ಜ್ಯೋತಿಷಿ ಪ್ರಭಾವದಿಂದ ಡಿವೋರ್ಸ್ : ರಾಡ್​ನಿಂದ ಹಲ್ಲೆ ಮಾಡಿದ ವ್ಯಕ್ತಿ

Tuesday, March 23rd, 2021
Astrologer

ಬಂಟ್ವಾಳ: ವರ್ಷದ ಹಿಂದೆ  ತನ್ನ ಪತ್ನಿ ಬಿಟ್ಟು ಹೋಗಲು ಜ್ಯೋತಿಷಿಯೇ ಕಾರಣ ಎಂದು ಆರೋಪಿಸಿ ರಾಡ್ನಿಂದ ಹಲ್ಲೆಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಸಿ. ರೋಡ್ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಎಂಬಾತನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷ್ಯದ ಮೂಲಕ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದ. ತನ್ನ ಹೆಂಡತಿ ಬಿಟ್ಟು ಹೋಗಲು ಕಾರಣವಾಗಿದ್ದ ಎಂಬ ಕೋಪದಲ್ಲಿ ಪ್ರಭು, […]

ಹೆಂಡತಿಯೊಂದಿಗೆ ಕಾಲ ಕಳೆಯದ ಗಂಡ, ನೊಂದು ಆತ್ಮಹತ್ಯೆ

Wednesday, January 27th, 2021
Pallavi

ಕಾರವಾರ: ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದ ಗಂಡನಿಂದ ಬೇಸತ್ತ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದಲ್ಲಿ ನಡೆದಿದೆ. ಮೂಲತಃ ಶಿರಸಿ ತಾಲೂಕಿನ ಗಿಡಮಾವಿನಕಟ್ಟೆಯ ನಿವಾಸಿಯಾಗಿದ್ದ ಪಲ್ಲವಿ ವಿಜಯ ದೇವಾಡಿಗ (27) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಎರಡು ವರ್ಷಗಳಿಂದ ಪತಿಯೊಂದಿಗೆ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಪತಿ ತನ್ನ ಜೊತೆ ಹೆಚ್ಚಿನ ಸಮಯ ಕಳೆಯುವುದಿಲ್ಲ ಎಂದು ಕೊರಗುತ್ತಿದ್ದರು. ಇಂದು ಪತಿ ಗೆಳೆಯರೊಂದಿಗೆ ಕ್ರಿಕೆಟ್ ನೋಡಲು ತೆರಳಿದ್ದರಿಂದ ಪಲ್ಲವಿ ಸಿಟ್ಟಾಗಿದ್ದರು. […]

ಹೆಂಡತಿ ಹಾಗೂ ಎರಡು ವರ್ಷದ ಮಗಳಿಗೆ ವಿಷ ನೀಡಿ ಆತ್ಮಹತ್ಯೆಗೆ ಶರಣಾದ ಉದ್ಯೋಗಿ

Saturday, July 25th, 2020
Mounesh Pattara

ಧಾರವಾಡ: ಶನಿವಾರ ಬೆಳ್ಳಂಬೆಳಿಗ್ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೀಡಾದವರನ್ನು ಟಾಟಾ ಮಾರ್ಕೋಪೋಲೋ ಕಂಪನಿಯ ಉದ್ಯೋಗಿ ಮೌನೇಶ್ ವೀರಪ್ಪ ಪತ್ತಾರ ( 36 ) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದವರು. ಟಾಟಾ ಮಾರ್ಕೋಪೋಲೋ ಕಂಪೆನಿಯ ಉದ್ಯೋಗಿಯಾಗಿದ್ದರಿಂದ ಧಾರವಾಡದಲ್ಲಿ ನೆಲೆಸಿದ್ದರು. ಕಂಪನಿಯ 50ಕ್ಕೂ ಹೆಚ್ಚು ನೌಕರರಿಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಆತಂಕಗೊಂಡಿದ್ದ ಈ ನೌಕರ, ಎಲ್ಲಿ ತಮ್ಮ ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]