ದೆಹಲಿಯಲ್ಲಿ ಹಿಂಸಾಚಾರ ಎಸಗಲು ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ 1.61 ಕೋಟಿ ಹಣ ಪಡೆದಿದ್ದ

Tuesday, September 22nd, 2020
delhi riot

ನವದೆಹಲಿ : ಕಾಂಗ್ರೆಸ್‌ನ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್, ಹೋರಾಟಗಾರ ಖಾಲಿದ್ ಸೈಫಿ ಮತ್ತು ಎಎಪಿಯ ಅಮಾನತುಗೊಂಡಿರುವ ಕೌನ್ಸಿಲರ್ ತಾಹಿರ್ ಹುಸೇನ್ ದೆಹಲಿಯಲ್ಲಿ ಹಿಂಸಾಚಾರ ಎಸಗಲು 1.61 ಕೋಟಿ ಹಣ ಪಡೆದಿದ್ದಾರೆ ಎಂದು ದೆಹಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಾಫಿಯಾ ಉರ್ ರೆಹಮಾನ್ ಮತ್ತು ವಿದ್ಯಾರ್ಥಿ ಮೀರನ್ ಹೈದರ್ ಅವರ ಹೆಸರೂ ಹಣಪಡೆದವರ ಪಟ್ಟಿಯಲ್ಲಿ ಇದೆ ಎಂದು ತಿಳಿದು ಬಂದಿದೆ. ಸಿಎಎ ವಿರುದ್ಧದ ಪ್ರತಿಭಟನೆ ವೇಳೆ […]

ಹಿಂಸಾಚಾರ ನಿಂತ ಬಳಿಕವೇ ವಿಚಾರಣೆ : ಸಿಎಎ ಮೇಲ್ಮನವಿ ಬಗ್ಗೆ ಸುಪ್ರೀಂಕೋರ್ಟ್

Thursday, January 9th, 2020
SC

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಸಿಂಧುತ್ವ ಪ್ರಶ್ನಿಸಿ ಹಾಗೂ ಸಿಎಎ ಸಂವಿಧಾನಬದ್ಧ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಸಾಚಾರ ನಿಂತ ಬಳಿಕವೇ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಗುರುವಾರ ತಿಳಿಸಿದೆ. ದೇಶ ಪ್ರಸ್ತುತ ಸಂದಿಗ್ಧ ಕಾಲಘಟ್ಟದಲ್ಲಿದೆ. ಇಂತಹ ಮೇಲ್ಮನವಿಗಳಿಂದ ಸಹಾಯವಾಗಲ್ಲ. ಹೀಗಾಗಿ ಹಿಂಸಾಚಾರ ನಿಂತ ನಂತರವೇ ಸಿಎಎ ಕುರಿತ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ ಎ ಬೋಬ್ಡೆ ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬದ್ಧ ಎಂದು ಘೋಷಿಸಬೇಕು. ಅಲ್ಲದೇ ಕಾನೂನಿನ ಕುರಿತು ಪ್ರತಿಭಟನೆ […]

