ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ : ಮಾಜಿ ಸಚಿವ ಹೆಚ್.ಎಂ ರೇವಣ್ಣ

Friday, February 14th, 2020
revanna

ರಾಯಚೂರು : ಸಚಿವ ಆನಂದ್ ಸಿಂಗ್‍ಗೆ ಅರಣ್ಯ ಇಲಾಖೆ ಖಾತೆ ನೀಡಿದ್ದು ಕಳ್ಳನ ಕೈಗೆ ಕೀಲಿ ಕೈ ಕೊಟ್ಟಂತೆ ಆಗಿದೆ ಅಂತ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಗಣಿ ವ್ಯವಾಹಾರದಲ್ಲಿ ಸ್ವಲ್ಪ ಅರಣ್ಯ ಅಸ್ತವ್ಯಸ್ತವಾಗುವುದು ಸರಿ ಅಂತ ಹೇಳೋ ಸಚಿವನಿಂದ ಏನನ್ನು ನಿರೀಕ್ಷೆ ಮಾಡಬಹುದು ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ವಿಳಂಬ ಮಾಡಿದ್ದು ನೋಡಿದರೆ ಇಂಥ ಪರಿಸ್ಥಿತಿ ಯಾರಿಗೂ ಬರೋದು ಬೇಡ. ವಿಶ್ವನಾಥ್ ಸ್ಥಿತಿಯಂತೂ ಕೇಳೋದೇ […]

ಚನ್ನಪಟ್ಟಣ ಕ್ಷೇತ್ರದಿಂದ ಹೆಚ್‌‌.ಎಂ.ರೇವಣ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್‌‌‌ ಚಿಂತನೆ?

Wednesday, April 11th, 2018
h-m-revanna

ಬೆಂಗಳೂರು: ಜಿದ್ದಾಜಿದ್ದಿಯ ಅಖಾಡವಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಹೆಚ್.ಎಂ.ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಸಿ.ಪಿ.ಯೋಗೇಶ್ವರ್‌ಗೆ ಪ್ರಬಲ ಸ್ಪರ್ಧೆ ಒಡ್ಡಲಿದ್ದಾರೆ. ಚನ್ನಪಟ್ಟಣದಲ್ಲಿ ರೇವಣ್ಣ ಅವರನ್ನು ನಿಲ್ಲಿಸಲು ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಹೋದರರು ಸಮ್ಮತಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ನಲ್ಲೇ ಇದ್ದು, ಪಕ್ಷಾಂತರವಾಗಿ ಕಾಂಗ್ರೆಸ್ ವಿರುದ್ಧವೇ ಹರಿಹಾಯ್ದಿದ್ದ ಸಿ.ಪಿ.ಯೋಗೇಶ್ವರ್‍ ಅವರನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲಿ ತಂತ್ರ ಹೆಣೆದಿದ್ದು, ಅದರಂತೆ […]

ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ರಸ್ತೆಗೆ ಇಳಿಯಲಿವೆ ಎಲೆಕ್ಟ್ರಾನಿಕ್‌ ಬಸ್‌‌‌ಗಳು!

Tuesday, January 2nd, 2018
electric-bus

ಬೆಂಗಳೂರು: ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಾನಿಕ್ ಬಸ್‌‌‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದು ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೊದಲ ಹಂತವಾಗಿ ಬೆಂಗಳೂರು ನಗರದ ಕೆಲವು ಮಾರ್ಗ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಡಿ ಬೆಂಗಳೂರು-ಮೈಸೂರು, ಬೆಂಗಳೂರು-ತುಮಕೂರು-ಕೋಲಾರ ನಗರಗಳ ನಡುವೆ ಎಲೆಕ್ಟ್ರಾನಿಕ್ ಬಸ್ ಸಂಚಾರ ನಡೆಸಲಿವೆ ಎಂದರು. ರಾಷ್ಟ್ರದಲ್ಲಿ ಮೊದಲಿಗೆ ಈ ಸೌಲಭ್ಯ ತರುತ್ತಿರುವ ರಾಜ್ಯ ಕರ್ನಾಟಕವಾಗಲಿದೆ. ಪ್ರತಿ ಬಸ್‍ಗೆ ಮೂರು ಕೋಟಿ ರೂ. ವೆಚ್ಚ […]