ಎಸ್ಎಸ್ಎಲ್ಸಿ ಪರೀಕ್ಷೆ : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಪೊಲೀಸ್ ಕಾವಲು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 350 ವಿದ್ಯಾರ್ಥಿಗಳು ಗೈರು

Monday, March 28th, 2022
sslc Exam

ಮಂಗಳೂರು : ವಿವಾದದ ಕೇಂದ್ರವಾಗಿರುವ ಹಿಜಾಬ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೇಂದ್ರಗಳ ಆವರಣದವರೆಗೂ ಹಿಜಾಬ್ ಧರಿಸಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರು ಬಳಿಕ ಹಿಜಾಬ್ ತೆಗೆದಿರಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಇದೇ ವೇಳೆ ಖಾಸಗಿ ಶಾಲೆಗಳ, ಸಮವಸ್ತ್ರ ಜತೆಗೆ ಹಿಜಾಬ್ ಭಾಗವಾಗಿರುವ ಶಾಲೆಗಳ ವಿದ್ಯಾರ್ಥಿನಿಯರು ತಮ್ಮ ಶಾಲೆಯ ಮುಖ್ಯಸ್ಥರ ಅನುಮತಿ ಮೇರೆಗೆ ಹಿಜಾಬ್ ನೊಂದಿಗೆ ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭಆರಂಭ ಗೊಂಡಿದ್ದು ,ಇಂದು ಪ್ರಥಮ ಭಾಷಾ ಪರೀಕ್ಷೆ  ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29,712 ವಿದ್ಯಾರ್ಥಿಗಳು […]

ಹಿಜಾಬ್ ಇಲ್ಲದೆ ತರಗತಿಗಳಿಗೆ ತೆರಳಲು ಒಪ್ಪಿದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು

Monday, March 21st, 2022
Hijab

ಪುತ್ತೂರು :  ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಸೋಮವಾರದಿಂದ  ತರಗತಿಗಳಿಗೆ ಹಾಜರಾಗಿದ್ದಾರೆ. ಕಾಲೇಜು ಆಡಳಿತದ ಆದೇಶ ವಿರೋಧಿಸಿ ವಿದ್ಯಾರ್ಥಿಗಳು ತರಗತಿ ಮತ್ತು ಪರೀಕ್ಷೆಗಳನ್ನು ಬಹಿಷ್ಕರಿಸಿದ್ದರು. ಇತ್ತ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪರ ಮಾತುಕತೆ ನಡೆಸಿದ ಮುಖಂಡರಿಗೆ ಕಾಲೇಜಿನ ಆಡಳಿತ ಮಂಡಳಿಯು ನಾವು ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಹೈಕೋರ್ಟ್‌ನ ಆದೇಶಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗಬಾರದೆಂದು ಹೇಳಿತ್ತು. ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮುಖಂಡರು ಮಾತುಕತೆ ನಡೆಸಿ […]

ಮುಸ್ಲಿಂ ಮೂಲಭೂತವಾದಿ ಸಂಘಟನೆಗಳ ವಾದದಿಂದ ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ : ಬೃಂದಾ ಕಾರಟ್

Monday, March 21st, 2022
brinda karat

ಮಂಗಳೂರು:  ಮುಸ್ಲಿಂ ಮೂಲಭೂತವಾದಿ ಸಂಘಟನೆಗಳಾದ ಪಿಎಫ್ಐ, ಎಸ್ ಡಿಪಿಐ ಮೊದಲಾವುಗಳು ಹಿಜಾಬ್ ಕುರಿತ ತೀರ್ಪಿನ ವಿಚಾರಗಳನ್ನು ವಿರೋಧಿಸುವುದರೊಂದಿಗೆ ಹೆತ್ತವರು, ವಿದ್ಯಾರ್ಥಿನಿಯರಿಗೆ ಒತ್ತಡ ಹೇರುವ ಕೆಲಸ ಮಾಡುತ್ತಿದೆ. ಆ ಮೂಲಕ ಮೂಲಭೂತವಾದಿಗಳ ಪ್ರಮುಖ ಆಶಯವಾಗಿರುವ ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿಸುವ ಕೆಲಸವೂ ನಡೆಯುತ್ತಿದೆ. ಹೆಣ್ಣು ಮಕ್ಕಳು ಹಿಜಾಬ್ ಧರಿಸಬೇಕೇ ಬೇಡವೇ ಎಂದು ಹೆತ್ತವರು ತೀರ್ಮಾನಿಸಲಿ ಎಂದು ಪಾಲಿಟ್ ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಆರೋಪಿಸಿದ್ದಾರೆ. ಸಿಪಿಐಎಂ ವತಿಯಿಂದ ಸೋಮವಾರ ಮಂಗಳೂರಿನ ಪುರಭವನದಲ್ಲಿ ಜರುಗಿದ ಸೌಹಾರ್ದ ಸಮಾವೇಶದಲ್ಲಿ ಅವರು ಮಾತನಾಡಿದರು. ದೇಶಗಳಲ್ಲಿ ಸೌಹಾರ್ದ‌ತೆ ಕದಡುವಲ್ಲಿ, ಬಾಹ್ಯ ಶಕ್ತಿಗಳಿಗಿಂತ ಆಂತರಿಕ‌‌ […]

ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ, ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ : ಕಲ್ಲಡ್ಕ ಪ್ರಭಾಕರ್ ಭಟ್

Sunday, March 20th, 2022
Prabhakara Bhat

ಮಂಗಳೂರು : ಹಿಜಾಬ್ ಬೇಕು ಎನ್ನುವ ಎಸ್‍ಡಿಪಿಐಗೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾಗೆ ಹಿಜಾಬ್ ಹಾಕಿಸುವ ತಾಕತ್ತು ಇದೆಯೇ? ಹಿಜಾಬ್ ಹಾಕಲೇಬೇಕೆಂದು ಮುಸ್ಲಿಮರಿಗೆ ಇದ್ದರೆ ಅವರು ಮುಸ್ಲಿಂ ರಾಷ್ಟ್ರಗಳಿಗೆ ಹೋಗಲಿ. ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳದ ಬ್ಯಾರಿಗಳೊಂದಿಗೆ ಸ್ನೇಹ ಬೆಳೆಸುವ ಮೊದಲು ಆಲೋಚನೆ ಮಾಡಬೇಕಾಗಿದೆ. ಹಿಜಾಬ್ ವಿಚಾರದಲ್ಲಿ ಮುಸಲ್ಮಾನರು ನ್ಯಾಯಾಲಯ, ಸಂವಿಧಾನ ಕಡೆಗಣಿಸಿ ಅಗತ್ಯ ಸೇವೆಯನ್ನು ಬಂದ್ ಮಾಡಿದರು. ಇವರು ಹಿಂದೂಗಳ ಜತೆ ಮಾಡುವುದು ಡೋಂಗಿ ದೋಸ್ತಿ ಎಂದು ಆರೆಸೆಸ್ಸ್ ಮುಖಂಡ‌ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು. ವಿಶ್ವ ಹಿಂದೂ […]

ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಹಿಜಾಬ್ ಧರಿಸುವುದು ಧಾರ್ಮಿಕ ಆಚರಣೆಯಲ್ಲ – ಹೈಕೋರ್ಟ್

Tuesday, March 15th, 2022
Hijab Ban

ಬೆಂಗಳೂರು: ಉಡುಪಿಯ ಕಾಲೇಜೊಂದರ ಆರು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ನಿರಾಕರಿಸಿದ ಕಾಲೇಜು ಆಡಳಿತವನ್ನು ವಿರೋಧಿಸಿ ಕರಾವಳಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ವಿವಾದ ಆರಂಭಸಿತ್ತು. ಬಳಿಕ ನಡೆದ ಬೆಳವಣಿಗೆಗಳಲ್ಲಿ ವಿವಾದ ಕೋರ್ಟ್ ಮೆಟ್ಟಲೇರಿತ್ತು. ಈಗ ಹೊರಬಿದ್ದ ಕೋರ್ಟ್ ತೀರ್ಪಿನಂತೆ  ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಸಮವಸ್ತ್ರವನ್ನು ಕಡ್ಡಾಯ ಮಾಡುವುದು ಸಂವಿಧಾನದ 19 (1) (ಎ) ಮತ್ತು 25 ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ […]

ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬಂದ 49 ವಿದ್ಯಾರ್ಥಿನಿಯರು ಮನೆಗೆ

Wednesday, February 16th, 2022
Hijab Students

ಮಂಗಳೂರು : ಬುಧವಾರ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬಂದ 49 ವಿದ್ಯಾರ್ಥಿನಿಯರು ಪ್ರವೇಶ ನಿರಾಕರಿಸಿದ್ದಕ್ಕಾಗಿ ಹಿಂತಿರುಗಿ ಮನೆಗೆ ತೆರಳಿದ್ದಾರೆ. ಮಂಗಳೂರು ಕಾರ್‌ಸ್ಟ್ರೀಟ್‌ನ ದಯಾನಂದ ಪೈ ಪದವಿ ಕಾಲೇಜಿನ ಇಬ್ಬರು, ಮುಡಿಪು ಪದವಿ ಕಾಲೇಜಿನ 22, ಮೊಂಟೆಪದವು ಕಾಲೇಜಿನ 11, ಪೊಂಪೈ ಕಾಲೇಜಿನ 26, ಇಂದಿರಾ ನಗರ ಪದವಿ ಕಾಲೇಜಿನ 15 ಹಾಗು ಮೂಡುಬಿದಿರೆ ಮಹಾವೀರ ಕಾಲೇಜಿನ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಮುಡಿಪು ಪದವಿ ಕಾಲೇಜು ಹಾಗು ಮೊಂಟೆಪದವು ಕಾಲೇಜಿನ ವಿದ್ಯಾರ್ಥಿನಿಯರು ಆಡಳಿತ ಮಂಡಳಿ ಹಾಗು ಪ್ರಾಂಶುಪಾಲರ ಸೂಚನೆ […]

‘ಬುಲ್ ಶಿಟ್’ ಎಂದು ಶಿಕ್ಷಕಿಯನ್ನು ಅವಮಾನಿಸಿದ ಹಿಜಾಬ್ ಹಾಕಿದ ವಿದ್ಯಾರ್ಥಿನಿ

Thursday, February 10th, 2022
Hijab student

ಕಾರ್ಕಳ:  ಕಾರ್ಕಳದ ಕಾಲೇಜೊಂದರಲ್ಲಿ ನಡೆದ ಗಲಾಟೆಯ ವಿಡಿಯೋ ಇದೀಗ ವೈರಲ್‌ ಆಗಿದ್ದು ಹಿಜಾಬ್ ಹಾಕಿದ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿಯನ್ನು ಅವಮಾನಿಸಿರುವುದು ಬಯಲಾಗಿದೆ. ಮಂಗಳವಾರ (ಫೆ.8) ಎಂಜಿಎಂ ಕಾಲೇಜಿನಲ್ಲಿ ನಡೆದ ಘಟನೆಯ ವಿಡಿಯೋ ಇದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೋದಲ್ಲಿ, ಹಿಜಾಬ್‌, ಬುರ್ಖಾ ಹಾಕಿಕೊಂಡು ಬಂದ ಕೆಲ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಗಲಾಟೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ನಯನಾ ಎಂಬ ಶಿಕ್ಷಕಿ ಮಕ್ಕಳನ್ನು ತಣ್ಣಗಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಯಾರೂ ಗಲಾಟೆ ಮಾಡಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಈ […]

ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿ ಮಾಡುತ್ತಿರುವುದು ದೇಶಕ್ಕೆ ಅವಮಾನ : ಡಿ ಕೆ ಶಿವಕುಮಾರ್

Monday, February 7th, 2022
DK Shivakumar

ಮಂಗಳೂರು : ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿ ಮಾಡುತ್ತಿರುವುದು ದೇಶಕ್ಕೆ ಅವಮಾನ, ವಿಶ್ವದ ಭೂಪಟದಲ್ಲಿ ಭಾರತವನ್ನು ಗುರುತಿಸುವ ಮೊದಲು ಜನ ಕರ್ನಾಟಕದತ್ತ ನೋಡುತ್ತಿದ್ದರೂ. ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ  ಅದರಲ್ಲೂ ಕರಾವಳಿ ಶಿಕ್ಷಣ, ವೈದ್ಯಕೀಯ ಕ್ಷೇತ್ರದ ಮೂಲಕದ ಮಹತ್ವದ ಕೊಡುಗೆ ನೀಡಿದ ಪ್ರದೇಶ. ಇಲ್ಲಿ ಎಲ್ಲಾ ಧರ್ಮದ ಜನರು ಪರಸ್ಪರ ಗೌರವದೊಂದಿಗೆ ಅವರವರ ಧಾರ್ಮಿಕ ಆಚಾರ ವಿಚಾರಗಳೊಂದಿಗೆ ಸೌಹಾರ್ದತೆಯೊಂದಿಗೆ ಬದುಕಬೇಕೆನ್ನುವುದು ಕಾಂಗ್ರೆಸ್ ಆಶಯ. ನ್ಯಾಯಾಲಯ ಮೇಲೆ ನಮಗೆ […]