ರಂಗಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ ಎಸ್ ನಾಗಾಭರಣ
Monday, June 21st, 2021ಬೆಂಗಳೂರು : ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎಂದು ಹಿರಿಯ ರಂಗಕರ್ಮಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್ ನಾಗಾಭರಣ ಅಭಿಪ್ರಾಯಪಟ್ಟರು. ಇಂದು ವೆಬಿನಾರ್ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಸುರಾನಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಾಗೂ ಎರಡೂ ಕಾಲೇಜುಗಳ ಐ.ಕ್ಯೂ.ಎ.ಸಿ ಸಮಿತಿಯ ಸಹಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಪ್ರದರ್ಶನ […]