ಬೈಕ್ಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು
Monday, November 26th, 2018
ಹುಬ್ಬಳ್ಳಿ: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡರುವ ಘಟನೆ ಹುಬ್ಬಳ್ಳಿಯ ಹೊರವಲಯದ ಗದಗ ರಸ್ತೆಯಲ್ಲಿ ನಡೆದಿದೆ. ಚಿನ್ನಪೇಟೆ ನಿವಾಸಿ ವೆಂಕಟೇಶ ಸಾಲಗಾರ(50) ಮೃತ ದುರ್ದೈವಿ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒಂದು ಬೈಕ್ನಲ್ಲಿ ಮೂರು ಜನ, ಇನ್ನೊಂದು ಬೈಕ್ನಲ್ಲಿ ಇಬ್ಬರು ಇದ್ದರು ಎನ್ನಲಾಗಿದೆ. ಈ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.