ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ನಂದಿನಿ ಸಿಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿ

Wednesday, December 23rd, 2020
nandini burfi

ಮಂಗಳೂರು  : ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ ಸಿಹಿ ಉತ್ಸವ ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020 ರಿಂದ 07.01.2020 ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ, ನಂದಿನಿ […]

ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೇರವಾಗಿ ಬ್ಯಾಂಕ್ ಖಾತೆಗೆ ಬಿಡುಗಡೆ

Monday, August 31st, 2020
Raviraj Hegde

ಮಂಗಳೂರು  : ಕರ್ನಾಟಕ ಸರ್ಕಾರವು ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನದ ವಿವರಗಳನ್ನು DBT ಕ್ಷೀರಸಿರಿ ತಂತ್ರಾಂಶದಲ್ಲಿ ಅಳವಡಿಸಿ ನೇರವಾಗಿ ಖಜಾನೆ-2 ದಿಂದ ಪಾವತಿಸುವ ಪದ್ಧತಿಯನ್ನು ಅನುಸರಿಸುತ್ತಿದ್ದು, ಜೂನ್ 2020 ರ ಮಾಹೆಯ ರೂ. 5/- ಪ್ರೋತ್ಸಾಹಧನವನ್ನು ಸದಸ್ಯರುಗಳ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗಿರುತ್ತದೆ ಹಾಗೂ ಸರ್ಕಾರವು ನೀಡುತ್ತಿರುವ ಪ್ರೋತ್ಸಾಹಧನವನ್ನು ಹೈನುಗಾರರು ಪಡೆದುಕೊಂಡು ಉತ್ತಮ ಗುಣಮಟ್ಟದ ಹಾಲನ್ನು ಸಂಘಗಳಿಗೆ ನೀಡಲು ದ.ಕ. ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ. ರವಿರಾಜ್ ಹೆಗ್ಡೆಯವರು ತಮ್ಮ ಪ್ರಕಟಣೆಯಲ್ಲಿ ಕೋರಿರುತ್ತಾರೆ.

ಮಾರ್ಚ್ 29 ಮತ್ತು ಮಾರ್ಚ್ 30; ಹಾಲು ಉತ್ಪಾದಕರಿಂದ ಹಾಲು ಖರೀದಿ ಇಲ್ಲ: ದಕ್ಷಿಣ ಕನ್ನಡ ಹಾಲು ಒಕ್ಕೂಟ

Saturday, March 28th, 2020
milk

ಮಂಗಳೂರು : ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಂದಿನಿ ಹಾಲಿನ ಬೂತ್ ಗಳು ಗ್ರಾಹಕರಿಗೆ ಸೇವೆ ನೀಡಲು ಸಾಧ್ಯವಾಗದೇ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಸಂಪೂರ್ಣವಾಗಿ ಸ್ಥಗಿತಗೊಂಡಿರುತ್ತದೆ. ಈ ಕಾರಣದಿಂದ ಪ್ರಸ್ತುತ ಪರಿಸ್ಥಿತಿಯನ್ನು ಸರಿದೂಗಿಸುವ ಅನಿವಾರ್ಯತೆಯಿಂದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಾರ್ಚ್ 29 ಮತ್ತು ಮಾರ್ಚ್ 30 ರಂದು ಬೆಳಿಗ್ಗೆ ಹಾಗೂ ಸಾಯಂಕಾಲದ ಎರಡೂ ಸರದಿಗಳಲ್ಲಿ ಉಭಯ ಜಿಲ್ಲೆಗಳ ಹಾಲು ಉತ್ಪಾದಕರಿಂದ ಹಾಲು ಖರೀದಿಸುವುದನ್ನು ಸ‍್ಥಗಿತಗೊಳಿಸಿದೆ. ಆದರೆ ಈ ಸಂದರ್ಭದಲ್ಲಿ […]