್, ಬಜರಂಗದಳ ಖಂಡನೆ
Tuesday, September 14th, 2021ಮಂಗಳೂರು : ರಾಜ್ಯ ಹೆದ್ದಾರಿ-57ರಲ್ಲಿದ್ದ ಹರದನಹಳ್ಳಿ ಉಚ್ಚಗಣಿಯ ಮಹದೇವಮ್ಮ ದೇಗುಲವನ್ನು ಮೈಸೂರು ಜಿಲ್ಲಾಡಳಿತ ಧ್ವಂಸ ಮಾಡಿದ್ದು, ಪೊಲೀಸ್ ಬಂದೋಬಸ್ತ್ನಲ್ಲಿ ಜೆಸಿಬಿ ಮೂಲಕ ಪುರಾತನ ದೇಗುಲ ಕೆಡವಿರುವುರುದನ್ನು ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಜ್ಜಾಗಿದೆ. ಸರಕಾರ ರಾಜ್ಯದಾದ್ಯಂತ ರಸ್ತೆ ಅಗಲೀಕರಣಕ್ಕೆ ಪುರಾತನ ದೇವಸ್ಥಾನಗಳನ್ನು ತೆರವುಗೊಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದನ್ನು ಪ್ರಶ್ನಿಸಿರುವ ವಿಶ್ವ ಹಿಂದು ಪರಿಷತ್, ಬಜರಂಗದಳ ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ […]