ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಬಳಸಲು ಸುತ್ತೋಲೆ

Friday, September 20th, 2024
ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಬಳಸಲು ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಶುದ್ದ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು […]

ಭಾವೈಕ್ಯದ ದೀಪಾವಳಿ ಆಚರಣೆ: ವಿಹಿಂಪ ಮತ್ತು ವಿವಿಧ ಹಿಂದೂ ಸಂಘಟನೆಗಳ ವಿರೋಧ

Thursday, October 27th, 2016
kadri-temple

ಮಂಗಳೂರು: ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ಅ. 29ರಂದು ಭಾವೈಕ್ಯದ ದೀಪಾವಳಿ ಆಚರಣೆಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ನಡೆಸುವುದಕ್ಕೆ ವಿಹಿಂಪ ಮತ್ತು ವಿವಿಧ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಹಿಂದೂ ಧಾರ್ಮಿಕ ದತ್ತಿ ಕಾನೂನಿನ ಪ್ರಕಾರ ಅನ್ಯ ಮತೀಯರು ಹಿಂದೂ ದೇವಾಲಯಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ಇರುವುಧಿದಿಲ್ಲ. ಹಿಂದೂಯೇತರರು ಕಾರ್ಯಕ್ರಮ ನಡೆಸುವುದರಿಂದ ದೇವಸ್ಥಾನದ ಆಚಾರ ವಿಚಾರಗಳಿಗೆ ಚ್ಯುತಿ ಬರುತ್ತದೆ ಮತ್ತು ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆ. ಆದ್ದರಿಂದ ಐವನ್‌ ಡಿ’ಸೋಜಾ ಅವರು […]