ಪುಷ್ಪ ಬೆಳೆಗಾರರ ಆದಾಯ ಕಿತ್ತುಕೊಂಡ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನಿಷೇಧವನ್ನು ಕೂಡಲೇ ಹಿಂಪಡೆಯಿರಿ

Thursday, August 12th, 2021
Flower Marchant

ಬೆಂಗಳೂರು :  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ಬಳಸಬಾರದು ಎಂದಿರುವುದು ಮೊದಲೇ ಲಾಕ್ ಡೌನ್ ಮತ್ತು ಯಾವುದೇ ಸಮಾರಂಭಗಳಿಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾದ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ಮಾಡಿದ ಗಧಾಪ್ರಹಾರ ಎಂದು  ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಸಂಘಟನೆಗಳು ಪ್ರತಿಭಟನೆಗೆ ಇಳಿದಿದೆ. ಕೆಲ ದಿನಗಳ ಹಿಂದೆ ವಿ.ಸುನಿಲ್ ಕುಮಾರ್ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ನೂತನ ಸಚಿವರು ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ವೆಸ್ಟ್, ಅದರ ಬದಲು […]

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ : ಸಿಎಂ ಆದೇಶ

Tuesday, August 10th, 2021
bouquet

ಬೆಂಗಳೂರು : ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು. ಆದೇಶ ಪ್ರಕಟ ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ […]