ಮಹಾಪ್ರಸಾದ ಸೇವೆಗೆ ಚಾಲನೆ ನೀಡಿ ಸ್ವತಃ ಉಣಬಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

Monday, September 11th, 2023
laxmi Hebbalkar

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಭೇಟಿ ನೀಡಿ ದರ್ಶನ ಆಶೀರ್ವಾದ ಪಡೆದರು. ಶ್ರಾವಣದ ಕೊನೆಯ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಅವರು, ಸ್ವತಃ ಭಕ್ತಾದಿಗಳಿಗೆ ಪ್ರಸಾದವನ್ನು ಉಣಬಡಿಸಿದರು. ಗ್ರಾಮದ ಹಿರಿಯರು, ಯುವರಾಜ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಕೋಲಕಾರ, ಉಮೇಶರಾವ್ ಜಾಧವ್, ಅಪ್ಸರ್ ಜಮಾದಾರ, […]

ಮಂಗಳೂರು ಮಿನಿ ವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಮೂವರು ಹಿರಿಯ ನಾಗರಿಕರು

Saturday, July 10th, 2021
mangaloreMiniVidhanaSoudha

ಮಂಗಳೂರು: ನಗರದ ಮಿನಿ ವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಮೂವರು ಹಿರಿಯ ನಾಗರಿಕರನ್ನು ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಕಚೇರಿ ಕೆಲಸದಲ್ಲಿ ಮಿನಿ ವಿಧಾನಸೌಧಕ್ಕೆ ಬಂದಿದ್ದ ಮೂವರು ಹಿರಿಯ ನಾಗರಿಕರು ಲಿಫ್ಟ್ ಹತ್ತಿದ್ದರು. ಇವರಲ್ಲಿ ಒಬ್ಬರು ಮಹಿಳೆ, ಇಬ್ಬರು ಪುರುಷರಿದ್ದರು. ಇವರು ಲಿಫ್ಟ್ ಏರಿದ ಕೆಲವೇ ಕ್ಷಣಗಳಲ್ಲಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು. ವಿಷಯ ತಿಳಿದ ಅಧಿಕಾರಿಗಳು ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಿಫ್ಟ್‌ನಲ್ಲಿ ಸಿಲುಕಿದ್ದವರನ್ನು ರಕ್ಷಿಸಿದರು. ತಾಂತ್ರಿಕ ದೋಷದಿಂದ ಲಿಫ್ಟ್ ಕೆಟ್ಟಿರಬಹುದು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ

Friday, June 18th, 2021
vaccination

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ,ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಇವರ […]