ಪ್ರೀತ್ಸೆ ಪ್ರೀತ್ಸೆ ಅಂತ ಅಪ್ರಾಪ್ತೆ ಹಿಂದೆ ಬಿದ್ದ ಪಡ್ಡೆ ಹುಡುಗ ; ಮುಂದೇನಾಯ್ತು ?

Friday, January 24th, 2020
Nagendra

ಮೈಸೂರು: ಇಂದಿನ ಕಾಲದಲ್ಲಿ ಪ್ರೀತಿ ಎಂದರೆ ಎರಡು ಹೃದಯಗಳ ನಡುವಿನ ಬಾಂಧವ್ಯವಲ್ಲ. ಬದಲಿಗೆ ಬಲವಂತವಾಗಿ ಗಳಿಸುವ ಬಾಂಧವ್ಯ ಎಂದೇ ಕೆಲವರು ಭಾವಿಸಿಕೊಂಡಿರುತ್ತಾರೆ. ಜತೆಗೇ ಕೆಲ ಚಲನಚಿತ್ರಗಳು ಕೂಡ ಇಂತಹ ಮನಸ್ಥಿತಿ ಹೊಂದಲು ನೀರು ಎರೆಯುತ್ತಿವೆ. ಈ ರೀತಿ ತನ್ನನ್ನು ಪ್ರೀತಿಸುವಂತೆ ಅಪ್ರಾಪ್ತೆಯನ್ನು ಪೀಡಿಸುತಿದ್ದ ಪಡ್ಡೆ ಹುಡುಗನೊಬ್ಬ ಇದೀಗ ಪೋಲೀಸರ ಅತಿಥಿ ಆಗಿದ್ದಾನೆ. ಹುಣಸೂರು ತಾಲೂಕಿನ ಕಲ್ಕುಣಿಕೆ ಸುಣ್ಣದಗೂಡಿನ ನಿವಾಸಿ ನಾಗೇಂದ್ರ ಎಂಬ ಯುವಕ ಬಂಧಿತ ಆರೋಪಿ ಅಗಿದ್ದು ಈತ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತೆಯ […]

ರೈತನ ಮೇಲೆ ಕಾಡಾನೆ ದಾಳಿ, ಟೈರ್‌ಗೆ ಬೆಂಕಿ ಹಚ್ಚಿ ಗ್ರಾಮಸ್ಥರು ಆಕ್ರೋಶ

Thursday, November 28th, 2019
elephant-attack

ಮೈಸೂರು : ಜಮೀನಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತರೋರ್ವರು ಗಾಯಗೊಂಡ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ರೈತರನ್ನು ರಾಘವೇಂದ್ರ(38 ) ಎಂದು ಗುರುತಿಸಲಾಗಿದ್ದು ಗುರುವಾರ ಬೆಳಿಗ್ಗೆ ಅವರು ಜಮೀನಿಗೆ ತೆರಳುವಾಗ ಏಕಾಏಕಿ ಕಾಡಾನೆಯೊಂದು ದಾಳಿ ಮಾಡಿದೆ. ಇದರಿಂದ ರಾಘವೇಂದ್ರ ಅವರ ಮುಖ ಹಾಗೂ ಸೊಂಟಕ್ಕೆ ಗಂಭೀರ ಗಾಯಗಳಾಗಿದೆ. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಭಾಗದಲ್ಲಿ ಪದೇ ಪದೇ ಆನೆಗಳ ದಾಳಿಯ […]

ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ : ಶಪಥ ಮಾಡಿದ ಹೆಚ್.ವಿಶ್ವನಾಥ್

Saturday, November 16th, 2019
H.Vishwanath

ಮೈಸೂರು : ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮತ್ತೆ ಮೈಸೂರು ವಿಭಜನೆಯ ಕೂಗು ಎತ್ತಿದ್ದು, ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುವ ಕುರಿತು ಶಪಥ ಮಾಡಿದ್ದಾರೆ. ಹುಣಸೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅಖಾಡಕ್ಕಿಳಿದ ಮೊದಲ ದಿನವೇ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರ ಪ್ರಸ್ತಾಪ ಮಾಡಿದ್ದಾರೆ. ನಾನು ಹುಣಸೂರಿನಿಂದ ಗೆದ್ದು ಮಂತ್ರಿಯಾಗುತ್ತೇನೆ. ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ. ಇದು ನನ್ನ ಶಪಥ ಎಂದು ಭರವಸೆ ನೀಡಿದ್ದಾರೆ. ನನ್ನದು ಬರೀ ಮಾತು, ಟೀಕೆಯಲ್ಲ. ನಾನು ಕನಸುಗಾರ ಪ್ರತ್ಯೇಕ ಜಿಲ್ಲೆಯ […]

ಅಂಬೇಡ್ಕರ್ ಅವರನ್ನು ಮರೆತರೆ ನಮಗೆ ನಾವೇ ಅನ್ಯಾಯ ಮಾಡಿಕೊಂಡಂತೆ : ಮಾಜಿ ಸಿಎಂ ಸಿದ್ದರಾಮಯ್ಯ

Monday, October 14th, 2019
saddaramaih

ಮೈಸೂರು : ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರನ್ನು ಮರೆತರೆ ನಮಗೆ ನಾವೇ ಅನ್ಯಾಯ ಮಾಡಿಕೊಂಡಂತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಟಿ.ನರಸೀಪುರದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ರಾಜಕೀಯ ಸ್ವಾತಂತ್ರ್ಯ ಕೇವಲ ಮತ ಹಾಕುವಾಗ ಮಾತ್ರ ಇರುತ್ತದೆ. ನಾವೆಲ್ಲ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ದೇಶದಲ್ಲಿ ಸಂವಿಧಾನ ಬದಲಾವಣೆ ಮಾಡಲು ಯಾರಾದರೂ ಹೋದರೆ ರಕ್ತಪಾತವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅಂಬೇಡ್ಕರ್ ಒಂದು ಜಾತಿಗೆ ಸಿಮೀತವಾಗಿಲ್ಲ. […]

ಸಾರಿಗೆ ಬಸ್- ಟಿಪ್ಪರ್ ಮುಖಾಮುಖಿ ಡಿಕ್ಕಿ: ಎರಡೂ ವಾಹನಗಳು ಹಳ್ಳಕ್ಕೆ!

Monday, October 29th, 2018
accident

ಮೈಸೂರು: ಸಾರಿಗೆ ಬಸ್- ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದು, ಎರಡೂ ವಾಹನಗಳು ಹಳ್ಳಕ್ಕೆ ಬಿದ್ದ ಘಟನೆ ಹುಣಸೂರು ರಸ್ತೆಯಲ್ಲಿ ನಡೆದಿದೆ. ಹುಣಸೂರು ಮುಖ್ಯರಸ್ತೆ ಬಿಳಿಕೆರೆ ಸಮೀಪದ ಮಲ್ಲಿನಾಥಪುರದ ಬಳಿ ಘಟನೆ ನಡೆದಿದ್ದು, ಈ ಅವಘಡದಿಂದ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಪಿರಿಯಾಪಟ್ಟಣದಿಂದ ಮೈಸೂರು ಕಡೆ ಬರುತ್ತಿದ್ದ ಸರ್ಕಾರಿ ಬಸ್ಗೆ ಎದುರಿನಿಂದ ಹೋಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ಹಳ್ಳಕ್ಕೆ ಉರುಳಿ ಬಿದ್ದಿವೆ. ಅಪಘಾತದಿಂದ ಬಸ್ನಲ್ಲಿದ್ದ ಓರ್ವ ಯುವತಿ ಸ್ಥಿತಿ ಗಂಭೀರವಾಗಿದ್ದು, ಓರ್ವ ಬಾಲಕಿಗೆ ಸಣ್ಣಪುಟ್ಟ […]