ಹಿಂಸಾತ್ಮಕ ಘಟನೆ ಕೈ ಮೀರಿದ್ದೇ ಇಬ್ಬರ ಮೃತ್ಯುವಿಗೆ ಕಾರಣ : ಸಿ.ಎಂ

Saturday, December 21st, 2019
Yediyurappa

ಮಂಗಳೂರು : ಗುರುವಾರ ನಡೆದ  ಹಿಂಸಾತ್ಮಕ ಘಟನೆಯ ವೇಳೆ ಗುಂಪೊಂದು ಕಾನೂನು ಕೈಗೆತ್ತಿಕೊಂಡು ನಗರದ ನೆಲ್ಲಿಕಾಯಿ ರಸ್ತೆ, ರಾವ್ ಅಂಡ್ ರಾವ್ ಸರ್ಕಲ್, ಬಂದರು ಉತ್ತರ ಠಾಣೆ,  ಅಝೀಝುದ್ದೀನ್ ರಸ್ತೆ, ಜೆಎಂ ರಸ್ತೆ, ಬಿಬಿ ಅಲಾಬಿ ರಸ್ತೆ ಮೊದಲಾದೆಡೆ ಸಾರ್ವಜನಿಕ ಆಸ್ತಿಯನ್ನು ಪುಡಿ ಗೈದಿದ್ದು ಅಲ್ಲದೆ ಕರ್ತವ್ಯ ನಿರತ ಪೋಲೀಸರ ಮೇಲೆ ಮಾರಕ ಅಸ್ತ್ರಗಳಿಂದ ಹಲ್ಲೆ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಮುಂದಾದ ಘಟನೆಗಳಿಂದ ಇಬ್ಬರು ಬಲಿಯಾಗಿದ್ದಾರೆ ಎಂದು  ಸಿ.ಎಂ ಬಿ.ಎಸ್ ಯುಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಘಟನೆಯಲ್ಲಿ ಬಲಿಯಾಗಿರುವ  ಇಬ್ಬರ ಕುಟುಂಬಕ್ಕೆ ಕಾನೂನು […]

ಹಿಂಸಾಚಾರ:ಅಂಗಡಿ,ಗುಡಿಗಳ ಮೇಲೆ ಕಲ್ಲು ತೂರಾಟ

Wednesday, December 13th, 2017
sirsi

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಆರಂಭವಾದ “ಕೋಮು ಜ್ವಾಲೆ’ ಈಗ ಶಿರಸಿಗೂ ವ್ಯಾಪಿಸಿದೆ. ಪರೇಶ ಮೇಸ್ತ ಹತ್ಯೆ ಖಂಡಿಸಿ ಮಂಗಳವಾರ ಕರೆ ನೀಡಿದ್ದ ಶಿರಸಿ ಬಂದ್‌ ಹಿಂಸಾಚಾರಕ್ಕೆ ತಿರುಗಿದ್ದು, ಅಂಗಡಿ, ಪ್ರಾರ್ಥನಾ ಮಂದಿರ, ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿ ಬೆಂಕಿ ಹಚ್ಚಲಾಗಿದೆ. ಈ ವೇಳೆ ಎಂಟಕ್ಕೂ ಅಧಿಕ ಸಾರಿಗೆ ಸಂಸ್ಥೆ ಬಸ್‌ಗಳಿಗೆ ಹಾನಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಅಶ್ರು ವಾಯು ಪ್ರಯೋಗಿಸಿದ ಪೊಲೀಸರು ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌, ಬಜರಂಗ ದಳ, ಹಿಂದೂ […]

ಬೆಂಗಳೂರಿನ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ

Tuesday, September 13th, 2016
karpue

ಬೆಂಗಳೂರು: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಕಂಡಲ್ಲಿ ಗುಂಡಿಗೆ ಆದೇಶ ನೀಡಲಾಗಿದೆ. ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾ ಲೇಔಟ್, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಪೀಣ್ಯ, ಆರ್‌ಎಂಸಿ ಯಾರ್ಡ್, ನಂದಿನಿ ಲೇಔಟ್, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿ, ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗರಿ ರಸ್ತೆ ಮತ್ತು ರಾಜಾಜಿನಗರ. ಕರ್ಫ್ಯೂ […]

ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಎಸಗುವ ಮತೀಯ ಶಕ್ತಿಗಳ ವಿರುದ್ಧ ಜಾಗೃತರಾಗಬೇಕು: ರಮಾನಾಥ ರೈ

Wednesday, August 24th, 2016
Rai

ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಎಸಗುವ ಮತೀಯ ಶಕ್ತಿಗಳ ವಿರುದ್ಧ ಪ್ರಜ್ಞಾವಂತರು ಜಾಗೃತರಾಗಬೇಕು ಹಾಗೂ ಅವರನ್ನು ದೂರವಿಡಬೇಕು ಎಂದು ರಾಜ್ಯ ಅರಣ್ಯ, ಪರಿಸರ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ನಗರದ ಸರ್ಕಿಟ್‌ ಹೌಸ್‌ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಉಭಯ ಜಿಲ್ಲೆಗಳಲ್ಲಿ, ಧರ್ಮ, ದೇವರು, ದೇಶಪ್ರೇಮ, ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ನೋವು ತರುವ ವಿಚಾರ. ಕೆಂಜೂರಿನಲ್ಲಿ ನಡೆದಿರುವ ಪ್ರವೀಣ್‌ ಪೂಜಾರಿ ಹತ್ಯೆ ಗೋರಕ್ಷಕರ […]

ಮತ ಎಣಿಕೆಯ ಬೆನ್ನಲ್ಲೆ ವ್ಯಾಪಕ ಹಿಂಸಾಚಾರ; ದಿಕ್ಕೆಟ್ಟ ಜನತೆ

Thursday, May 19th, 2016
Kerala Counting

ಕುಂಬಳೆ: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆಯ ದಿನವಾದ ಗುರುವಾರ ಜಿಲ್ಲೆಯಾದ್ಯಂತ ಹಲವೆಡೆ ವ್ಯಾಪಕ ಹಿಂಸಾಚಾರಗಳು ನಡೆದು ಜನ ಸಾಮಾನ್ಯರು ಅಕ್ಷರಶಃ ಕಂಗೆಟ್ಟು ಸಂಕಷ್ಟ ಅನುಭವಿಸಿದ ಸ್ಥಿತಿ ನಿರ್ಮಾಣವಾಯಿತು. ಮಂಜೇಶ್ವರ,ಕಾಸರಗೋಡು ಮತ್ತು ಉದುಮ ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ ನಡೆದ ಕಾಸರಗೋಡು ಸರಕಾರಿ ಕಾಲೇಜಿನ ಆವರಣದಲ್ಲಿ ಗುರುವಾರ ಬೆಳಿಗ್ಗೆಯೇ ಜಮಾಯಿಸಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರು ತೀವ್ರ ಕುತೂಹಲಿಗಳಾಗಿ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾತರಿಸುತ್ತಿದ್ದು ಕಂಡುಬಂತು.ವಿದ್ಯಾನಗರ ಸರಕಾರಿ ಕಾಲೇಜು ಪರಿಸರದಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ಮುಗಿಲುಮುಟ್ಟಿದ […]

ಅಯೋಧ್ಯೆಯ ಐತಿಹಾಸಿಕ ತೀರ್ಪಿಗಾಗಿ ಕಾತರಗೊಂಡ ದೇಶದ ಜನತೆ

Thursday, September 30th, 2010
ಅಯೋಧ್ಯೆಯ ಐತಿಹಾಸಿಕ ತೀರ್ಪು

ನವ ದೆಹಲಿ : ಹದಿನೆಂಟು ವರ್ಷದ ಹಿಂದೆ ನೆಲ ಸಮ ಗೊಂಡ ಅಯೋಧ್ಯೆಯ ವಿವಾದಿತ ರಾಮಜನ್ಮಭೂಮಿ-ಬಾಬ್ರಿ ಮಸೀದಿಗೆ ಸಂಬಧಿಸಿದ ಪ್ರಕರಣಕ್ಕೆ ಇಂದು ಅಲಹಾಬಾದ್‌ ನ್ಯಾಯಾಲಯ ತೀರ್ಪು ನೀಡಲಿದೆ. ಈ  ಐತಿಹಾಸಿಕ ತೀರ್ಪಿಗಾಗಿ  ದೇಶದ ಜನತೆ ಕಾತರರಾಗಿದ್ದಾರೆ. ಅಲಹಾಬಾದ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ಧರಮ್ ವೀರ್ ಶರ್ಮಾ, ಎಸ್‌.ಯು ಖಾನ್ ಹಾಗೂ ಸುಧೀರ್ ಅಗರ್‌ವಾಲ್ ತೀರ್ಪು ಪ್ರಕಟಿಸಲಿದ್ದು,  ಈ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆಯನ್ನು ವಹಿಸಲಾಗಿದೆ. ನ್ಯಾಯಾಲಯದ ಆವರಣದ ಸುತ್ತಲಿನ ಪ್ರದೇಶಕ್ಕೆ ನಿರ್ಭಂಧ ಹೇರಲಾಗಿದೆ. ಹಿಂಸಾಚಾರ ಭುಗಿಲೇಳುವ ಸಾಧ್ಯತೆಗಳಿಂದಾಗಿ […]